ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಷ್ಯಾ: 15 ಜನರಿದ್ದ ಸೇನಾ ಸರಕು ಸಾಗಣೆ ವಿಮಾನ ಪತನ; 15 ಮಂದಿ ಸಾವು!

Twitter
Facebook
LinkedIn
WhatsApp
Pinterest
ರಷ್ಯಾ: 15 ಜನರಿದ್ದ ಸೇನಾ ಸರಕು ಸಾಗಣೆ ವಿಮಾನ ಪತನ; 15 ಮಂದಿ ಸಾವು!

ರಾಜಧಾನಿಯ ಈಶಾನ್ಯ ಇವಾನೊವೊ ಪ್ರದೇಶದ ಬಳಿ 15 ಜನರಿದ್ದ ರಷ್ಯಾದ ಮಿಲಿಟರಿ ಸರಕು ವಿಮಾನವೊಂದು ಮಂಗಳವಾರ ಪತನಗೊಂಡಿದ್ದು, ಎಲ್ಲರೂ ಸಾವನ್ನಪ್ಪಿದ್ದಾರೆ. Il-76 ವಿಮಾನವು ಟೇಕ್ ಆಫ್ ಆದ ಕೆಲ ಸಮಯದಲ್ಲೇ ಇಂಜಿನ್​ನಲ್ಲಿ ಬೆಂಕಿ ಹೊತ್ತಿಕೊಂಡು ಪತನಗೊಂಡಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ತಿಳಿಸಿದೆ.

ಇವಾನೊವೊ ಗವರ್ನರ್ ಸ್ಟಾನಿಸ್ಲಾವ್ ವೊಸ್ಕ್ರೆಸೆನ್ಸ್ಕಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಟೇಕಾಫ್‌ ವೇಳೆ ಎಂಜಿನ್‌ನಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಅಪಘಾತಕ್ಕೆ ಕಾರಣ ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಅಧಿಕಾರಿಗಳ ತಂಡವು ತನಿಖೆ ನಡೆಸಲು ಇವಾನೊವೊಗೆ ತೆರಳಿದೆ.

ಸೇನಾ ಕಾರ್ಗೋ ವಿಮಾನ ಪತನವಾದಾಗ ಎಂಟು ಸಿಬ್ಬಂದಿ ಮತ್ತು ಏಳು ಮಂದಿ ಪ್ರಯಾಣಿಕರು ಸೇರಿದಂತೆ 15 ಜನರು ವಿಮಾನದಲ್ಲಿದ್ದರು. ಪ್ರಯಾಣಿಕರು ಯಾರು, ಮತ್ತು ಎಲ್ಲಿಗೆ ಹೋಗುತ್ತಿದ್ದರು ಎಂಬುದು ಸ್ಪಷ್ಟವಾಗಿಲ್ಲ. ರಷ್ಯಾದ ಮಾಧ್ಯಮ ನ್ಯೂಯಾರ್ಕ್ ಪೋಸ್ಟ್ ವಿಮಾನದ ಎಂಜಿನ್ ಹೊತ್ತಿ ಉರಿಯುತ್ತಿರುವ ವಿಡಿಯೋವೊಂದನ್ನು ಪ್ರಸಾರ ಮಾಡಿದೆ. ನಾಲ್ಕು- ಎಂಜಿನ್ Il-76 ಹೆವಿ-ಲಿಫ್ಟ್ ಸಾರಿಗೆ ವಿಮಾನ ಇದಾಗಿದ್ದು, 1970 ರ ದಶಕದಿಂದ ಸೋವಿಯತ್ ಮತ್ತು ನಂತರ ರಷ್ಯಾದ ವಾಯುಪಡೆಯೊಂದಿಗೆ ಸೇವೆಯಲ್ಲಿತ್ತು ಎಂದು ಆನ್‌ಲೈನ್ ಸುದ್ದಿವಾಹಿನಿಗಳಲ್ಲಿ ವರದಿಯಾಗಿದೆ.

“ಮಾಸ್ಕೋ ಸ್ಥಳೀಯ ಸಮಯ ಸುಮಾರು ಮಧ್ಯಾಹ್ನ 1 ಗಂಟೆಗೆ, ಇವಾನೊವೊ ಪ್ರದೇಶದಲ್ಲಿ ಟೇಕಾಫ್ ಆಗುವಾಗ Il-76 ಮಿಲಿಟರಿ ಸಾರಿಗೆ ವಿಮಾನ ಅಪಘಾತಕ್ಕೀಡಾಯಿತು” ಎಂದು ರಕ್ಷಣಾ ಸಚಿವಾಲಯದ ಮಾಹಿತಿ ಉಲ್ಲೇಖಿಸಿ, ಸರ್ಕಾರಿ ಸ್ವಾಮ್ಯದ TASS ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸೆವೆರ್ನಿ ವಿಮಾನ ನಿಲ್ದಾಣದಿಂದ ವಿಮಾನ ಟೇಕಾಫ್ ಆದ ತಕ್ಷಣವೇ ಎಂಜಿನ್‌ಗೆ ಬೆಂಕಿ ಹೊತ್ತಿಕೊಂಡಿದೆ. ಪೈಲಟ್‌ಗಳು ತುರ್ತು ಲ್ಯಾಂಡಿಂಗ್‌ಗಾಗಿ ಏರ್‌ಫೀಲ್ಡ್‌ಗೆ ಮರಳಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಎಂದು ಹೇಳಲಾಗುತ್ತಿದೆ.

ರಷ್ಯಾದಲ್ಲಿ ಈ ವರ್ಷ ಸಂಭವಿಸಿದ ಎರಡನೇ ವಿಮಾನ ಅಪಘಾತ ಇದಾಗಿದೆ. ಇದಕ್ಕೂ ಮುನ್ನ ಜನವರಿ 24 ರಂದು ಉಕ್ರೇನಿಯನ್ ಸಶಸ್ತ್ರ ಪಡೆಗಳು 65 ಉಕ್ರೇನಿಯನ್ ಯುದ್ಧ ಕೈದಿಗಳು ಸೇರಿದಂತೆ 74 ಜನರನ್ನು ಹೊತ್ತ ವಿಮಾನವನ್ನು ಹೊಡೆದುರುಳಿಸಿದ್ದವು. ಅವರೆಲ್ಲರೂ ಸಾವನ್ನಪ್ಪಿದ್ದಾರೆ ಎಂದು TASS ವರದಿ ಮಾಡಿತ್ತು. 24 ಜೂನ್ 2022 ರಂದು ರಿಯಾಜಾನ್‌ನಲ್ಲಿ ಮತ್ತೊಂದು ಅಪಘಾತ ಸಂಭವಿಸಿತ್ತು. ಅದರಲ್ಲಿ ಐದು ಜನರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು. ಇಂಜಿನ್ ವೈಫಲ್ಯವೇ ಘಟನೆಗೆ ಪ್ರಮುಖ ಕಾರಣವಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ