ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ನಿರ್ಬಂಧ ಹೇರಿ ನೋಟಿಸ್ ನೀಡಿದ ಆರ್‌ಬಿಐ.!
Twitter
Facebook
LinkedIn
WhatsApp
ಬ್ಯಾಂಕಿಂಗ್ ನಿಯಮಗಳ ಉಲ್ಲಂಘನೆ (Violation of Rules) ಹಿನ್ನೆಲೆ ಪೇಟಿಎಂಗೆ (Paytm) ಆರ್‌ಬಿಐ (RBI) ನೋಟಿಸ್ ನೀಡಿದ್ದು, ಪೇಟಿಎಂ ಹೊಸ ಡೆಪಾಸಿಟ್ ಪಡೆಯುವಂತಿಲ್ಲ ಎಂದು ಸೂಚನೆ ನೀಡಿದೆ.
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧ ಹೇರಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಯಾವುದೇ ಹೊಸ ಖಾತೆ ರಚಿಸಲು ಮತ್ತು ಡೆಪಾಸಿಟ್ ಪಡೆಯುವಂತಿಲ್ಲ. ವಿವಿಧ ನಿಯಮಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ನೋಟಿಸ್ (Notice) ನೀಡಲಾಗಿದೆ.
ಇನ್ನು ಫೆಬ್ರವರಿ 29ರ ನಂತರ ಪೇಮೆಂಟ್ಸ್ ಬ್ಯಾಂಕ್ ಖಾತೆಗೆ ವ್ಯಾಲಟ್, ಫಾಸ್ಟ್ಟ್ಯಾಗ್ ಇತ್ಯಾದಿ ಪ್ರೀಪೇಯ್ಡ್ ಯಂತ್ರಗಳಿಗೆ ಟಾಪ್‌ಅಪ್ ಹಾಕಿಸುವಂತಿಲ್ಲ ಎಂದು ಆರ್‌ಬಿಐ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.