ಶನಿವಾರ, ಏಪ್ರಿಲ್ 20, 2024
ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖ್ಯಾತ ಉದ್ಯಮಿ ಬರ್ನಾರ್ಡ್ ಅರ್ನಾಲ್ಟ್ ಅವರನ್ನ ಹಿಂದಿಕ್ಕಿ ವಿಶ್ವದ ನಂ.1 ಶ್ರೀಮಂತನಾದ ಎಲಾನ್ ಮಸ್ಕ್..!

Twitter
Facebook
LinkedIn
WhatsApp
images 3

ವಾಷಿಂಗ್ಟನ್: ಟೆಸ್ಲಾ ಕಂಪನಿ ಮುಖ್ಯಸ್ಥ ಎಲಾನ್ ಮಸ್ಕ್ (Elon Musk) ಮತ್ತೆ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ (Worlds Richest Person) ಹೊರಹೊಮ್ಮಿದ್ದಾರೆ. LMVH ಷೇರುಗಳು ಕುಸಿತ ಕಂಡ ನಂತರ ಖ್ಯಾತ ಉದ್ಯಮಿ ಬರ್ನಾರ್ಡ್ ಅರ್ನಾಲ್ಟ್ (Bernard Arnault) ಅವರನ್ನ ಹಿಂದಿಕ್ಕಿ, ಮಸ್ಕ್ ನಂ.1 ಸ್ಥಾನಕ್ಕೇರಿದ್ದಾರೆ.

ಬುಧವಾರ ಪ್ಯಾರಿಸ್‌ನ ವಹಿವಾಟಿನಲ್ಲಿ ಅರ್ನಾಲ್ಟ್‌ನ LMVH ಷೇರುಗಳು 2.6% ಕಡಿಮೆಯಾಗಿರುವುದಾಗಿ ಬ್ಲೂಮ್‌ಬರ್ಗ್ ವರದಿ ಮಾಡಿದೆ. ಅಲ್ಲದೇ ಎಲ್‌ವಿಎಂಹೆಚ್ ಷೇರುಗಳು ಕಳೆದ ಏಪ್ರಿಲ್‌ನಿಂದ ಸುಮಾರು 10 ಪ್ರತಿಶತದಷ್ಟು ಕುಸಿತ ಕಂಡಿದೆ. ಇದರಿಂದ ಒಂದೇ ದಿನದಲ್ಲಿ ಅರ್ನಾಲ್ಟ್‌ನ ನಿವ್ವಳ ಮೌಲ್ಯದಲ್ಲಿ ಏಕಾಏಕಿ 11 ಶತಕೋಟಿ ಡಾಲರ್‌ನಷ್ಟು ಸಂಪತ್ತು ಕರಗಿದೆ.

2022ರ ಡಿಸೆಂಬರ್‌ನಲ್ಲಿ ಎಲಾನ್ ಮಸ್ಕ್ ಅವರ ಟೆಸ್ಲಾ (Tesla) ಷೇರು ಮೌಲ್ಯ ಅಲ್ಪ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ಮಸ್ಕ್ನ ನಿವ್ವಳ ಮೌಲ್ಯವು 200 ಶತಕೋಟಿ ಡಾಲರ್‌ನಷ್ಟು ಕಡಿಮೆಯಾಗಿತ್ತು. ಏಕೆಂದರೆ ಮಸ್ಕ್ 44 ಶತಕೋಟಿ ಡಾಲರ್‌ಗೆ ಟ್ವಿಟ್ಟರ್ ಸಂಸ್ಥೆಯನ್ನು ಖರೀದಿಸಿ, ಅದರಲ್ಲೇ ತಮ್ಮನ್ನು ಹೆಚ್ಚು ತೊಡಗಿಸಿಕೊಂಡಿದ್ದರು. ಆಗ ಮೊದಲ ಬಾರಿಗೆ ಬ್ರಾಂಡ್ ಲೂಯಿ ವಿಟಾನ್ ಮೂಲ ಕಂಪನಿಯಾದ LMVH ಸಿಇಒ ಅರ್ನಾಲ್ಟ್ ವಿಶ್ವದ ಅತ್ಯಂತ ಶ್ರೀಮಂತ ನಂ.1 ಸ್ಥಾನದಿಂದ ಹಿಂದಿಕ್ಕಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ