ಜಯಗಳಿಸಲು 1 ಬಾಲ್ ಗೆ 1 ರನ್ ಬೇಕಾಗಿದ್ದಾಗ ಸಿಕ್ಸರ್ ಸಿಡಿಸಿದ ರಿಂಕು ಸಿಂಗ್..!
ವಿಶಾಖಪಟ್ಟಣಂನಲ್ಲಿ ನಡೆದ ಹೈ-ಸ್ಕೋರಿಂಗ್ ಥ್ರಿಲ್ಲರ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಟೀಮ್ ಇಂಡಿಯಾ (Team India) ತಮ್ಮ ಟಿ20 ವಿಶ್ವಕಪ್ 2024 ರ ತಯಾರಿಯನ್ನು ಗೆಲುವಿನ ಮೂಲಕ ಪ್ರಾರಂಭಿಸಿತು. ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಶನ್ ಅರ್ಧಶತಕ ಬಾರಿಸಿದರೆ, ರಿಂಕು ಸಿಂಗ್ ಫಿನಿಶಿಂಗ್ ಜವಾಬ್ದಾರಿ ನಿರ್ವಹಿಸಿದರು.
ಭಾರತ ಟಾರ್ಗೆಟ್ ಬೆನ್ನಟ್ಟುವ ಕೊನೆಯ 2 ಓವರ್ಗಳಲ್ಲಿ ದೊಡ್ಡ ಡ್ರಾಮವೇ ನಡೆದು ಹೋಯಿತು. ಕೊನೆಯ 1 ಎಸೆತದಲ್ಲಿ ಜಯಕ್ಕೆ 1 ರನ್ ಬೇಕಾಗಿತ್ತು. ಆಗ ರಿಂಕು ಸಿಂಗ್ ಸಿಕ್ಸರ್ ಸಿಡಿಸಿ ಜಯ ತಂದುಕೊಟ್ಟರು. ರಿಂಕು ಸಿಡಿಸಿದ ಸಿಕ್ಸ್ ವಿಡಿಯೋ ಈಗ ಸಖತ್ ವೈರಲ್ ಆಗುತ್ತಿದೆ.
Rinku Singh's heroics gets 🇮🇳 over the line in the 1st #INDvAUS T20I of #IDFCFirstBankT20ITrophy 💙#TeamIndia #JioCinemaSports pic.twitter.com/6F77QT6Kpr
— JioCinema (@JioCinema) November 23, 2023
ಆಟದ ನಂತರ ಮಾತನಾಡಿದ, ರಿಂಕು ಸಿಂಗ್ ಪಂದ್ಯ ಕೊನೆಯ ಎಸೆದವರೆಗೆ ಸಾಗಿದರೆ ಅಲ್ಲಿ ನನಗೆ ಗೆಲ್ಲಿಸಿ ಕೊಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. “ನನ್ನ ಮೇಲೆ ನನಗೆ ವಿಶ್ವಾಸವಿತ್ತು. ನಾನು ಇದನ್ನು ಸಾಕಷ್ಟು ಬಾರಿ ಮಾಡಿದ್ದೇನೆ. ಕಳೆದ ವರ್ಷದ ಐಪಿಎಲ್ನಲ್ಲಿ ಕೂಡ ನಾನು ಈ ಸ್ಥಾನದಲ್ಲಿ ಆಡಿದ್ದೇನೆ,” ಎಂದು ಹೇಳಿದ್ದಾರೆ.
IND vs AUS 2nd T20I: ಭಾರತ-ಆಸ್ಟ್ರೇಲಿಯಾ ದ್ವಿತೀಯ ಟಿ20 ಪಂದ್ಯ ಯಾವಾಗ?, ಎಲ್ಲಿ?: ಇಲ್ಲಿದೆ ಮಾಹಿತಿ
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯನ್ನು ಭಾರತ (India vs Australia) ಭರ್ಜರಿ ಆಗಿ ಆರಂಭಿಸಿದೆ. ಡಾ. ವೈಎಸ್. ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ಗುರುವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ 2 ವಿಕೆಟ್ಗಳ ರೋಚಕ ಜಯ ಸಾಧಿಸಿತು. ಸೂರ್ಯ, ಇಶಾನ್ ಕಿಶನ್ ಹಾಗೂ ರಿಂಕು ಸಿಂಗ್ ಬೊಂಬಾಟ್ ಬ್ಯಾಟಿಂಗ್ ನಡೆಸಿದರು. ಇದೀಗ ಭಾರತ ಎರಡನೇ ಟಿ20 ಪಂದ್ಯದ ಮೇಲೆ ಕಣ್ಣಿಟ್ಟಿದೆ. ಹಾಗಾದರೆ ದ್ವಿತೀಯ ಟಿ20 ಯಾವಾಗ?, ಎಲ್ಲಿ ನಡೆಯಲಿದೆ?. ಇಲ್ಲಿದೆ ನೋಡಿ ಮಾಹಿತಿ.
ಭಾರತ-ಆಸ್ಟ್ರೇಲಿಯಾ ಎರಡನೇ ಟಿ20 ಪಂದ್ಯ ಯಾವಾಗ?
ನವೆಂಬರ್ 26 ಭಾನುವಾರದಂದು ಭಾರತ vs ಆಸ್ಟ್ರೇಲಿಯಾ ದ್ವಿತೀಯ ಟಿ20 ಪಂದ್ಯ ನಡೆಯಲಿದೆ.
ಭಾರತ-ಆಸ್ಟ್ರೇಲಿಯಾ ಎರಡನೇ ಟಿ20 ಪಂದ್ಯ ಎಲ್ಲಿ ಆಡಲಾಗುತ್ತದೆ?
ಭಾರತ ಮತ್ತು ಆಸ್ಟ್ರೇಲಿಯಾ ಎರಡನೇ ಟಿ20 ಪಂದ್ಯ ತಿರುವನಂತಪುರಂನ ಗ್ರೀನ್ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ vs ಆಸ್ಟ್ರೇಲಿಯಾ ಎರಡನೇ ಟಿ20 ಪಂದ್ಯವನ್ನು JioCinema ಅಪ್ಲಿಕೇಶನ್ ಮತ್ತು ವೆಬ್ಸೈಟ್ನಲ್ಲಿ ಲೈವ್ಸ್ಟ್ರೀಮ್ ಮಾಡಲಾಗುತ್ತದೆ. ಅಭಿಮಾನಿಗಳು Sports18 ನೆಟ್ವರ್ಕ್ ಮೂಲಕ ಟಿವಿಯಲ್ಲಿ ವೀಕ್ಷಿಸಬಹುದು.
ಭಾರತ-ಆಸ್ಟ್ರೇಲಿಯಾ ದ್ವಿತೀಯ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ?
ಭಾರತ ಹಾಗೂ ಆಸ್ಟ್ರೇಲಿಯಾ ದ್ವಿತೀಯ ಟಿ20 ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7 ಗಂಟೆಗೆ ಆರಂಭವಾಗಲಿದೆ.
ಉಳಿದ ಪಂದ್ಯ ಯಾವಾಗ?:
- ಮಂಗಳವಾರ, 28 ನವೆಂಬರ್- ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ
- ಶುಕ್ರವಾರ, 1 ಡಿಸೆಂಬರ್- ಶಹೀದ್ ವೀರ್ ನಾರಾಯಣ ಸಿಂಗ್ ಕ್ರೀಡಾಂಗಣ, ರಾಯ್ಪುರ
- ಭಾನುವಾರ, 3 ಡಿಸೆಂಬರ್- ಎಮ್. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಕ್ರೀಡಾಂಗಣ, ಬೆಂಗಳೂರು
ಉಭಯ ತಂಡಗಳು:
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.
ಆಸ್ಟ್ರೇಲಿಯಾ ತಂಡ: ಮ್ಯಾಥ್ಯೂ ವೇಡ್ (ನಾಯಕ), ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್ವೆಲ್, ಮ್ಯಾಟ್ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಜೋಶ್ ಇಂಗ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಸ್ಪೆನ್ಸರ್ ಜಾನ್ಸನ್, ಆ್ಯಡಂ ಝಂಪಾ, ತನ್ವೀರ್ ಸಂಘ.