ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

RRR ಚಿತ್ರದ 'ನಾಟು ನಾಟು' ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ; ರಾಜಮೌಳಿ ಚಿತ್ರಕ್ಕೆ ಮತ್ತೊಂದು ಕಿರೀಟ

Twitter
Facebook
LinkedIn
WhatsApp
RRR ಚಿತ್ರದ 'ನಾಟು ನಾಟು' ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ; ರಾಜಮೌಳಿ ಚಿತ್ರಕ್ಕೆ ಮತ್ತೊಂದು ಕಿರೀಟ

‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು (Naatu Naatu Song) ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಹಾಡು ವಿಶ್ವಮಟ್ಟದಲ್ಲಿ ಸೌಂಡ್ ಮಾಡಿದೆ. ಇಂಗ್ಲಿಷ್ ಹಾಡುಗಳನ್ನು ಹಿಂದಿಕ್ಕಿ ‘ನಾಟು ನಾಟು..’ ಪ್ರಶಸ್ತಿ ಬಾಚಿಕೊಂಡಿದೆ.

ಡಿಫರೆಂಟ್ ಡೈರೆಕ್ಟರ್ ರಾಜಮೌಳಿ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ಆರ್‌ಆರ್‌ಆರ್‌ (RRR) ಆಸ್ಕರ್ 2023 ಪ್ರಶಸ್ತಿ ಪಡೆದುಕೊಂಡಿದೆ. ‘ಆರ್​ಆರ್​ಆರ್​’ ಮತ್ತು ತಂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಚಿತ್ರದ ನಿರ್ದೇಶಕ ಎಸ್​.ಎಸ್​.ರಾಜಮೌಳಿ, ನಟ ಜೂ.ಎನ್​ಟಿಆರ್, ರಾಮ್ ಚರಣ್​, ಸಂಗೀತ ಸಂಯೋಜಕ ಎಂ.ಎಂ. ಕೀರವಾಣಿ ಮೊದಲಾದವರು ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ.  

ಆಸ್ಕರ್​ ಕಾರ್ಯಕ್ರಮವನ್ನು ನೋಡಲು ಅವಕಾಶವಿದ್ದು, ಹುಲು ಲೈವ್ ಟಿವಿನಲ್ಲಿ ಇದನ್ನು ನೋಡಬಹುದು. ಜೊತೆಗೆ ಯೂಟ್ಯೂಬ್‌ನಲ್ಲೂ  ಉಚಿತವಾಗಿ ವೀಕ್ಷಿಸಬಹುದು. ಎಟಿ ಆ್ಯಂಡ್ ಟಿ ಟಿವಿ ಹಾಗೂ ಫುಬೋ ಟಿವಿಯಲ್ಲಿ ಕಾರ್ಯಕ್ರಮ ವೀಕ್ಷಣೆಗೆ ಅವಕಾಶ ಇದೆ. ಎಬಿಸಿ ವೆಬ್​ಸೈಟ್​ನಲ್ಲಿ ಆಸ್ಕರ್ ಕಾರ್ಯಕ್ರಮ ಉಚಿತವಾಗಿ ವೀಕ್ಷಿಸಬಹುದಾಗಿದೆ.ಆಸ್ಕರ್ 2023 ಸಮಾರಂಭಕ್ಕೆ ಬಾಲಿವುಡ್ ಸ್ಟಾರ್  ದೀಪಿಕಾ ಪಡುಕೋಣೆ ಎಂಟ್ರಿ ಕೊಡುತ್ತಿದ್ದಾರೆ. 

ಆಸ್ಕರ್ ಕಾರ್ಯಕ್ರಮದ ಪ್ರಮುಖ ಆಕರ್ಷಣೆಗಳಲ್ಲಿ ದೀಪಿಕಾ ಕೂಡ ಒಬ್ಬರಾಗಿದ್ದಾರೆ. ಅಷ್ಟಕ್ಕೂ ದೀಪಿಕಾ ಯಾಕೆ ಆಸ್ಕರ್ ವೇದಿಕೆಯಲ್ಲಿ ಅಂತೀರಾ? ಈ ಬಾರಿಯ ಆಸ್ಕರ್ ಸಮಾರಂಭದಲ್ಲಿ ದೀಪಿಕಾ ನಿರೂಪಕರಲ್ಲಿ ಒಬ್ಬರಾಗಿದ್ದಾರೆ. ಹಾಲಿವುಡ್‌ನ ಖ್ಯಾತ ಕಲಾವಿದರ ಜೊತೆ ಬಾಲಿವುಡ್ ಸ್ಟಾರ್ ಕೂಡ ಒಬ್ಬರಾಗಿರುವುದು ವಿಶೇಷವಾಗಿದೆ. ಡ್ವೇನ್ ಜಾನ್ಸನ್, ಎಮಿಲಿ ಬ್ಲಂಟ್, ಮೈಕೆಲ್ ಬಿ. ಜೋರ್ಡಾನ್ ಸೇರಿದಂತೆ ಇನ್ನು ಅನೇಕರ ಜೊತೆಗೆ ದೀಪಿಕಾ ಕೂಡ ಇರುವುದು ಭಾರತೀಯರಿಗೆ ಹೆಮ್ಮೆಯ ವಿಚಾರವಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ