ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?

Twitter
Facebook
LinkedIn
WhatsApp
ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?

Rave Party: ಬೆಂಗಳೂರಿನ (Bengalore) ಎಲೆಕ್ಟ್ರಾನಿಕ್ ಸಿಟಿಯ ಜಿಆರ್ ಫಾರ್ಮ್ಸ್​ನಲ್ಲಿ (GR Farms) ನಡೆಯುತ್ತಿದ್ದ ರೇವ್ ಪಾರ್ಟಿಯ (Rev Party) ಮೇಲೆ ಪೊಲೀಸರು ದಾಳಿ ನಡೆಸಿ, ಮಾದಕ ವಸ್ತು ವಶಪಡಿಸಿಕೊಂಡಿರುವುದಲ್ಲದೆ, ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ರೇವ್ ಪಾರ್ಟಿಯಲ್ಲಿ ಹಲವು ಸೆಲೆಬ್ರಿಟಿಗಳು ಭಾಗಿಯಾಗಿದ್ದರು ಎನ್ನಲಾಗುತ್ತಿದ್ದು, ಅದರಲ್ಲಿ ತೆಲುಗಿನ ಜನಪ್ರಿಯ ನಟಿ ಹೇಮಾ ಹೆಸರು ಸಹ ಕೇಳಿ ಬಂದಿದೆ. ಆದರೆ ಹೇಮಾ, ತಾವು ಪಾರ್ಟಿಯಲ್ಲಿ ಇಲ್ಲವೆಂದು ಸಾಬೀತು ಮಾಡಲು, ನಿನ್ನೆ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದರು. ಮಾವನ ತೋಟದಲ್ಲಿ ಓಡಾಡುತ್ತಿರುವ ವಿಡಿಯೋ ಹಂಚಿಕೊಂಡು ನಾನು ಹೈದರಾಬಾದ್​ನ ಫಾರಂ ಹೌಸ್​ನಲ್ಲಿದ್ದೀನಿ ಎಂದಿದ್ದರು. ಆದರೆ ಪೊಲೀಸರು, ನಟಿ ಹೇಮಾ ಪಾರ್ಟಿಯಲ್ಲಿ ಇದ್ದಿದ್ದನ್ನು ಖಚಿತ ಪಡಿಸಿದ್ದಾರೆ. ಅಷ್ಟಕ್ಕೂ ಸುಮ್ಮನಾಗದ ಹೇಮಾ ಇದೀಗ ಮತ್ತೊಂದು ವಿಡಿಯೋವನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮನೆಯಲ್ಲಿ ಚಿಕನ್ ಬಿರಿಯಾನಿ ಮಾಡುತ್ತಿರುವ ವಿಡಿಯೋ ಒಂದನ್ನು ಹೇಮಾ ಇದೀಗ ಹಂಚಿಕೊಂಡಿದ್ದಾರೆ. ವಿಡಿಯೋನಲ್ಲಿ ಹೇಮಾ, ತಮ್ಮ ಮನೆಯಲ್ಲಿ ಚಿಕನ್ ಬಿರಿಯಾನಿ ಮಾಡುತ್ತಿದ್ದಾರೆ. ಆದರೆ ಈ ವಿಡಿಯೋನಲ್ಲಿ ಅವರು ಬೆಂಗಳೂರಿನ ರೇವ್ ಪಾರ್ಟಿ ವಿಷಯ ಮಾತನಾಡಿಲ್ಲ. ‘ನಾನು ಪಾರ್ಟಿಯಲ್ಲಿಲ್ಲ, ಮನೆಯಲ್ಲಿದ್ದೇನೆ’ ಎಂದು ಸಹ ಹೇಮಾ ಹೇಳಿಲ್ಲ. ಹಾಗಾಗಿ ಇದು ಹಳೆಯ ವಿಡಿಯೋ ಎನ್ನಲಾಗುತ್ತಿದೆ. ಆದರೆ ಇದಕ್ಕೆ ಮುನ್ನ ಬಿಡುಗಡೆ ಮಾಡಿದ್ದ ವಿಡಿಯೋನಲ್ಲಿ ತಾವು ಬೆಂಗಳೂರಿನಲ್ಲಿಲ್ಲ, ಹೈದರಾಬಾದ್​ನಲ್ಲಿರುವುದಾಗಿ ಹೇಮಾ ಹೇಳಿದ್ದರು.

ಹೇಮಾ ಸಹ ಜಿಆರ್ ಫಾರ್ಮ್ಸ್​ ನಲ್ಲಿ ನಡೆದ ಪಾರ್ಟಿಯಲ್ಲಿ ಹಾಜರಿದ್ದರು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸ್ಪಷ್ಟಪಡಿಸಿದ್ದಾರೆ. ಹೇಮಾ, ನಿನ್ನೆ ಬಿಡುಗಡೆ ಮಾಡಿದ್ದ ವಿಡಿಯೋವನ್ನು ಪಾರ್ಟಿ ನಡೆದ ಜಿಆರ್ ಫಾರ್ಮ್ಸ್​ ನಲ್ಲಿಯೇ ಮೊಬೈಲ್​ನಲ್ಲಿ ಶೂಟ್ ಮಾಡಿ ಬಿಡುಗಡೆ ಮಾಡಿದ್ದರು ಎನ್ನಲಾಗುತ್ತಿದೆ. ಯಾವ ಸಮಯದಲ್ಲಿ ಅವರು ಹೀಗೆ ವಿಡಿಯೋ ಮಾಡಿ ಬಿಡುಗಡೆ ಮಾಡಿದ್ದಾರೆಂದು ತನಿಖೆ ನಡೆಸಲಿದ್ದೇವೆ ಎಂದು ಸಹ ಆಯುಕ್ತ ದಯಾನಂದ್ ಹೇಳಿದ್ದಾರೆ.

ಮೇ 19ರ ತಡ ರಾತ್ರಿ ಪಾರ್ಟಿ ನಡೆದಿತ್ತು, ‘ಸನ್​ ಸೆಟ್​ ಟು ಸನ್​ ರೈಸ್​ ವಿಕ್ಟರಿ’ ಎಂದು ಈ ರೇವ್ ಪಾರ್ಟಿಗೆ ಹೆಸರಿಡಲಾಗಿತ್ತು. ಸಂಜೆಯಿಂದ ಮುಂಜಾನೆವರೆಗೆ ಪಾರ್ಟಿ ಮಾಡಿಸುವುದು ಆಯೋಕರ ಉದ್ದೇಶವಾಗಿತ್ತು. ಮೇ 20ರ ಬೆಳಿಗ್ಗೆ ಪೊಲೀಸರು ಪಾರ್ಟಿ ಮೇಲೆ ದಾಳಿ ಮಾಡಿದ್ದರು. ಪಾರ್ಟಿಯಲ್ಲಿ ಎಂಡಿಎಂಎ ಪಿಲ್ಸ್, ಹೈಡ್ರೋ ಗಾಂಜಾ, ಕೊಕೇನ್ ಸೇರಿ ಅನೇಕ ಮಾದಕವಸ್ತುಗಳ ಬಳಕೆ ಆಗಿರುವುದು ಪತ್ತೆಯಾಗಿದೆ. ಪಾರ್ಟಿಯಲ್ಲಿ ಸಿದ್ದಿಕ್, ರಣ್ ದೀರ್, ರಾಜ್ ಭಾವ ಡ್ರಗ್ಸ್ ಮಾರಾಟ ಮಾಡಿದ್ದರು ಎನ್ನಲಾಗಿದ್ದು. ಪಾರ್ಟಿಯ ಆಯೋಜಕ ವಾಸು ಸೇರಿದಂತೆ ನಾಲ್ಕು ಮಂದಿ ಡ್ರಗ್ ಪೆಡ್ಲರ್​ಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಮಾರು 100 ಕ್ಕೂ ಹೆಚ್ಚು ಮಂದಿ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಎಲ್ಲರ ರಕ್ತದ ಮಾದರಿಗಳನ್ನು ಪಡೆದು ಪರೀಕ್ಷೆಗೆ ಕಳಿಸಲಾಗಿದೆ.

ತೆಲುಗು ನಟ ಶ್ರೀಕಾಂತ್ ಸಹ ಈ ಪಾರ್ಟಿಯಲ್ಲಿದ್ದರು ಎಂಬ ಸುದ್ದಿ ಹರಿದಾಡಿತ್ತು. ಆದರೆ ಶ್ರೀಕಾಂತ್ ತಮ್ಮದೇ ಮನೆಯಿಂದ ವಿಡಿಯೋ ಮಾಡಿ, ತಾವು ಮನೆಯಲ್ಲಿಯೇ ಇರುವುದಾಗಿ ಹೇಳಿದ್ದು, ತಮಗೆ ಇಂಥಹಾ ಪಾರ್ಟಿಗಳಿಗೆ ಹೋಗುವ ಅಭ್ಯಾಸವಿಲ್ಲ, ನನ್ನದು ಅಂಥಹಾ ಸಂಸ್ಕೃತಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist