ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭರ್ಜರಿ ಶತಕ ಭಾರಿಸಿದ ರೋಹಿತ್ ಶರ್ಮ ಮತ್ತು ರವೀಂದ್ರ ಜಡೇಜಾ..!

Twitter
Facebook
LinkedIn
WhatsApp
ಭರ್ಜರಿ ಶತಕ ಭಾರಿಸಿದ ರೋಹಿತ್ ಶರ್ಮ ಮತ್ತು ರವೀಂದ್ರ ಜಡೇಜಾ..!

ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. 4ನೇ ವಿಕೆಟ್​ಗೆ ಜೊತೆಗೂಡಿದ ಈ ಜೋಡಿ ಶತಕದ ಜೊತೆಯಾಟದೊಂದಿಗೆ ಭಾರತ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ರೋಹಿತ್ ಶರ್ಮಾ ಭರ್ಜರಿ ಶತಕ

ರಾಜ್ಕೋಟ್ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ.

ನಿರೀಕ್ಷಿತ ಆರಂಭ ಪಡೆಯುವಲ್ಲಿ ಟೀಮ್ ಇಂಡಿಯಾ ವಿಫಲವಾಯಿತು. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (10) ಬೇಗನೆ ಔಟಾದರೆ, ಶುಭ್​ಮನ್ ಗಿಲ್ (0) ಶೂನ್ಯದೊಂದಿಗೆ ಮರಳಿದ್ದರು. ರಜತ್ ಪಾಟಿದಾರ್ ಕಲೆಹಾಕಿದ್ದು ಕೇವಲ 5 ರನ್​ಗಳು ಮಾತ್ರ. ಇದಾಗ್ಯೂ ಒಂದೆಡೆ ರೋಹಿತ್ ಶರ್ಮಾ ಕ್ರೀಸ್ ಕಚ್ಚಿ ನಿಂತಿದ್ದರು.

ರವೀಂದ್ರ ಜೊತೆಗೂಡಿ 4ನೇ ವಿಕೆಟ್​ಗೆ 150* ರನ್​ಗಳ ಜೊತೆಯಾಟವಾಡಿದ ರೋಹಿತ್ ಶರ್ಮಾ ಭಾರತ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಅಲ್ಲದೆ 157 ಎಸೆತಗಳಲ್ಲಿ 11 ಫೋರ್ ಹಾಗೂ 2 ಭರ್ಜರಿ ಸಿಕ್ಸರ್​ನೊಂದಿಗೆ ಆಕರ್ಷಕ ಶತಕ ಪೂರೈಸಿದರು.

ಇದು ರೋಹಿತ್ ಶರ್ಮಾ ಅವರ 11ನೇ ಟೆಸ್ಟ್ ಶತಕ ಎಂಬುದು ವಿಶೇಷ. ಅಂದರೆ ಇದುವರೆಗೆ 97 ಟೆಸ್ಟ್ ಇನಿಂಗ್ಸ್ ಆಡಿರುವ ಹಿಟ್​ಮ್ಯಾನ್ 1 ದ್ವಿಶತಕ, ಹತ್ತು ಶತಕ ಹಾಗೂ 17 ಅರ್ಧಶತಕಗಳೊಂದಿಗೆ 3925 ರನ್​ಗಳನ್ನು ಕಲೆಹಾಕಿದ್ದಾರೆ.

ರವೀಂದ್ರ ಜಡೇಜಾ ಅಜೇಯ ಶತಕ 

ರಾಜ್‌ಕೋಟ್‌ ಟೆಸ್ಟ್ನಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊರತಾಗಿ ಆಲ್‌ರೌಂಡರ್ ರವೀಂದ್ರ ಜಡೇಜಾ ಕೂಡ ದಿನದಾಟದಂತ್ಯಕ್ಕೆ ಅಜೇಯ ಶತಕ ಸಿಡಿಸಿ ಮಿಂಚಿದ್ದಾರೆ. ಆರಂಭದಲ್ಲೇ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಟೀಂ ಇಂಡಿಯಾ ಇನ್ನಿಂಗ್ಸ್ಗೆ ರೋಹಿತ್ ಶರ್ಮಾ ಜೊತೆ ಸೇರಿ ಜಡೇಜಾ ಬೂಸ್ಟ್ ನೀಡಿದರು.

ಸಂಕಷ್ಟದ ಪರಿಸ್ಥಿತಿಯಲ್ಲಿ ಬ್ಯಾಟಿಂಗ್‌ಗೆ ಬಂದ ರವೀಂದ್ರ ಜಡೇಜಾ ಮೊದಲು ನಾಯಕ ರೋಹಿತ್ ಶರ್ಮಾ ಜೊತೆಗೆ ಭಾರತದ ಇನ್ನಿಂಗ್ಸ್‌ ನಿಭಾಯಿಸಿದರು. ಇದರ ನಂತರ ಜಡೇಜಾ ತಮ್ಮ ಟೆಸ್ಟ್ ವೃತ್ತಿಜೀವನದ ನಾಲ್ಕನೇ ಶತಕವನ್ನು ಪೂರ್ಣಗೊಳಿಸಿದರು.

ಜಡೇಜಾ ಬ್ಯಾಟಿಂಗ್‌ಗೆ ಬಂದಾಗ ಭಾರತ ತನ್ನ ಮೊದಲ ಮೂರು ಪ್ರಮುಖ ವಿಕೆಟ್‌ಗಳನ್ನು ಕೇವಲ 33 ರನ್‌ಗಳಿಗೆ ಕಳೆದುಕೊಂಡಿತ್ತು. ನಂತರ ರವೀಂದ್ರ ಜಡೇಜಾ ರೋಹಿತ್ ಶರ್ಮಾ ಅವರೊಂದಿಗೆ 200 ಕ್ಕೂ ಹೆಚ್ಚು ರನ್‌ಗಳ ಜೊತೆಯಾಟವನ್ನು ಮಾಡಿ ಭಾರತವನ್ನು ಬಲಿಷ್ಠ ಸ್ಥಿತಿಗೆ ತಂದರು.

2018ರಲ್ಲಿ ಭಾರತ ಪ್ರವಾಸದಲ್ಲಿದ್ದ ವೆಸ್ಟ್ ಇಂಡೀಸ್ ವಿರುದ್ಧ ರವೀಂದ್ರ ಜಡೇಜಾ ಅಜೇಯ 100 ರನ್ ಗಳಿಸಿದ್ದರು. ಇದಾದ ನಂತರ ರಾಜ್‌ಕೋಟ್‌ನಲ್ಲಿ ರವೀಂದ್ರ ಜಡೇಜಾ ಅವರ ಎರಡನೇ ಬ್ಯಾಕ್ ಟು ಬ್ಯಾಕ್ ಶತಕ ಇದಾಗಿದೆ.

ಜಡೇಜಾಗೂ ಮೊದಲು ನಾಯಕ ರೋಹಿತ್ ಶರ್ಮಾ ಕೂಡ 196 ಎಸೆತಗಳನ್ನು ಎದುರಿಸಿ 131 ರನ್​ಗಳ ಶತಕ ಸಿಡಿಸಿದರು. ರೋಹಿತ್ ಅವರ ಇನ್ನಿಂಗ್ಸ್‌ನಲ್ಲಿ 14 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್ ಕೂಡ ಸಿಡಿದವು. ಇದು ರೋಹಿತ್ ಶರ್ಮಾ ಅವರ ಟೆಸ್ಟ್ ವೃತ್ತಿ ಬದುಕಿನ 11ನೇ ಶತಕವಾಗಿತ್ತು. ಅಲ್ಲದೆ ಇದು ಟೆಸ್ಟ್ ನಾಯಕನಾಗಿ ರೋಹಿತ್ ಶರ್ಮಾ ಅವರ ಟೆಸ್ಟ್ ವೃತ್ತಿಜೀವನದ ಮೂರನೇ ಶತಕವಾಗಿದೆ.

ಸರ್ಫರಾಜ್ ಖಾನ್ ಅರ್ಧಶತಕ

ಸರ್ಫರಾಜ್ ಖಾನ್ ಅರ್ಧಶತಕ


   ರೋಹಿತ್ ಶರ್ಮಾ ಔಟಾದ ನಂತರ ಜೊತೆಯಾದ ರವೀಂದ್ರ ಜಡೇಜಾ ಮತ್ತು ಸರ್ಫರಾಜ್ ಖಾನ್ ತಂಡದ ಇನ್ನಿಂಗ್ಸ್ ಮುನ್ನಡೆಸಿದರು. ಇವರಿಬ್ಬರು ಐದನೇ ವಿಕೆಟ್‌ಗೆ 77 ರನ್‌ಗಳ ಜೊತೆಯಾಟ ನೀಡಿದರು. ಆದರೆ ರವೀಂದ್ರ ಜಡೇಜಾ ಅವರ ರಾಂಗ್ ಕಾಲ್ನಿಂದಾಗಿ ಸರ್ಫರಾಜ್ ಖಾನ್ ರನ್ ಔಟ್ ಆಗಬೇಕಾಯಿತು. ಸರ್ಫರಾಜ್ 66 ಎಸೆತಗಳಲ್ಲಿ 9 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 62 ರನ್ ಗಳಿಸಿದರು. ಮೊದಲ ದಿನದಾಟದ ಅಂತ್ಯಕ್ಕೆ ರವೀಂದ್ರ ಜಡೇಜಾ 110 ರನ್ ಹಾಗೂ ಕುಲ್ದೀಪ್ ಯಾದವ್ 1 ರನ್ ಗಳಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist