ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸೆಕ್ಸ್‌ಗೆ ನಿರಾಕರಿಸಿದ ಗೆಳತಿ- ಸ್ಕ್ರೂಡ್ರೈವರ್‌ನಿಂದ ಮಾರಣಾಂತಿಕ ಹಲ್ಲೆ, ಆರೋಪಿ ಬಂಧನ

Twitter
Facebook
LinkedIn
WhatsApp
ಸೆಕ್ಸ್‌ಗೆ ನಿರಾಕರಿಸಿದ ಗೆಳತಿ- ಸ್ಕ್ರೂಡ್ರೈವರ್‌ನಿಂದ ಮಾರಣಾಂತಿಕ ಹಲ್ಲೆ, ಆರೋಪಿ ಬಂಧನ

ಲಕ್ನೋ: ತನ್ನೊಂದಿಗೆ ಸೆಕ್ಸ್‌ ಮಾಡಲು ನಿರಾಕರಿಸಿದ ಲಿವ್‌ ಇನ್‌ ಗೆಳತಿ ಮೇಲೆ ಸ್ಕ್ರೂಡ್ರೈವರ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಗುರುಗ್ರಾಮದ ನಹರ್‌ಪುರ್‌ ರೂಪಾ ಪ್ರದೇಶದಲ್ಲಿ ನಡೆದಿದೆ.

28 ವರ್ಷದ ಯುವತಿ ತನ್ನ ಲಿವ್‌ ಇನ್‌ ಗೆಳೆಯನಿಂದಲೇ ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದಾಳೆ. ಆರೋಪಿ ಸ್ಥಾನದಲ್ಲಿರುವ ಉತ್ತರಪ್ರದೇಶದ ನಿವಾಸಿ ಶಿವಂ ಮತ್ತು ಸಂತ್ರಸ್ತೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿ (Live In Relationship) ವಾಸಿಸುತ್ತಿದ್ದರು. ಕಳೆದ ಗುರುವಾರ ಯುವತಿ ಮನೆಗೆ ಬಂದಾಗ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ಒತ್ತಾಯಿಸಿದ್ದಾನೆ. ಆಕೆ ನಿರಾಕರಿಸಿದ್ದರಿಂದ ಯುವಕ ಸ್ಕ್ರೂಡ್ರೈವರ್‌ನಿಂದ ಕುತ್ತಿಗೆ ಹಾಗೂ ಮುಖದ ಮೇಲೆ ಹಲ್ಲೆ ಮಾಡಿದ್ದಾನೆ. ಸದ್ಯ ಯುವತಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಆರೋಪಿ ಯುವಕನನ್ನ ಪೊಲೀಸರು (UP Police) ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಶಿವಂ ಮತ್ತು ಯುವತಿ ಕಳೆದ ಒಂದು ವರ್ಷದಿಂದ ಲಿವ್‌ ಇನ್‌ನಲ್ಲಿ ವಾಸಿಸುತ್ತಿದ್ದರು. ಇಬ್ಬರೂ ಉತ್ತರ ಪ್ರದೇಶದ ನಿವಾಸಿಗಳಾಗಿದ್ದಾರೆ. ಶಿವಂ ಮದುವೆಯಾಗುವ ನೆಪದಲ್ಲಿ ಯುವತಿಯನ್ನ ಲೈಂಗಿಕವಾಗಿ ಶೋಷಣೆ ಮಾಡ್ತಿದ್ದ ಎಂದು ಎಸಿಪಿ ವರುಣ್ ದಹಿಯಾ ತಿಳಿಸಿದ್ದಾರೆ.

ಆರೋಪಿ ಶಿವಂ ಹಾಗೂ ಯುವತಿ ಒಂದು ವರ್ಷದಿಂದ ಒಟ್ಟಿಗೇ ವಾಸಿಸುತ್ತಿದ್ದರು. ಆದ್ರೆ ಶಿವಂಗೆ ಈಗಾಗಲೇ ಮದುವೆಯಾಗಿ 2 ಮಕ್ಕಳಿದ್ದಾರೆ ಎಂದು ತಿಳಿದಾಗ ಯುವತಿ ಅವನಿಂದ ದೂರವಾಗಿ ನಹರ್‌ಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು. ಇದರಿಂದ ಶಿವಂ ಜಿಗುಪ್ಸೆಗೊಂಡಿದ್ದ. ಗುರುವಾರ ಸಂಜೆ ವೇಳೆ ಮತ್ತೆ ಯುವತಿ ಮನೆಗೆ ತೆರಳಿದ್ದಾನೆ. ಮದುವೆಯಾಗುವ ನೆಪವೊಡ್ಡಿ ಸೆಕ್ಸ್‌ಗೆ ಒತ್ತಾಯಿಸಿದ್ದಾನೆ. ಆದ್ರೆ ಯುವತಿ ನಿರಾಕರಿಸಿದ ನಂತರ ಸ್ಕ್ರೂಡ್ರೈವರ್‌ನಿಂದ ದಾಳಿ ಮಾಡಿದ್ದಾನೆ.

ಆರೋಪಿ ಶಿವಂ ವಿರುದ್ಧ ಐಪಿಸಿ ಸೆಕ್ಷನ್‌ 307, 323, 324 ಮತ್ತು 376ರ ಅಡಿಯಲ್ಲಿ ಕೇಸ್‌ ದಾಖಲಿಸಲಾಗಿದೆ. ಸಂತ್ರಸ್ತ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರುಣ್ ದಹಿಯಾ ಮಾಹಿತಿ ನೀಡಿದ್ದಾರೆ.

ಲಿವ್-ಇನ್- ಪಾರ್ಟ್ನರ್ ವಿಧವೆಯ ಹಣೆ, ಎದೆಗೆ ಗುಂಡಿಟ್ಟು ಕೊಂದು ಶರಣಾದ!

ಲಕ್ನೊ: ಯುವಕನೊಬ್ಬ ಲಿವ್- ಇನ್- ಪಾರ್ಟ್ನರ್ ಲ್ಲಿದ್ದ (Live-In-Partner) ವಿಧವೆಯ ಹಣೆ ಹಾಗೂ ಎದೆಗೆ ಗುಂಡಿಟ್ಟು ಬರ್ಬರವಾಗಿ ಕೊಲೆ ಮಾಡಿದ ಘಟನೆ ಉತ್ತರಪ್ರದೇಶಲ್ಲಿ ನಡೆದಿದೆ.ಆರೋಪಿ ಯುವಕನನ್ನು ರಿಷಭ್ ಸಿಂಗ್ ಬಹದೂರಿಯಾ ಹಾಗೂ ಮೃತಳನ್ನು ರಿಯಾ ಎಂದು ಗುರುತಿಸಲಾಗಿದೆ.

ಈ ಜೋಡಿ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ಯಾರಡೈಸ್ ಕ್ರಿಸ್ಟಲ್ ಅಪಾರ್ಟ್‍ಮೆಂಟ್‍ನಲ್ಲಿ ಬಾಡಿಗೆ ಫ್ಲ್ಯಾಟ್‍ನಲ್ಲಿ ವಾಸವಾಗಿದ್ದರು. ಆದರೆ ಗುರುವಾರ ಕ್ಲುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಇಬ್ಬರ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ರಿಯಾಳನ್ನು ರಿಷಭ್ ಬರ್ಬರವಾಗಿ ಕೊಲೆ ಮಾಡಿದ್ದಾನೆ. ನಂತರ ಪೊಲೀಸರಿಗೆ ಶರಣಾಗಿದ್ದಾನೆ.

ಕೂಡಲೇ ಪೊಲೀಸರು ಆರೋಪಿಯನ್ನು ಬಂಧಿಸಿ, ಕೊಲೆಗೆ ಬಳಸಿದ್ದ ಆಯುಧಗಳನ್ನು ವಶಕ್ಕೆ ಪಡೆದಿದ್ದಾರೆ. ಇತ್ತ ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. 

ಆಗಸ್ಟ್ 17ರಂದು ರಾತ್ರಿ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಗೆ ಕರೆಯೊಂದು ಬಂದಿದೆ. ಕರೆ ಮಾಡಿದ ವ್ಯಕ್ತಿ ಅಪಾರ್ಟ್‍ಮೆಂಟ್‍ನಲ್ಲಿ ಲಿವ್ ಇನ್ ಪಾರ್ಟ್ನರ್ ಕೊಲೆಯಾಗಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿ ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಡಿಸಿಪಿ ವಿನೀತ್ ಜೈಸ್ವಾಲ್ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist