ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜೀನಾಮೆ ಸುಳ್ಳು ಸುದ್ದಿ ; ನಾನಿನ್ನೂ ರಾಜೀನಾಮೆ ನೀಡಿಲ್ಲ,5 ವರ್ಷ ನಮ್ಮದೇ ಸರ್ಕಾರ: ಹಿಮಾಚಲ ಸಿಎಂ

Twitter
Facebook
LinkedIn
WhatsApp
ರಾಜೀನಾಮೆ ಸುಳ್ಳು ಸುದ್ದಿ ; ನಾನಿನ್ನೂ ರಾಜೀನಾಮೆ ನೀಡಿಲ್ಲ,5 ವರ್ಷ ನಮ್ಮದೇ ಸರ್ಕಾರ: ಹಿಮಾಚಲ ಸಿಎಂ

 ಹಿಮಾಚಲ ಪ್ರದೇಶದ ರಾಜಕೀಯದಲ್ಲಿ ಹೈಡ್ರಾಮಾ ನಡೆಯುತ್ತಿದೆ. ರಾಜ್ಯದಲ್ಲಿ ನಮ್ಮ ಪಕ್ಷ ಸರ್ಕಾರ ರಚಿಸಲಿದೆ ಎಂದು ಬಿಜೆಪಿ ಹೇಳುತ್ತಿದೆ. ಆದರೆ ಇನ್ನೊಂದೆಡೆ, ನಾನು ರಾಜೀನಾಮೆ ನೀಡಿಲ್ಲ ಅಂತಾ ಸಿಎಂ ಸುಖ್ವಿಂದರ್‌ ಸಿಂಗ್ ಸುಖು​ ಸ್ಪಷ್ಟಪಡಿಸಿದ್ದಾರೆ.

ಸಿಎಂ ಸುಖ್ವಿಂದರ್ ಸಿಂಗ್ ಸುಖ್ ಪ್ರತಿಕ್ರಿಯಿಸಿ, “ನಾನೊಬ್ಬ ಹೋರಾಟಗಾರ. ಒಳ್ಳೆಯ ಕುಟುಂಬದಿಂದ ಬಂದವನು. ನಾವು ಈ ಯುದ್ಧವನ್ನು ಗೆಲ್ಲುತ್ತೇವೆ. ವಿಧಾನಸಭೆಯಲ್ಲೂ ಬಹುಮತ ಸಾಬೀತುಪಡಿಸುತ್ತೇವೆ. ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಕೆಲವು ಶಾಸಕರೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ” ಎಂದು ತಿಳಿಸಿದರು.

ಇದೇ ವೇಳೆ ತಾವು ರಾಜೀನಾಮೆ ನೀಡಿಲ್ಲ ಎಂದು ಹೇಳಿದ್ದಾರೆ. ಬಜೆಟ್‌ ಅಧಿವೇಶನದಲ್ಲಿ ನಮ್ಮ ಸರ್ಕಾರ ಬಹುಮತ ಸಾಬೀತುಪಡಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಸಿಎಂ ಸುಖು,​ ಕಾಂಗ್ರೆಸ್ ಸರ್ಕಾರ ಮುಂದಿನ ಐದು ವರ್ಷಗಳ ಕಾಲ ಆಡಳಿತ ನಡೆಸಲಿದೆ ಎಂದರು.

ಹಿಮಾಚಲ ಪ್ರದೇಶದ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬಿಜೆಪಿಯನ್ನು ಟೀಕಿಸಿದ್ದಾರೆ. ಬಿಜೆಪಿ ಹಣ ದುರುಪಯೋಗಪಡಿಸಿಕೊಂಡು ತನಿಖಾ ಸಂಸ್ಥೆಗಳ ಮೂಲಕ ಜನಾದೇಶವನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಸಾಮಾನ್ಯ ಜನರು ತಮ್ಮಿಚ್ಛೆಯ ಸರ್ಕಾರವನ್ನು ಆಯ್ಕೆ ಮಾಡುವ ಹಕ್ಕು ಹೊಂದಿದ್ದಾರೆ. ಹಿಮಾಚಲದಲ್ಲಿ ಸರ್ಕಾರ ರಚಿಸಲು ಜನರು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಾರೆ. ಆದರೆ ಬಿಜೆಪಿ ಹಣ ದುರ್ಬಳಕೆ ಮಾಡಿಕೊಂಡು ತನಿಖಾ ಸಂಸ್ಥೆಗಳ ಮೂಲಕ ಜನರ ಹಕ್ಕು ಹತ್ತಿಕ್ಕಲು ಯತ್ನಿಸುತ್ತಿದೆ. 25 ಶಾಸಕರನ್ನು ಹೊಂದಿರುವ ಪಕ್ಷವು 43 ಶಾಸಕರ ಬಹುಮತಕ್ಕೆ ಸವಾಲು ಹಾಕುತ್ತಿದೆ. ಬಿಜೆಪಿಯ ಧೋರಣೆ ಅನೈತಿಕ ಮತ್ತು ಸಂವಿಧಾನ ವಿರೋಧಿಯಾಗಿದೆ. ರಾಜ್ಯದ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್​ ಶಾಸಕರು ಅಡ್ಡ ಮತದಾನ ಮಾಡಿರುವುದು ದುರದೃಷ್ಟಕರ. ಪ್ರಸ್ತುತ ಸರಕಾರವನ್ನು ಉಳಿಸುವುದು ತಮ್ಮ ಪಕ್ಷದ ಮೊದಲ ಆದ್ಯತೆ. ಅಡ್ಡ ಮತದಾನದ ಕುರಿತು ನಮ್ಮ ವೀಕ್ಷಕರು ಕೇಂದ್ರ ನಾಯಕತ್ವಕ್ಕೆ ವರದಿ ಸಲ್ಲಿಸಲಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನರು ಪ್ರಧಾನಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ, ಅನುರಾಗ್ ಠಾಕೂರ್ ಮತ್ತು ಜೈರಾಮ್ ಠಾಕೂರ್ ಅವರನ್ನು ತಿರಸ್ಕರಿಸಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ