ಗುರುವಾರ, ಮಾರ್ಚ್ 28, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Rolls Royce: 10 ಕೋಟಿ ಮೌಲ್ಯದ ದುಬಾರಿ ಕಾರು ಖರೀದಿಸಿದ ಶಾರುಖ್‌ ಖಾನ್‌

Twitter
Facebook
LinkedIn
WhatsApp
Shah Rukh Khan Rolls Royce Cullinan

ಬಾಲಿವುಡ್ (Bollywood) ಕಿಂಗ್ ಖಾನ್ ಶಾರುಖ್ `ಪಠಾಣ್’ (Pathaan)  ಚಿತ್ರದ ಸೂಪರ್ ಸಕ್ಸಸ್ ನಂತರ ಇದೀಗ ದುಬಾರಿ ಕಾರೊಂದನ್ನ ಖರೀದಿಸಿದ್ದಾರೆ. ಈ ಮೂಲಕ ಬಾದಶಾ ಸುದ್ದಿಯಲ್ಲಿದ್ದಾರೆ. ಸದ್ಯ ಕಾರ್ ವೀಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

ಶಾರುಖ್ ಖಾನ್- ದೀಪಿಕಾ ಪಡುಕೋಣೆ (Deepika Padukone) ನಟನೆಯ `ಪಠಾಣ್’ ಸಿನಿಮಾ ಭರ್ಜರಿ ಸಕ್ಸಸ್ ಕಂಡಿದೆ. ಸಿನಿಮಾ ಕಥೆ ಮತ್ತು ಆ್ಯಕ್ಷನ್ ಸೀಕ್ವೆನ್ಸ್‌ ಫ್ಯಾನ್ಸ್ ಫಿದಾ ಆಗಿದ್ದಾರೆ. `ಪಠಾಣ್’ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ 1000 ಕೋಟಿ ರೂ. ಬಾಚಿದೆ. 

ಈ ಸಕ್ಸಸ್ ಬೆನ್ನಲ್ಲೇ ಶಾರುಖ್ ಖಾನ್ ಹೊಸ ಕಾರು ಖರೀದಿಸಿದ್ದಾರೆ. ಶಾರುಖ್ ಮನೆ ಮನ್ನತ್‌ನಲ್ಲಿ ಕಳೆದೆರಡು ದಿನಗಳಿಂದ ಹೊಸ ಕಾರು ರೌಂಡ್ ಹೊಡಿತಿದೆ. ಶಾರುಖ್ ಬಿಳಿ ಬಣ್ಣದ Rolls Royce Cullinan Black Badge ಕಾರಿನ ಒಡೆಯನಾಗಿದ್ಧಾರೆ. ಈ ಕಾರಿನ ಬೆಲೆ ಅಂದಾಜು 10 ಕೋಟಿ ರೂ.ಗೂ ಅಧಿಕ ಎನ್ನಲಾಗುತ್ತಿದೆ.

 ಭಾನುವಾರ ಕಿಂಗ್ ಖಾನ್ ಹೊಸ ಕಾರಿನಲ್ಲಿ ಸುತ್ತಾಡಲು ತೆರಳಿದ್ದಾರೆ. ಅದಕ್ಕೆ ಸಂಬಂಧಿಸಿದ ವಿಡಿಯೋಗಳು ಸಖತ್ ವೈರಲ್ ಆಗ್ತಿದೆ. ಕೆಲ ದಿನಗಳ ಹಿಂದೆ ಬಾಲಿವುಡ್ ಬಾದಶಾ 5 ಕೋಟಿ ರೂ. ಬೆಲೆ ವಾಚ್ ಧರಿಸಿ ಗಮನ ಸೆಳೆದಿದ್ದರು.

`ಪಠಾಣ್’ ಸಿನಿಮಾ ಸಕ್ಸಸ್ ನಂತರ `ಜವಾನ್’ ಚಿತ್ರದಲ್ಲಿ ಶಾರುಖ್ ಖಾನ್ (Sharukh Khan) ಬ್ಯುಸಿಯಾಗಿದ್ದಾರೆ. ನಯನತಾರಾ (Nayanatara) ಜೊತೆ ಶಾರುಖ್ ರೊಮ್ಯಾನ್ಸ್ ಮಾಡಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ