ಭಾನುವಾರ, ಜೂನ್ 16, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

RCB ಸೋಲಿನ ಬಳಿಕ ಮೈದಾನದಲ್ಲೇ ಕಣ್ಣೀರು ಸುರಿಸಿ ನಿವೃತ್ತಿ ಘೋಷಿಸಿದ ಆಪತ್ಭಾಂದವ ದಿನೇಶ್ ಕಾರ್ತಿಕ್ ; ಇಲ್ಲಿದೆ ವಿಡಿಯೋ

Twitter
Facebook
LinkedIn
WhatsApp
RCB ಸೋಲಿನ ಬಳಿಕ ಮೈದಾನದಲ್ಲೇ ಕಣ್ಣೀರು ಸುರಿಸಿ ನಿವೃತ್ತಿ ಘೋಷಿಸಿದ ಆಪತ್ಭಾಂದವ ದಿನೇಶ್ ಕಾರ್ತಿಕ್ ; ಇಲ್ಲಿದೆ ವಿಡಿಯೋ

IPL 2024: ಅಹದಾಬಾದ್​ನಲ್ಲಿ ನಡೆದ ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ (Dinesh Karthik) ಐಪಿಎಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ.

ದಿನೇಶ್ ಕಾರ್ತಿಕ್ ಈ ಬಾರಿಯ ಐಪಿಎಲ್​ನಲ್ಲಿ RCBಗೆ ಟ್ರೋಫಿ ಗೆದ್ದು ವಿದಾಯ ಹೇಳುವ ನಿರೀಕ್ಷೆಯಲ್ಲಿದ್ದರು. ಆದರೆ ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 4 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಆರ್​ ತಂಡ 2ನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆದುಕೊಂಡಿದೆ. ಇತ್ತ ಆರ್​ಸಿಬಿ ತಂಡ ಐಪಿಎಲ್​ನಿಂದ ಹೊರಬಿದ್ದಿದೆ. ಇದರ ಬೆನ್ನಲ್ಲೇ ದಿನೇಶ್ ಕಾರ್ತಿಕ್ ಕೂಡ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

17 ವರ್ಷಗಳ ಐಪಿಎಲ್​ ಕೆರಿಯರ್​ನಲ್ಲಿ ದಿನೇಶ್ ಕಾರ್ತಿಕ್ ಒಟ್ಟು 6 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಟ್ರೋಫಿ ಗೆದ್ದಿದ್ದರು. ಇದಾದ ಬಳಿಕ ಹಲವು ತಂಡಗಳ ಪರ ಆಡಿದರೂ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ. ಅದರಲ್ಲೂ ಆರ್​ಸಿಬಿ ಪರ ಟ್ರೋಫಿ ಗೆಲ್ಲುವ ಆಸೆ ಹೊಂದಿದ್ದ ಡಿಕೆ ಅವರ ಕನಸು ಕನಸಾಗಿಯೇ ಉಳಿದಿದೆ.

2008 ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್​) ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ದಿನೇಶ್ ಕಾರ್ತಿಕ್, 2011 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್​) ಪರ ಆಡಿದ್ದರು.

2012 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪಾಲಾದ ಡಿಕೆ 2014 ರಲ್ಲಿ ಮತ್ತೆ ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ಮರಳಿದ್ದರು. 2015 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದರು. 2016-17 ರಲ್ಲಿ ಗುಜರಾತ್ ಲಯನ್ಸ್ (ಈ ತಂಡ ಈಗಿಲ್ಲ) ಪರ ಆಡಿದ್ದ ದಿನೇಶ್ ಕಾರ್ತಿಕ್, 2018 ರಿಂದ 2021 ರವರೆಗೆ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದಿದ್ದರು.

ಐಪಿಎಲ್​ನಲ್ಲಿ ಒಟ್ಟು 257 ಪಂದ್ಯಗಳನ್ನಾಡಿರುವ ದಿನೇಶ್ ಕಾರ್ತಿಕ್ 22 ಅರ್ಧಶತಕಗಳೊಂದಿಗೆ ಒಟ್ಟು 4842 ರನ್ ಕಲೆಹಾಕಿದ್ದಾರೆ. ಈ ವೇಳೆ 97 ರನ್ ಬಾರಿಸಿದ್ದು ಅವರ ಗರಿಷ್ಠ ಸ್ಕೋರ್. ಇದಲ್ಲದೆ ಧೋನಿ ಬಳಿಕ ಅತೀ ಹೆಚ್ಚು ಪಂದ್ಯವಾಡಿದ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದೆ. ಈ ಎಲ್ಲಾ ದಾಖಲೆಗಳೊಂದಿಗೆ ಇದೀಗ ಡಿಕೆ ಐಪಿಎಲ್​ಗೆ ವಿದಾಯ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ