ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ

Twitter
Facebook
LinkedIn
WhatsApp
S M Krishna ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ

ಬೆಂಗಳೂರು: ಮಂಗಳವಾರ ನಿಧನರಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (S M Krishna) ಅವರ ಅಂತ್ಯ ಸಂಸ್ಕಾರ ಅವರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಬುಧವಾರ ಸಂಜೆ ನಡೆಯಲಿದೆ.

ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಕಾಫಿ ಡೇ ಹತ್ತಿರದ ಖಾಲಿ ಜಾಗದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಪುತ್ರ ಹಾಗೂ ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಹೆಗ್ಡೆ ಚಿತೆಗೆ ಅಗ್ನಿಸ್ಪರ್ಶ ಮಾಡಲಿದ್ದಾರೆ.

ವೇದಬ್ರಹ್ಮ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ 15 ವೈದಿಕರ ತಂಡದಿಂದ ವಿಧಿ-ವಿಧಾನ ಕಾರ್ಯಗಳು ನಡೆಯಲಿವೆ. ಹಲವು ಯತಿಗಳು, ವಿವಿಧ ಮಠಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಕೃಷ್ಣ ಅವರ ಅಂತ್ಯಕ್ರಿಯೆ ಜರುಗಲಿದೆ,

ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಂಗಳವಾರ ಸೋಮನಹಳ್ಳಿಗೆ ಆಗಮಿಸಿ, ಸಿದ್ಧತೆಗಳ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಬೆಳಗ್ಗೆ 8 ಗಂಟೆಯವರೆಗೆ ಸದಾಶಿವನಗರದಲ್ಲಿರುವ ಕೃಷ್ಣ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. 8 ಗಂಟೆಗೆ ಮೃತದೇಹವನ್ನು ವಾಹನದ ಮೂಲಕ ಸೋಮನಹಳ್ಳಿಗೆ ತರಲಾಗುತ್ತದೆ. ಮಾರ್ಗಮಧ್ಯೆ ಕೆಂಗೇರಿ, ಬಿಡದಿ, ರಾಮನಗರ ಮತ್ತು ಚನ್ನಪಟ್ಟಣದ ಒಂದೊಂದು ಕಡೆ ಐದೈದು ನಿಮಿಷ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಸಾರ್ವಜನಿಕರು ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನ ಪಡೆಯಬಹುದು ಎಂದು ಹೇಳಿದರು.

ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ. ಸಿಎಂ ಸಿದ್ದರಾಮಯ್ಯ, ಎಲ್ಲ ಸಚಿವರು ಮತ್ತು ಪಕ್ಷದ ಎಲ್ಲಾ ಶಾಸಕರು ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ನಾಯಕರು ಬರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಬುಧವಾರ ರಾಜ್ಯಾದ್ಯಂತ ರಜೆ ಘೋಷಿಸಲಾಗಿದೆ. ಸದನದಲ್ಲೂ ಸಂತಾಪ ಸೂಚಿಸಲಾಗಿದೆ. 3 ದಿನಗಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳಾದ ಯಶವಂತ್ ವಿ. ಗುರುಕರ್ ಅವರು ಮಾತನಾಡಿ, ಬೆಂಗಳೂರಿನಿಂದ ಮದ್ದೂರಿಗೆ ತೆರಳುವ ಮಾರ್ಗಮಧ್ಯೆ ರಾಮನಗರ ಜಿಲ್ಲೆಯ ಬಿಡದಿ, ರಾಮನಗರ ಪಟ್ಟಣ, ಚನ್ನಪಟ್ಟಣದಲ್ಲಿ ಜಿಲ್ಲೆಯ ನಾಗರಿಕರು, ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆಯಲು ಜಿಲ್ಲಾಡಳಿತದಿಂದ ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದರು,

ಎಸ್. ಎಂ. ಕೃಷ್ಣ ಅವರ ಪಾರ್ಥಿವ ಶರೀರವು ಬುಧವಾರ ಬೆಂಗಳೂರಿನ ಸದಾಶಿವ ನಗರದಿಂದ ಮಂಡ್ಯದ ಸೋಮನಹಳ್ಳಿಗೆ ಹಳೇ ಮೈಸೂರು ರಸ್ತೆಯಲ್ಲಿ ಹಾದುಹೋಗುತ್ತದೆ. ರಾಮನಗರ ಜಿಲ್ಲೆಯ ಬಿಡದಿಯ ಬಿ.ಜಿ.ಎಸ್ ಸರ್ಕಲ್‌ನಲ್ಲಿ ಅಂದು ಬೆಳಗ್ಗೆ 8.45 ರಿಂದ 9 ಗಂಟೆಗೆ, ರಾಮನಗರದ ಐಜೂರು ಸರ್ಕಲ್‌ನಲ್ಲಿ ಬೆಳಿಗ್ಗೆ 9.30ಕ್ಕೆ ಆಗಮಿಸುತ್ತದೆ. ನಂತರ ಚನ್ನಪಟ್ಟಣದ ಗಾಂಧಿ ಭವನ ಸರ್ಕಲ್‌ನಲ್ಲಿ ಬೆಳಗ್ಗೆ 10 ಗಂಟೆಯಿಂದ 10.15ಕ್ಕೆ ಆಗಮಿಸುತ್ತದೆ. ಈ ಸಂದರ್ಭದಲ್ಲಿ 15 ರಿಂದ 20 ನಿಮಿಷಗಳವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಇದಕ್ಕೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ (SM Krishna) ವಿಧಿವಶರಾದ ಹಿನ್ನೆಲೆ ಬುಧವಾರ ಮದ್ದೂರು ಪಟ್ಟಣ (Maddur Town) ಸ್ವಯಂ ಪ್ರೇರಿತ ಬಂದ್‌ಗೆ ಕರೆ ನೀಡಲಾಗಿದೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್‌ಎಂ ಕೃಷ್ಣ ಮಂಗಳವಾರ ಮುಂಜಾನೆ ನಿಧನರಾಗಿದ್ದು, ಬುಧವಾರ ಹುಟ್ಟೂರಾದ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಈ ಹಿನ್ನೆಲೆ ಪ್ರಗತಿಪರ ಸಂಘಟನೆಗಳು ಸ್ವಯಂ ಪ್ರೇರಿತ ಬಂದ್‌ಗೆ (Spontaneous Bandh) ಕರೆ ಕೊಟ್ಟಿವೆ. ಬಂದ್‌ಗೆ ವರ್ತಕರು, ಬೀದಿಬದಿ ವ್ಯಾಪಾರಿಗಳು, ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರ ಸಂಘ ಬೆಂಬಲ ಸೂಚಿಸಿವೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist