RCB: ಮೊದಲ ಬಾರಿಗೆ ಫೈನಲ್ ಗೆ ಲಗ್ಗೆ ಇಟ್ಟ ಆರ್ಸಿಬಿ..! ಈ ಬಾರಿ ಕಪ್ ನಮ್ದೆ?
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮಹಿಳೆಯರ ಪ್ರೀಮಿಯರ್ ಲೀಗ್ (Women’s Premier League) 2024 ರ ಎಲಿಮಿನೇಟರ್ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್(Harmanpreet Kaur) ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವನ್ನು 5 ರನ್ಗಳಿಂದ ಮಣಿಸಿದ ಸ್ಮೃತಿ ಮಂಧಾನ (Smriti Mandhana) ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (Mumbai Indians vs Royal Challengers Bangalore) ಇದೇ ಮೊದಲ ಬಾರಿಗೆ ಮಹಿಳೆಯರ ಪ್ರೀಮಿಯರ್ ಲೀಗ್ ಫೈನಲ್ಗೇರಿದೆ. ಟೂರ್ನಿಯ ಎರಡನೇ ಸೀಸನ್‌ನ ಅಂತಿಮ ಪಂದ್ಯ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಡೆಲ್ಲಿ ತಂಡ ಈಗಾಗಲೇ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ. ಇತ್ತ ಕಳೆದ ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ಸತತ ಎರಡನೇ ಬಾರಿಗೆ ಟ್ರೋಫಿ ಗೆಲ್ಲುವ ಕನಸು ಭಗ್ನಗೊಂಡಿದೆ.
ಇನ್ನು ಇದೇ ಮೊದಲ ಬಾರಿಗೆ ಆರ್‌ಸಿಬಿ ತಂಡವು ಫೈನಲ್ ತಲುಪಿದ್ದು, ಭಾನುವಾರ (ಮಾರ್ಚ್ 17) ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟ್ರೋಫಿಗಾಗಿ ಸೆಣಸಾಡಲಿದೆ.
ಇದಕ್ಕೂ ಮೊದಲು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಆರ್‌ಸಿಬಿ ತಂಡವು ಉತ್ತಮ ಮೊತ್ತ ಪೇರಿಸಲು ಸಾಧ್ಯವಾಗಲಿಲ್ಲ. ಉತ್ತಮ ಆರಂಭ ಸಿಗದ ಕಾರಣ ತಂಡದ ಮೊತ್ತವು 23 ಆಗುವಷ್ಟರಲ್ಲಿಯೇ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡ ಆರ್‌ಸಿಬಿ ಸಂಕಷ್ಟಕ್ಕೆ ಸಿಲುಕಿತು. ಭರವಸೆ ಮೂಡಿಸಿದ್ದ ರಿಚಾ ಘೋಷ್ ಕೂಡ 14 ರನ್ ಗಳಿಸಿ ಔಟಾದರು. ಆಗ ಆರ್‌ಸಿಬಿಯು ಮತ್ತಷ್ಟು ಸಂಕಷ್ಟದ ಸುಳಿಗೆ ಸಿಲುಕಿತು.
ಒಂದೆಡೆ ವಿಕೆಟ್‌ಗಳು ಉರುಳುತ್ತಿದ್ದರೂ ಎದೆಗುಂದದ ಎಲಿಸ್ ಪೆರಿ ಅವರು ಮನಮೋಹಕ ಆಟ ಪ್ರದರ್ಶಿಸಿದರು. ಎಲಿಸ್ ಪೆರಿ ಅವರು 50 ಎಸೆತಗಳಲ್ಲಿ 8 ಬೌಂಡರಿ ಹಾಗೂ 1 ಸಿಕ್ಸರ್ ಒಳಗೊಂಡು 66 ರನ್ ಬಾರಿಸಿದ ಕಾರಣ ಆರ್‌ಸಿಬಿಯು ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 135 ರನ್ ಗಳಿಸಿತು. ಮುಂಬೈ ಇಂಡಿಯನ್ಸ್ ಪರ ಹೇಲೆಯ್ ಮ್ಯಾಥ್ಯೂಸ್, ನ್ಯಾಟ್ ಸ್ಕೈವರ್-ಬ್ರಂಟ್ ಹಾಗೂ ಸೈಕಾ ಇಶಾಕ್ ತಲಾ 2 ವಿಕೆಟ್ ಪಡೆದು ಮಿಂಚಿದರು.
𝗠𝗮𝗶𝗱𝗲𝗻 #𝗧𝗔𝗧𝗔𝗪𝗣𝗟 𝗙𝗶𝗻𝗮𝗹 𝗳𝗼𝗿 𝗥𝗖𝗕 👏@RCBTweets secure a 5-run win over #MI in an edge of the seat thriller in Delhi 📍🤝
— Women's Premier League (WPL) (@wplt20) March 15, 2024
They will now play @DelhiCapitals on 17th March! ⌛️
Scorecard ▶️https://t.co/QzNEzVGRhA#MIvRCB | #Eliminator pic.twitter.com/0t2hZeGXNj
FINAL BERTH ✅@RCBTweets join the @DelhiCapitals for a shot at the ultimate prize 🏆#TATAWPL | #MIvRCB | #Eliminator pic.twitter.com/R0YL3bE9EP
— Women's Premier League (WPL) (@wplt20) March 15, 2024