ಸ್ಮಾರ್ಟ್ಫೋನ್ ಕ್ಷೇತ್ರದಲ್ಲಿ ಏನಾದರು ಹೊಸ ತನವನ್ನು ಪ್ರಯತ್ನ ಮಾಡುವುದರಲ್ಲಿ ಚೀನಾ ಮೂಲದ ಪ್ರಸಿದ್ಧ ಶವೋಮಿ (Xiaomi) ಸಂಸ್ಥೆ ಎತ್ತಿದ ಕೈ. ಈಗಂತು ಅಪರೂಪಕ್ಕೆ ಮೊಬೈಲ್ಗಳನ್ನು ಪರಿಚಯಿಸುತ್ತಿರುವ ಶವೋಮಿ ಸಮಯ ತೆಗೆದುಕೊಂಡ ವಿಭಿನ್ನವಾದ ಮೊಬೈಲ್ನೊಂದಿಗೆ ಬರುತ್ತದೆ. ಅದರಂತೆ ಇದೀಗ ಶವೋಮಿ ತನ್ನ ರೆಡ್ಮಿ ಬ್ರ್ಯಾಂಡ್ ನಡಿಯಲ್ಲಿ ಹೊಸ ಪವರ್ಫುಲ್ ಮೊಬೈಲ್ ಪರಿಚಯಿಸಲು ತಯಾರಾಗುತ್ತಿದೆ. ಅದುವೇ ರೆಡ್ಮಿ ನೋಟ್ 12 ಸರಣಿ (Redmi Note 12 series). ಇದರಲ್ಲಿ ರೆಡ್ಮಿ ನೋಟ್ 12, ರೆಡ್ಮಿ ನೋಟ್ 12 ಪ್ರೊ ಮತ್ತು ರೆಡ್ಮಿ ನೋಟ್ 12 ಪ್ರೊ+ (Redmi Note 12 Pro +) ಎಂಬ ಮೂರು ಸ್ಮಾರ್ಟ್ಫೋನ್ಗುಗಳು ಬಿಡುಗಡೆ ಆಗಿವೆ. ಈ ಮೂರು ಸ್ಮಾರ್ಟ್ಫೋನ್ಗಳು ಭಾರತದಲ್ಲಿ ಹೊಸ ವರ್ಷದ ಪ್ರಯುಕ್ತ ಜನವರಿ 5ಕ್ಕೆ ಅನಾವರಣಗೊಳ್ಳಲಿದೆ. ಇದರಲ್ಲಿ ಅತ್ಯುತ್ತಮ ಕ್ಯಾಮೆರಾ ಸೆಟ್ಅಪ್, ಬ್ಯಾಟರಿ ಹಾಗೂ ವೇಗದ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ. ಇದೀಗ ರೆಡ್ಮಿ ನೋಟ್ 12 ಪ್ರೊ+ ಫೋನಿನ ಬೆಲೆ ಸೋರಿಕೆ ಆಗಿದೆ.
ಸೋರಿಕೆ ಆಗಿರುವ ಮಾಹಿತಿಯ ಪ್ರಕಾರ, ರೆಡ್ಮಿ ನೋಟ್ 12 ಪ್ರೊ+ ಸ್ಮಾರ್ಟ್ಫೋನ್ ಮೂರು ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಇದರ 6GB RAM + 128GB ಸ್ಟೋರೇಜ್ ಆಯ್ಕೆಗೆ 24,999 ರೂ. ಇದೆಯಂತೆ. ಅಂತೆಯೆ 8GB RAM + 256GB ಸ್ಟೋರೇಜ್ ರೂಪಾಂತರಕ್ಕೆ 26,999 ರೂ., 12GB + 256GB ಸ್ಟೋರೇಜ್ಗೆ 28,999 ರೂ. ನಿಗದಿ ಮಾಡಲಾಗಿದೆಯಂತೆ.
ಡಿಸ್ಪ್ಲೇ-ಪ್ರೊಸೆಸರ್
ಈ ಮೂರು ಸ್ಮಾರ್ಟ್ಫೋನ್ಗಳ ಪೈಕಿ ರೆಡ್ಮಿ ನೋಟ್ 12 ಪ್ರೊ+ ಸಾಕಷ್ಟು ವಿಶೇಷತೆಯಿಂದ ಕೂಡಿದೆ. ಇದು 2,400 x 1,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಬೆಂಬಲಿಸಲಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೆ ಈ ಸರಣಿಯ ರೆಡ್ಮಿ ನೋಟ್ 12 ಪ್ರೊ ಕೂಡ ಇದೆ ಪ್ರೊಸೆಸರ್ ಹೊಂದಿದೆ. ಆದರೆ ರೆಡ್ಮಿ ನೋಟ್ 12 ಸ್ನಾಪ್ಡ್ರಾಗನ್ 4 Gen 1 ಪ್ರೊಸೆಸರ್ನಿಂದ ಕೆಲಸ ಮಾಡುತ್ತದೆ. ಉಳಿದಂತೆ ಮೂರು ಫೋನಿನ ಡಿಸ್ ಪ್ಲೇ ಒಂದೇರೀತಿಯಿದೆ.
ಕ್ಯಾಮೆರಾ:
ರೆಡ್ಮಿ ನೋಟ್ 12 ಪ್ರೊ+: ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಬರೋಬ್ಬರಿ 200 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದುಕೊಂಡಿದೆ, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.
ರೆಡ್ಮಿ ನೋಟ್ 12 ಪ್ರೊ: ಇದುಕೂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದುಕೊಂಡಿದೆ, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.
ರೆಡ್ಮಿ ನೋಟ್ 12: ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದುಕೊಂಡಿದೆ, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ನಿಂದ ಕೂಡಿದೆ. ಇದಲ್ಲದೆ 8ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.
ಬ್ಯಾಟರಿ-ಬೆಲೆ:
ಈ ಮೂರು ಸ್ಮಾರ್ಟ್ಫೋನ್ಗಳು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರಲ್ಲಿ ನೋಟ್ 12 33W ವೇಗದ ಚಾರ್ಜಿಂಗ್, ನೋಟ್ 12 ಪ್ರೊ 67W ವೇಗದ ಚಾರ್ಜಿಂಗ್ ಹಾಗೂ ನೋಟ್ 12 ಪ್ರೊ+ 210W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ನೋಟ್ 12 ಪ್ರೊ+ ಕೇವಲ 9 ನಿಮಿಷಗಳಲ್ಲಿ ಫುಲ್ ಚಾರ್ಜ್ ಆಗುತ್ತಂತೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 5G, ವೈಫೈ 6, GNSS, NFC, ಮತ್ತು USB ಟೈಪ್-ಸಿ ನೀಡಲಾಗಿದೆ.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist