ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Ration Card: ಇಂದಿನಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ

Twitter
Facebook
LinkedIn
WhatsApp
Ration Card: ಇಂದಿನಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವ ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದೆ. ಏಪ್ರಿಲ್ 1 ಅಂದರೆ ನಾಳೆಯಿಂದ ಹೊಸ BPL/APL ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಪೋರ್ಟಲ್ ಆರಂಭವಾಗಲಿದೆ. ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್‌ www.ahara.kar.nic.in ಮೂಲಕ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು.

ಪಡಿತರ ಚೀಟಿ ಪಟ್ಟಿಯಲ್ಲಿ ಹೆಸರಿಲ್ಲದ ಜನರು ಅಗತ್ಯವಿರುವ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ತಮ್ಮ ಅರ್ಜಿಯ ಸ್ಥಿತಿಗತಿಯನ್ನೂ ಪರಿಶೀಲಿಸಬಹುದು. ಕರ್ನಾಟಕದಲ್ಲಿ ಹೊಸ BPL/APL ಪಡಿತರ ಚೀಟಿಗೆ ಹೇಗೆ ಅರ್ಜಿ ಸಲ್ಲಿಸಬೇಕು? ಅದಕ್ಕೆ ಬೇಕಿರುವ ದಾಖಲೆಗಳು ಯಾವುವು? ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಹೇಗೆ?
 
  • ಮೊದಲು ನೀವು  www.ahara.kar.nic.in  ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
  • ಮುಖಪುಟದಲ್ಲಿ ಕಾಣಿಸುವ ʼಇ-ಸೇವೆಗಳುʼ ಆಪ್ಶನ್ ಕ್ಲಿಕ್ ಮಾಡಿ.
  • ಇದಲ್ಲದೇ https://ahara.kar.nic.in/Home/EServices ಆಪ್ಶನ್‌ಗೂ ನೇರವಾಗಿ ಕ್ಲಿಕ್ ಮಾಡಬಹುದು.
  • ಇ-ಪಡಿತರ ಚೀಟಿ ಆಯ್ಕೆ ಮಾಡಿದ ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದರೆ, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಲಿಂಕ್ ಸಿಗಲಿದೆ. ಅದಕ್ಕೆ ಕ್ಲಿಕ್‌ ಮಾಡಬೇಕು.
  • ಬಳಿಕ ನೀವು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಭಾಷೆ ಆಯ್ಕೆ ಮಾಡಬೇಕು. ಅಲ್ಲಿ ಕೇಳುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಬೇಕು.
  • ನೀವು BPL/APL ಕಾರ್ಡ್‌ಗೆ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಬೇಕು.
  • ಬಳಿಕ ಅರ್ಜಿಯ ಜೊತೆಗೆ ಕೇಳುವ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್‌ಲೋಡ್ ಮಾಡಬೇಕು. ಈ ರೀತಿ ನೀವು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

ವೋಟರ್ ಐಡಿ

ಆಧಾರ್ ಕಾರ್ಡ್

ವಯಸ್ಸಿನ ಪ್ರಮಾಣ ಪತ್ರ

ಡ್ರೈವಿಂಗ್ ಲೈಸೆನ್ಸ್

ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ

ಮೊಬೈಲ್ ಸಂಖ್ಯೆ

ಸ್ವಯಂ ಘೋಷಿತ ಪ್ರಮಾಣ ಪತ್ರ

ಹೊಸ BPL/APL ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಅರ್ಹತೆ

ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಪಡಿತರ ಚೀಟಿ ಇಲ್ಲದಿರುವವರು ಅರ್ಜಿ ಸಲ್ಲಿಸಬಹುದು

ಹೊಸದಾಗಿ ಮದುವೆಯಾದ ದಂಪತಿ ಹೊಸ ಪಡಿತರ ಚೀಟಿಗೆ ಅರ್ಜಿ ಹಾಕಬಹುದು

ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ BPL/APL ಎಂಬುದು ನಿರ್ಧಾರವಾಗಲಿದೆ

ಲೇಟ್​ನೈಟ್ ಪಾರ್ಟಿ ಪ್ರಕರಣ: ನಟ ದರ್ಶನ್ ಸೇರಿ ಎಂಟು ಜನರಿಗೆ ಬಿಗ್ ರಿಲೀಫ್

ಬೆಂಗಳೂರು: ಅವಧಿಗೂ ಮೀರಿ ಪಬ್​ನಲ್ಲಿ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಸೇರಿ 8 ಜನರಿಗೆ ಪೊಲೀಸರು ಬಿಗ್ ರಿಲೀಫ್ ನೀಡಿದ್ದಾರೆ. ಪ್ರಕರಣದ ಸಂಬಂಧ ತನಿಖೆ ನಡೆಸಿದ ಸುಬ್ರಮಣ್ಯನಗರ ಪೊಲೀಸರು ಆ ದಿನದಂದು ಅವಧಿ ಮೀರಿ‌ ಪಬ್​​ ಓಪನ್ ಇದ್ದು, ಈ ವೇಳೆ ಔತಣಕೂಟ ಮಾತ್ರ ನಡೆಸಲಾಗಿದ್ದು, ಯಾವುದೇ ರೀತಿಯ ಮದ್ಯದ ಪಾರ್ಟಿ ನಡೆದಿಲ್ಲ ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಪಬ್​ ಮಾಲೀಕನ ವಿರುದ್ದ ಪ್ರಕರಣ ದಾಖಲಾಗಿದ್ದು, ನಟ ದರ್ಶನ್ ಸೇರಿ ಎಂಟು ನಟರನ್ನು ಸಾಕ್ಷಿಗಳನ್ನಾಗಿ ಮಾಡಿ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ. ಕಳೆದ ಜನವರಿಯಲ್ಲಿ ಕಾಟೇರ ಸಕ್ಸಸ್ ಮೀಟ್ ಎಂದು ಜೆಟ್​ಲಾಗ್ ಪಬ್​ನಲ್ಲಿ ಪಾರ್ಟಿ ನಡೆದಿತ್ತು.‌ ಅವಧಿ ಮೀರಿ ಪಾರ್ಟಿ ನಡೆದಿದ್ದರಿಂದ ಪೊಲೀಸರು ಕೇಸ್ ದಾಖಲಿಸಿ ಪಾರ್ಟಿಯಲ್ಲಿ ಭಾಗಿಯಾಗಿದ್ದ ನಟ ದರ್ಶನ್, ರಾಕ್​ಲೈನ್ ವೆಂಕಟೇಶ್, ಡಾಲಿ ಧನಂಜಯ್ ಸೇರಿ ಎಂಟು ನಟರಿಗೆ ನೊಟೀಸ್ ನೀಡಿ ವಿಚಾರಣೆಗೆ ಒಳಪಡಿಸಿದ್ದರು.

ಊಟದ ಪಾರ್ಟಿ ಬಿಟ್ಟರೆ ಯಾವುದೇ ತರಹದ ಪಾರ್ಟಿ ಆಗಿಲ್ಲ ಎಂದು ನಟರು ವಿಚಾರಣೆ ವೇಳೆ ತಿಳಿಸಿದ್ದರು. ಇದನ್ನು ದಾಖಲಿಸಿ ತನಿಖೆ ಪೂರ್ಣಗೊಳಿಸಿದ ಸುಬ್ರಮಣ್ಯನಗರ ಪೊಲೀಸರು ಎಸಿಎಂಎಂ ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಎಂಟೂ ನಟರನ್ನು ಸಾಕ್ಷಿಗಳೆಂದು ಉಲ್ಲೇಖಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ