ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

2013 ರಲ್ಲಿ ಆರ್‌ಸಿಬಿ ಹೆಸರಿನಲ್ಲಿದ್ದ ದಾಖಲೆ ಉಡೀಸ್; 277 ರನ್ ಬಾರಿಸಿ ವಿಶ್ವ ದಾಖಲೆ ಬರೆದ ಎಸ್ಆರ್ ಹೆಚ್..!

Twitter
Facebook
LinkedIn
WhatsApp
2013 ರಲ್ಲಿ ಆರ್‌ಸಿಬಿ ಹೆಸರಿನಲ್ಲಿದ್ದ ದಾಖಲೆ ಉಡೀಸ್; 277 ರನ್ ಬಾರಿಸಿ ವಿಶ್ವ ದಾಖಲೆ ಬರೆದ ಎಸ್ಆರ್ ಹೆಚ್..!

ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 8ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಸನ್​ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ (MI) ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿತು.

ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಬ್ಯಾಟರ್​ಗಳು ಮುಂಬೈ ತಂಡದ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದ್ದರು. ಆರಂಭಿಕ ಆಟಗಾರ ಟ್ರಾವಿಸ್ ಹೆಡ್ 24 ಎಸೆತಗಳಲ್ಲಿ 62 ರನ್ ಚಚ್ಚಿದರೆ, ಆ ಬಳಿಕ ಬಂದ ಅಭಿಷೇಕ್ ಶರ್ಮಾ ಕೇವಲ 23 ಎಸೆತಗಳಲ್ಲಿ 63 ರನ್ ಸಿಡಿಸಿದರು.

ಇನ್ನು ಐಡೆನ್ ಮಾರ್ಕ್ರಾಮ್ 28 ಎಸೆತಗಳಲ್ಲಿ 42 ರನ್ ಬಾರಿಸಿದರೆ, ಹೆನ್ರಿಕ್ ಕ್ಲಾಸೆನ್ ಕೇವಲ 34 ಎಸೆತಗಳಲ್ಲಿ ಅಜೇಯ 80 ರನ್ ಚಚ್ಚಿದರು. ಈ ಮೂಲಕ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ ದಾಖಲೆಯ 277 ರನ್​ ಕಲೆಹಾಕಿತು.

278 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಇಶಾನ್ ಕಿಶನ್ (34) ಹಾಗೂ ರೋಹಿತ್ ಶರ್ಮಾ (26) ಸ್ಪೋಟಕ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ನಮನ್ ಧಿರ್ 30 ರನ್ ಬಾರಿಸಿದರೆ, ತಿಲಕ್ ವರ್ಮಾ 34 ಎಸೆತಗಳಲ್ಲಿ 64 ರನ್ ಸಿಡಿಸಿದರು.

ಇನ್ನು ಹಾರ್ದಿಕ್ ಪಾಂಡ್ಯ 24 ರನ್​ಗಳ ಕೊಡುಗೆ ನೀಡಿದರೆ, ಟಿಮ್ ಡೇವಿಡ್ ಅಜೇಯ 42 ರನ್ ಬಾರಿಸಿದರು. ಈ ಮೂಲಕ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 246 ರನ್ ಬಾರಿಸಿ, 31 ರನ್​ಗಳ ಅಂತರದಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿತು.

ಈ ಸೋಲಿನ ಹೊರತಾಗಿಯೂ ಮುಂಬೈ ಇಂಡಿಯನ್ಸ್ ತಂಡ ಸನ್​ರೈಸರ್ಸ್ ಹೈದರಾಬಾದ್ ಜೊತೆಗೂಡಿ ಈ ಪಂದ್ಯದ ಮೂಲಕ ಟಿ20 ಕ್ರಿಕೆಟ್​ನಲ್ಲಿ ವಿಶೇಷ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಒಟ್ಟು 523 ರನ್​ಗಳನ್ನು ಕಲೆಹಾಕಿ ಎಂಬುದು ವಿಶೇಷ.

ಅಂದರೆ ಈ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ 277 ರನ್ ಬಾರಿಸಿದರೆ, ಮುಂಬೈ ಇಂಡಿಯನ್ಸ್​ 246 ರನ್ ಕಲೆಹಾಕಿತು. ಇದರೊಂದಿಗೆ ಟಿ20 ಕ್ರಿಕೆಟ್ ಪಂದ್ಯವೊಂದರಲ್ಲಿ ಮೂಡಿಬಂದ ಗರಿಷ್ಠ ಒಟ್ಟು ಮೊತ್ತದ ದಾಖಲೆ ಸನ್​ರೈಸರ್ಸ್ ಹೈದರಾಬಾದ್-ಮುಂಬೈ ಇಂಡಿಯನ್ಸ್ ಪಾಲಾಯಿತು.

ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್-ಸೌತ್ ಆಫ್ರಿಕಾ ತಂಡಗಳ ಹೆಸರಿನಲ್ಲಿತ್ತು. 2023 ರಲ್ಲಿ ಸೆಂಚುರಿಯನ್​ನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ 258 ರನ್ ಬಾರಿಸಿದರೆ, ಸೌತ್ ಆಫ್ರಿಕಾ 259 ರನ್​ಗಳಿಸಿ ಈ ಪಂದ್ಯವನ್ನು ಗೆದ್ದುಕೊಂಡಿತು. ಹೀಗೆ ಈ ಪಂದ್ಯದಲ್ಲಿ ಒಟ್ಟು 517 ರನ್​ಗಳ ದಾಖಲೆಯ ಮೊತ್ತ ಮೂಡಿಬಂದಿದ್ದು ಇದುವರೆಗಿನ ವಿಶ್ವ ದಾಖಲೆಯಾಗಿತ್ತು.

ಇದೀಗ ಸನ್​ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ಜೊತೆಗೂಡಿ ಹೈದರಾಬಾದ್​ನಲ್ಲಿ ರನ್ ಮಳೆಯನ್ನೇ ಹರಿಸಿದೆ. ಈ ಮೂಲಕ ಒಟ್ಟು 523 ರನ್​ ಕಲೆಹಾಕಿ, ಉಭಯ ತಂಡಗಳು ಜೊತೆಗೂಡಿ ಟಿ20 ಇತಿಹಾಸದಲ್ಲೇ ಅತ್ಯಧಿಕ ರನ್​ ಪೇರಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ