ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಗ್ ಬಾಸ್‌ ಸ್ಪರ್ಧಿಗಳ ಫ್ಯಾನ್ಸ್‌ ನಡುವೆ ಗಲಾಟೆ..!

Twitter
Facebook
LinkedIn
WhatsApp
ಬಿಗ್ ಬಾಸ್‌ ಸ್ಪರ್ಧಿಗಳ ಫ್ಯಾನ್ಸ್‌ ನಡುವೆ ಗಲಾಟೆ..!

ಬಿಗ್ ಬಾಸ್ ತೆಲುಗು ಸೀಸನ್ 7ರ ಗ್ರ್ಯಾಂಡ್ ಫಿನಾಲೆ ಡಿಸೆಂಬರ್ 17ರಂದ ನಡೆದಿದೆ. ಯುಟ್ಯೂಬರ್ ಹಾಗೂ ರೈತನಾಗಿ ಗುರುತಿಸಿಕೊಂಡಿರುವ ಪಲ್ಲವಿ ಪ್ರಶಾಂತ್ ವಿನ್ನರ್ ಟ್ರೋಫಿ ಹಿಡಿದಿದ್ದಾರೆ. ಎರಡನೇ ಸ್ಥಾನವನ್ನು ಅಮರ್‌ದೀಪ್ ಚೌದ್ರಿ ಪಡೆದಿದ್ದಾರೆ. ಒಳಗೆ ಗ್ರ್ಯಾಂಡ್ ಫಿನಾಲೆ ನಡೆಯುತ್ತಿದ್ದು ಹೊರಗಡೆ ಅಭಿಮಾನಿಗಳು ಕಾಯುತ್ತಿದ್ದರು. ವಿನ್ನರ್ ಹಾಗೂ ರನ್ನರ್ ಘೋಷಣೆ ಆಗುತ್ತಿದ್ದರಂತೆ ಗಲಾಟೆ ಶುರು ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಗಲಾಟೆ ಫೋಟೋ ಮತ್ತು ವಿಡಿಯೋ ಹರಿದಾಡುತ್ತಿದ್ದರು ನೆಟ್ಟಿಗರು ಬೇಸರ ವ್ಯಕ್ತ ಪಡಿಸಿದ್ದಾರೆ.

ಅನ್ನಪೂರ್ಣ ಸ್ಟುಡಿಯೋಸ್‌ನಲ್ಲಿ ನಡೆಯುತ್ತಿರುವ ಗ್ರ್ಯಾಂಡ್‌ ಫಿನಾಲೆ ನೋಡಲು ಅಮರ್‌ದೀಪ್ ಮತ್ತು ಪಲ್ಲವಿ ಪ್ರಶಾಂತ್ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ವಿನ್ನರ್ ಘೋಷಣೆ ಆಗುತ್ತಿದ್ದಂತೆ ಪ್ರಶಾಂತ್ ಅಭಿಮಾನಿಗಳು ಸಂಭ್ರಮ ಶುರು ಮಾಡಿದ್ದಾರೆ. ಅದೇ ಸಮಯದಕ್ಕೆ ಅಮರ್‌ದೀಪ್‌ ಅಭಿಮಾನಿಗಳು ಅಲೇ ಇದ್ದರು….ಇಬ್ಬರ ನಡುವೆ ವಾಗ್ವಾದ ವಿಕೋಪಕ್ಕೆ ಹೋಗಿತ್ತು. ಎರಡೂ ಅಭಿಮಾನಿಗಳ ಗುಂಪು ಪರಸ್ಪರ ತಳ್ಳಾಡಿ ಗುದ್ದಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅದೇ ವೇಳೆ ಕುಂದಾಪುರ- ಸಿಕಂದರ್‌ಬಾದ್‌ ಕಡೆ ಸಾಗುತ್ತಿದ್ದ ಆರ್‌ಟಿಸಿ ಬಸ್ ಮೇಲೆ ದಾಳಿ ಮಾಡಿ ಗಾಜು ಪುಡಿಪುಡಿ ಮಾಡಿದ್ದಾರೆ.

ರನ್ನರ್ ಟ್ರೋಫಿ ಹಿಡಿದು ಅಮರ್‌ದೀಪ್‌ ಕಾರಿನ ಬಳಿ ಬರುತ್ತಿದ್ದಂತೆ ಆಕ್ರೋಶ ಹೆಚ್ಚಾಗಿದೆ. ಅಮರ್‌ ಇದ್ದ ಕಾರಿನ ಗಾಜು ಪುಡಿ ಪುಡಿ ಮಾಡಿದ್ದಾರೆ. ಹೊರ ಬರುವಂತೆ ಒತ್ತಾಯ ಮಾಡಿದ್ದಾರೆ. ಅಲ್ಲದೆ ಕಾರಿನಲ್ಲಿ ಅಮರ್‌ದೀಪ್ ತಾಯಿ ಮತ್ತು ಪತ್ನಿ ಗಾಬರಿ ಆಗಿದ್ದಾರೆ. ತಕ್ಷಣವೇ ಪೊಲೀಸರು ಬಂದು ಸುರಕ್ಷಿತಾವಾಗಿ ಮನೆ ತಲುಪಲು ಸಹಾಯ ಮಾಡಿದ್ದಾರೆ. ಇಬ್ಬರು ಸ್ಪರ್ಧಿಗಳ ಅಭಿಮಾನಿಗಳು ಮೇಳೆ ಪೊಲೀಸರು ದೂರು ದಾಖಲಿಸಿದ್ದಾರೆ. ಅಟವನ್ನು ಆಟದ ರೀತಿಯಲ್ಲಿ ನೋಡಬೇಕು ಸ್ಪರ್ಧಿಸಬೇಕು ಪರ್ಸನಲ್‌ ಆಗಿ ತೆಗೆದುಕೊಳ್ಳಬಾರದು ಎಂದು ನೆಟ್ಟಿಗರು ಗರಂ ಆಗಿದ್ದಾರೆ. ಅಷ್ಟೇ ಅಲ್ಲದೆ ಬಿಗ್ ಬಾಸ್ ಸ್ಪರ್ಧಿ ಅಶ್ವಿನಿ ಶ್ರೀ ಕಾರಿನ ಗಾಜು ಪುಡಿ ಆಗಿರುವುದರ ಬಗ್ಗೆ ವಿಡಿಯೋ ಮಾಡಿ ಬೇಸರ ವ್ಯಕ್ತ ಪಡಿಸಿದ್ದಾರೆ.

ತಾವು ಓದಿದ್ದ ಕೆರಾಡಿ ಕನ್ನಡ ಶಾಲೆ ದತ್ತು ಪಡೆದ ನಟ ರಿಷಬ್‌ ಶೆಟ್ಟಿ

ಕುಂದಾಪುರ (ಡಿ.18): ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ ರಿಷಭ್​ ಶೆಟ್ಟಿ ಅವರು, ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೆ ನಿಜಜೀವನದಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ತಾವು ಓದಿದ್ದ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದುಕೊಂಡಿದ್ದಾರೆ.

ಇತ್ತೀಚಿಗೆ ಕೆರಾಡಿಗೆ ಭೇಟಿ ನೀಡಿದ್ದ ಅವರು, ಸರ್ಕಾರಿ ಶಾಲೆಗಳನ್ನು ಉಳಿಸುವ ಮತ್ತು ಬೆಳೆಸುವ ಬಗ್ಗೆ ಮಾತನಾಡಿದ್ದರು. ಈ ವೇಳೆ ಗ್ರಾಮದ ಪ್ರಮುಖರು ರಿಷಭ್​ ಶೆಟ್ಟಿ ಅವರನ್ನು ಅಭಿನಂದಿಸಿ ಶುಭಹಾರೈಸಿದ್ದಾರೆ.

ಭಾನುವಾರ ನಡೆದ ಎಸ್‌ಡಿಎಂಸಿ ಸಭೆಯಲ್ಲಿ ರಿಷಬ್‌ ಶೆಟ್ಟಿ ಅವರು, ಶಾಲೆಯನ್ನು ದತ್ತು ತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸಿದರು.

ಮೂರು ದಶಕಗಳ ಹಿಂದೆ ಶಾಲೆಯಲ್ಲಿ 400 ಮಂದಿ ಮಕ್ಕಳಿದ್ದರು. ಆದರೆ ಪ್ರಸ್ತುತ 71 ಮಂದಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಒಬ್ಬರು ಖಾಯಂ ಶಿಕ್ಷಕರಿದ್ದಾರೆ. ಉಳಿದವರು ಗೌರವ ಶಿಕ್ಷಕರಾಗಿದ್ದಾರೆ. ನಾನು ಸ್ವತಃ ಈ ಶಾಲೆಯ ಸ್ಥಿತಿಗತಿಯನ್ನು ತಿಳಿದುಕೊಂಡಿದ್ದು, ರಿಷಬ್‌ ಫೌಂಡೇಶನ್‌ ಮುಂದಿನ ಶೈಕ್ಷಣಿಕ ವರ್ಷದಿಂದ 5 ವರ್ಷಗಳ ಅವಧಿಗೆ ಈ ಶಾಲೆಯನ್ನು ದತ್ತು ಪಡೆದಿದೆ. ಮೂಲಭೂತ ಸೌಕರ್ಯ ಸಹಿತ ಕೊಠಡಿ, ಪ್ರತೀ ತರಗತಿಗೆ ಶಿಕ್ಷಕರು, ಆವರಣ ಗೋಡೆ, ಅಗತ್ಯವಿದ್ದರೆ ವಾಹನದ ವ್ಯವಸ್ಥೆ ಕಲ್ಪಿಸಲಿದೆ. ಇದಲ್ಲದೆ ಎಲ್‌ಕೆಜಿ – ಯುಕೆಜಿ, ನ್ಪೋಕನ್‌ ಇಂಗ್ಲಿಷ್‌ ಕಲಿಕೆ ಆರಂಭಿಸುವ ಯೋಜನೆಯಿದೆ ಎಂದು ಹೇಳಿದರು.

ರಿಷಬ್ ಶೆಟ್ಟಿಯವರು ಹೆಚ್ಚುವರಿ ಶಿಕ್ಷಕರ ನೇಮಕಹಾಗೂ ಸ್ಪೋಕನ್ ಇಂಗ್ಲಿಷ್ ತರಗತಿಯನ್ನು ಪರಿಚಯಿಸುವ ಮೂಲಕ ಶಾಲೆಯ ಶೈಕ್ಷಣಿಕ ವಾತಾವರಣವನ್ನು ಬದಲಾಯಿಸಲು ಬಯಸುತ್ತಿದ್ದಾರೆ. ಶೀಘ್ರದಲ್ಲೇ ಇಲಾಖೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆಂದು ಉಡುಪಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist