ಕಾಂಗ್ರೆಸ್ ಸೇರಿದ ಬಿಎಸ್ ಯಡಿಯೂರಪ್ಪ ಅವರ ಸಂಬಂಧಿ, ಕುಂದಗೋಳ ಕ್ಷೇತ್ರದ ಮಾಜಿ ಶಾಸಕ ಎಸ್.ಐ. ಚಿಕ್ಕನಗೌಡರ
ಕುಂದಗೋಳ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಂಬಂಧಿ ಎಸ್.ಐ. ಚಿಕ್ಕನಗೌಡರ (S I Chikkanagowdara) ಅವರು ಭಾನುವಾರ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಇವರು ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ. ಎರಡು ವಾರಗಳ ಹಿಂದಷ್ಟೇ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು. ಇದಕ್ಕೂ ಮುನ್ನ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
S I Chikkanagowdara ಅವರು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಚಿಕ್ಕನಗೌಡ ಅವರೊಂದಿಗೆ ಶಿಗ್ಗಾವಿಯ ಬಿಜೆಪಿಯ ಕೆಲವು ಮುಖಂಡರು ಸಹ ಕಾಂಗ್ರೆಸ್ ಸೇರಿದರು.
ಚಿಕ್ಕನಗೌಡರ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಅವರು ಕಳೆದ ಕೆಲ ದಿನಗಳ ಹಿಂದೆ ತಾವು ಕಾಂಗ್ರೆಸ್ ಸೇರುವುದಾಗಿ ಬಹಿರಂಗವಾಗಿ ಹೇಳಿದ್ದರು.
ಚಿಕ್ಕನಗೌಡರ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.
ಪರಸ್ಪರ ಶ್ಲಾಘಿಸಿಕೊಂಡ ಸಿದ್ದರಾಮಯ್ಯ – ಕುಮಾರಸ್ವಾಮಿ!
ಬೆಂಗಳೂರು: ಜೆಡಿಎಸ್ (JDS) ರಾಜ್ಯದಲ್ಲಿ ಬರಪರಿಸ್ಥಿತಿಯ ವೀಕ್ಷಣೆಗೆ ರೈತ ಸಾಂತ್ವನ ಯಾತ್ರೆ ಕೈಗೊಂಡಿದ್ದು, ಇದಕ್ಕೆ ಸಿದ್ದರಾಮಯ್ಯ(Siddaramaiah) ಸ್ವಾಗತ ಮಾಡಿದ್ದಾರೆ. ಅಲ್ಲದೇ ಜೆಡಿಎಸ್ ನಿಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎನ್ನುವ ಸಿದ್ದರಾಮಯ್ಯನವರ ಮಾರ್ಮಿಕ ಹೇಳಿಕೆಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ(JD Kumaraswamy) ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯನವರ ಗುಣವನ್ನು ಮೆಚ್ಚಿಕೊಂಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ಹೃದಯ ವೈಶಾಲ್ಯತೆಗೆ ಆಭಾರಿ. ಯಾತ್ರೆ ಸ್ವಾಗತಿಸಿದ ನಿಮ್ಮ ದೊಡ್ಡ ಗುಣವನ್ನು ಮನಸಾರೆ ಕೊಂಡಾಡುತ್ತೇನೆ ಎಂದು ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಸಿದ್ದರಾಮಯ್ಯನವರ ರೀತಿಯಯಲ್ಲೇ ಮಾರ್ಮಿಕ ಹೇಳಿಕೆಗಳಿಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದಿದ್ದೀರಿ. ರೈತ ಸಾಂತ್ವನ ಯಾತ್ರೆ ಅನುಭವವನ್ನು ಕೇಂದ್ರದ ಜತೆ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರಕಾರ ಹೇಗೆ ಸ್ಪಂದಿಸುತ್ತಿದೆ? ಅದಕ್ಕೆ ನಿಮ್ಮ ನೇತೃತ್ವದ ಸರಕಾರ ಎಷ್ಟು ʼಗಂಭೀರʼ ಪ್ರಯತ್ನ ಮಾಡಿದೆ, ಮಾಡುತ್ತಿದೆ ಎನ್ನುವುದು ನನಗೂ ತಿಳಿದಿದೆ. ಬರ, ವಿದ್ಯುತ್ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರಕಾರದ ʼಅಪರಿಮಿತ ಅಸಡ್ಡೆʼಯನ್ನು ಅರಿಯದಷ್ಟು ಮುಗ್ಧನೇ ನಾನು? ಎಂದು ಪ್ರಶ್ನಿಸಿದ್ದಾರೆ.