ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಶ್ಮಿಕಾ ಮಂದಣ್ಣ ಮತ್ತೊಮ್ಮೆ ಟಾರ್ಗೆಟ್ ; ಡೀಪ್ ಫೇಕ್ ವಿಡಿಯೋ ವೈರಲ್..!

Twitter
Facebook
LinkedIn
WhatsApp
ರಶ್ಮಿಕಾ ಮಂದಣ್ಣ ಮತ್ತೊಮ್ಮೆ ಟಾರ್ಗೆಟ್ ; ಡೀಪ್ ಫೇಕ್ ವಿಡಿಯೋ ವೈರಲ್..!

ಹೆಸರಾಂತ ನಟಿ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ತಿಂಗಳ ಹಿಂದೆಯಷ್ಟೇ ಇವರ ಡೀಪ್‌ಫೇಕ್ ವಿಡಿಯೋ ಸಾಕಷ್ಟು ಸದ್ದು ಮಾಡಿತ್ತು. ಸರಕಾರದ ಮಟ್ಟದಲ್ಲಿ ಚರ್ಚೆಗೂ ಕಾರಣವಾಗಿತ್ತು. ಆದರೂ, ಅದನ್ನು ತಡೆಯಲು ಸಾಧ್ಯವಾಗಿಲ್ಲ ಎನ್ನುವುದಕ್ಕೆ ಹರಿಬಿಟ್ಟ ಮತ್ತೊಂದು ವಿಡಿಯೋ ಸಾಕ್ಷಿಯಾಗಿದೆ.

ರಶ್ಮಿಕಾ ಮಂದಣ್ಣ ಮತ್ತೊಮ್ಮೆ ಟಾರ್ಗೆಟ್ ; ಡೀಪ್ ಫೇಕ್ ವಿಡಿಯೋ ವೈರಲ್..!

ತಿಂಗಳ ಹಿಂದೆಯಷ್ಟೇ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್‌ಫೇಕ್ ವಿಡಿಯೋ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ರಶ್ಮಿಕಾ ಪರ ಅನೇಕರು ಮಾತನಾಡಿದ್ದರು. ದುರುಳರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ಕೇಂದ್ರ ಸರಕಾರ ಕೂಡ ಇದನ್ನು ಗಂಭೀರವಾಗಿ ತೆಗೆದುಕೊಂಡು, ಡೀಪ್‌ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಹೇಳಿತ್ತು. ಆದರೂ, ಡೀಪ್‌ಫೇಕ್ ಕಾಟ ಮುಂದುವರೆದಿದೆ.

ರಶ್ಮಿಕಾ ಮಂದಣ್ಣ ಮತ್ತೊಮ್ಮೆ ಟಾರ್ಗೆಟ್ ; ಡೀಪ್ ಫೇಕ್ ವಿಡಿಯೋ ವೈರಲ್..!

ಡೀಪ್‌ನೆಕ್ ಬ್ಲಾಕ್ ಡ್ರೆಸ್‌ನಲ್ಲಿದ್ದ ಯುವತಿಯೊಬ್ಬರ ವಿಡಿಯೋವನ್ನು ಥೇಟ್ ರಶ್ಮಿಕಾ ಮಂದಣ್ಣ ಅವರಂತೆ ಮಾರ್ಫ್ ವಿಡಿಯೋ ಸೃಷ್ಟಿಸಿದ್ದರು. ವಿಡಿಯೋದಲ್ಲಿರುವುದು ರಶ್ಮಿಕಾ ಅಲ್ಲ, ಜರಾ ಪಟೇಲ್ ಎನ್ನುವುದು ಗೊತ್ತಾಗಿತ್ತು. ಡೀಪ್‌ಫೇಕ್ ತಂತ್ರಜ್ಞಾನ (Deepfake Technology) ಬಳಸಿ ರಶ್ಮಿಕಾ ಹೆಸರಿಗೆ ಮಸಿ ಬಳಿಯಲು ಕಿಡಿಗೇಡಿಗಳು ಯತ್ನಿಸಿದ್ದಕ್ಕೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು

ಸೂಪರ್ ಸ್ಟಾರ್, ನಟ ಅಮಿತಾಬ್ ಕೂಡ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಬೆನ್ನಲ್ಲೇ ಈ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದೊಂದು ಅತ್ಯಂತ ಅಪಾಯಕಾರಿ ಕೃತ್ಯ. ಇಂತಹ ಮಾರ್ಫಿಂಗ್ ವಿಡಿಯೋಗಳ ನಿಯಂತ್ರಣ ಸಾಮಾಜಿಕ ಜಾಲತಾಣಗಳ (Social Media) ಹೊಣೆ. ಅಪ್‌ಲೋಡ್ ಆದ 36 ಗಂಟೆಗಳಲ್ಲಿ ಇವುಗಳನ್ನು ತೊಲಗಿಸದಿದ್ದರೆ ಅಂತಹ ಸಾಮಾಜಿಕ ಜಾಲತಾಣವನ್ನು ಕೋರ್ಟ್‌ಗೆ ಎಳೆಯಬಹುದು ಎಂದು ಸ್ಪಷ್ಟಪಡಿಸಿದೆ.

ರಶ್ಮಿಕಾ ಮಂದಣ್ಣ ಮತ್ತೊಮ್ಮೆ ಟಾರ್ಗೆಟ್ ; ಡೀಪ್ ಫೇಕ್ ವಿಡಿಯೋ ವೈರಲ್..!

ಏನಿದು ಡೀಪ್‌ಫೇಕ್?

ಯಾರದ್ದೋ ದೇಹಕ್ಕೆ ಯಾರದ್ದೋ ತಲೆಯನ್ನು ಫೋಟೋ ಎಡಿಟಿಂಗ್‌ ಟೂಲ್‌ ಮೂಲಕ ಜೋಡಿಸುವುದು ಹಳೇಯ ವಿಚಾರ. ಈ ಫೋಟೋಗಳನ್ನು ನೋಡುವಾಗ ಸ್ವಲ್ಪವಾದರೂ ಅನುಮಾನ ಬರುತ್ತದೆ. ಆದರೆ ಡೀಪ್‌ ಫೇಕ್‌ ತಂತ್ರಜ್ಞಾನದಲ್ಲಿ ಯಾವುದೇ ಅನುಮಾನ ಬಾರದಂತೆ ಫೋಟೋ ಅಲ್ಲ ವಿಡಿಯೋವನ್ನೇ ಸೃಷ್ಟಿ ಮಾಡಲಾಗುತ್ತದೆ. ವಿಡಿಯೋ ಎಷ್ಟು ನೈಜತೆ ಇರುತ್ತದೆ ಅಂದರೆ ವ್ಯಕ್ತಿಯ ದೇಹಕ್ಕೂ ಮತ್ತು ಮುಖಕ್ಕೆ ನೇರ ಸಂಬಂಧ ಇದ್ದಂತೆ ಇರುತ್ತದೆ. ಮೂಲ ವಿಡಿಯೋ ಬೇರೆ ಆಗಿದ್ದರೂ ಈ ವ್ಯಕ್ತಿಯೇ ವಿಡಿಯೋದಲ್ಲಿ ನಟಿಸುತ್ತಿದ್ದಂತೆ ಬಿಂಬಿಸಲಾಗುತ್ತದೆ.

ರಶ್ಮಿಕಾ ಮಂದಣ್ಣ ಮತ್ತೊಮ್ಮೆ ಟಾರ್ಗೆಟ್ ; ಡೀಪ್ ಫೇಕ್ ವಿಡಿಯೋ ವೈರಲ್..!

ಆರ್ಟಿಫಿಷಿಯಲ್ ಇಂಟೆಲಿಜೆನ್ಸ್+ಮೆಷಿನ್ ಲರ್ನಿಂಗ್ ಸಹಾಯದಿಂದ ಮಾರ್ಫಿಂಗ್ ವಿಡಿಯೋ, ಫೋಟೋಗಳು ಸೃಷ್ಟಿ ಮಾಡುವುದಕ್ಕೆ ಡೀಪ್‌ಫೇಕ್‌ ಎಂದು ಕರೆಯಲಾಗುತ್ತದೆ. ಒಬ್ಬ ಒಬ್ಬ ವ್ಯಕ್ತಿಯಂತೆಯೇ ಸೇಮ್ ಟು ಸೇಮ್ ಡೂಪ್ ಸೃಷ್ಟಿಸಬಹುದು. ಥಟ್ಟನೇ ನೋಡಿದಾಗ ಯಾವುದೇ ವ್ಯತ್ಯಾಸವೇ ಗೊತ್ತಗುವುದಿಲ್ಲ. ಮೃತ ನಟನನ್ನು ಮತ್ತೆ ಸ್ಕ್ರೀನ್‌ ಮೇಲೆ ಮೇಲೆ ಈ ತಂತ್ರಜ್ಞಾನದ ಸಹಾಯದಿಂದ ತೋರಿಸಬಹುದು.

ಹಿಂದಿ, ಇಂಗ್ಲೀಷ್ ಮಾತ್ರ ಬರುವ ವ್ಯಕ್ತಿಗೆ ಕನ್ನಡದಲ್ಲಿ ಮಾತನಾಡಿದಂತೆಯೂ ತೋರಿಸಬಹುದು. ಈ ತಂತ್ರಜ್ಞಾನದಿಂದ ಎಷ್ಟು ಲಾಭ ಇದೆಯೋ ಅಷ್ಟೇ ನಷ್ಟವಿದೆ. ದುರ್ಬಳಕೆ ಕೂಡ ಹೆಚ್ಚಾಗುತ್ತಿದೆ. ಈ ಹಿಂದೆ ಡೀಪ್ ಫೇಕ್ ಹಾವಳಿಗೆ ಹಾಲಿವುಡ್ ನಟ ಟಾಮ್ ಹ್ಯಾಂಕ್ಸ್ ತುತ್ತಾಗಿದ್ದರು. ಡೀಪ್‌ಫೇಕ್ ಬಳಸಿ ಟಾಮ್ ಹ್ಯಾಂಕ್ಸ್ ಯಾವುದೇ ಜಾಹೀರಾತಿನಲ್ಲಿ ನಟಿಸಿದಂತೆ ಮಾಡಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist