ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಾಂಖೆಡೆ ಸ್ಟೇಡಿಯಂನಲ್ಲಿ ನವೆಂಬರ್​ 1ರಂದು ಸಚಿನ್ ತೆಂಡೂಲ್ಕರ್​ ಪ್ರತಿಮೆ ಅನಾವರಣ

Twitter
Facebook
LinkedIn
WhatsApp
ವಾಂಖೆಡೆ ಸ್ಟೇಡಿಯಂನಲ್ಲಿ ನವೆಂಬರ್​ 1ರಂದು ಸಚಿನ್ ತೆಂಡೂಲ್ಕರ್​ ಪ್ರತಿಮೆ ಅನಾವರಣ

ಮುಂಬಯಿ: ಕ್ರಿಕೆಟ್ ಲೋಕದ ಸವ್ಯಸಾಚಿ, ಕ್ರಿಕೆಟ್​ ದೇವರು, ಮಾಸ್ಟರ್‌ ಬ್ಲಾಸ್ಟರ್‌ ಹೀಗೆ ಹಲವು ಹೆಸರಿನಿಂದ ಕರೆಸಿಕೊಳ್ಳುವ ಟೀಮ್​ ಇಂಡಿಯಾದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್(sachin tendulkar)​ ಅವರ ಪ್ರತಿಮೆ(Sachin Tendulkar statue) ನವೆಂಬರ್​ 1ರಂದು ವಾಂಖೆಡೆ ಸ್ಟೇಡಿಯಂನಲ್ಲಿ(wankhede stadium) ಅನಾವರಣಗೊಳಿಸಲು ನಿರ್ಧರಿಸಲಾಗಿದೆ. ನವೆಂಬರ್​ 2ರಂದು ಇಲ್ಲಿ ಭಾರತ ಮತ್ತು ಲಂಕಾ ತಂಡಗಳು ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ ದಿನ ಸಚಿನ್​ ಅವರ ಪ್ರತಿಮೆ ಅನಾವರಣ ಸಮಾರಂಭ ನಡೆಸಲು ಮುಂಬೈ ಕ್ರಿಕೆಟ್​ ಅಸೋಸಿಯೇಸನ್​ ಮತ್ತು ಬಿಸಿಸಿಐ ನಿರ್ಧರಿಸಿದೆ.

ಇದೇ ವರ್ಷದ ಫೆಬ್ರವರಿ ತಿಂಗಳಿನಲ್ಲಿ ತೆಂಡೂಲ್ಕರ್​ ಪ್ರತಿಮೆ ನಿರ್ಮಾಣದ ಬಗ್ಗೆ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ​​(ಎಂಸಿಎ) ಅಧ್ಯಕ್ಷ ಅಮೋಲ್ ಕಾಳೆ ಅಧಿಕೃತ ಮಾಹಿತಿ ನೀಡಿದ್ದರು. “ಟೀಮ್​ ಇಂಡಿಯಾ ಮತ್ತು ಮುಂಬೈ ಕ್ರಿಕೆಟ್‌ಗೆ ಸಚಿನ್ ತೆಂಡೂಲ್ಕರ್ ಅವರು ನೀಡಿದ ಅಪಾರ ಕೊಡುಗೆಯನ್ನು ಪರಿಗಣಿಸಿ ಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ತೆಂಡೂಲ್ಕರ್ ಅವರ ಪ್ರತಿಮೆಯನ್ನು ಸ್ಥಾಪಿಸಲು ನಿರ್ಧರಿಸಿಲಾಗಿದೆ. ಇದೇ ಮೊದಲ ಬಾರಿಗೆ ಸಂಪೂರ್ಣವಾಗಿ ಭಾರತದ ಆತಿಥ್ಯದಲ್ಲಿ ನಡೆಯುವ ವಿಶ್ವಕಪ್​ ಟೂರ್ನಿಯ ಸಮಯದಲ್ಲಿ ಸಚಿನ್​ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಾಗುತ್ತದೆ” ಎಂದು ಹೇಳಿದ್ದರು. ಅದರಂತೆ ನವೆಂಬರ್​ 1 ರಂದು ಪ್ರತಿಮೆ ಅನಾವರಣ ಮಾಡಲಾಗುತ್ತದೆ ಎಂದು ಕಾಳೆ ತಿಳಿಸಿರುವುದಾಗಿ ವರದಿಯಾಗಿದೆ.

ಸಚಿನ್​ ಉಪಸ್ಥಿತಿ

ಉದ್ಘಾಟನಾ ಸಮಾರಂಭದಲ್ಲಿ ತೆಂಡೂಲ್ಕರ್ ಅವರೇ ಉಪಸ್ಥಿತರಿರಲಿದ್ದಾರೆ ಎಂದು ಅಮೋಲ್ ಕಾಳೆ ತಿಳಿಸಿದ್ದಾರೆ. ಅಲ್ಲದೆ ಇತರ ಕಾರ್ಯಕ್ರಮದ ಬಗ್ಗೆ ಶೀಘ್ರದಲ್ಲೇ ತಿಳಿಸುವುದಾಗಿ ಹೇಳಿದ್ದಾರೆ. ಈಗಾಗಲೇ ಸಚಿನ್​ ಹೆಸರಿನ ಒಂದು ಸ್ಟ್ಯಾಂಡ್​ ಈ ಸ್ಟೇಡಿಯಂನಲ್ಲಿ ಇದೆ.

ಅಂದು ತಮ್ಮ ಪ್ರತಿಮೆ ಸ್ಥಾಪನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಚಿನ್​ ತೆಂಡೂಲ್ಕರ್​ ಅವರು, “ನನ್ನ ವೃತ್ತಿ ಜೀವನ ಈ ಮೈದಾನದಿಂದ ಪ್ರಾರಂಭವಾಗಿತ್ತು. ನನ್ನ ಜೀವನದ ಅತಿದೊಡ್ಡ ಕ್ರಿಕೆಟ್ ಕ್ಷಣವೆಂದರೆ 2011ರಲ್ಲಿ ನಾವು ವಿಶ್ವ ಕಪ್ ನಲ್ಲಿ ಗೆಲುವು ಸಾಧಿಸಿದ್ದು. ಹೆಚ್ಚಿನ ನನ್ನ ನೆನಪುಗಳು ಈ ಕ್ರೀಡಾಂಗಣದಲ್ಲಿದೆ” ಎಂದಿದ್ದರು.

https://x.com/ANI/status/1630456796543598594?s=20

ಸಚಿನ್ ತನ್ನ ಕೊನೆಯ ಟೆಸ್ಟ್​ ಅಂತಾರಾಷ್ಟ್ರೀಯ ಪಂದ್ಯವನ್ನು 2013ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ವಾಂಖೆಡೆ ಸ್ಟೇಡಿಯಂನಲ್ಲಿ ಆಡಿದ್ದರು. 2012ರಲ್ಲಿ ಅವರು ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಣೆ ಮಾಡಿದ್ದರು. ಸಾರಸ್ಯವೆಂದರೆ ಸಚಿನ್​ ತಮ್ಮ ಏಕದಿನ ಕ್ರಿಕೆಟ್​ ಪದಾರ್ಪಣೆ ಮಾಡಿದ್ದು ಮತ್ತು ವಿದಾಯ ಹೇಳಿದ್ದು ಪಾಕಿಸ್ತಾನ ತಂಡದ ವಿರುದ್ಧ.

ಕ್ರಿಕೆಟ್​ ಆಟಗಾರರಿಗೆ ಸ್ಫೂರ್ತಿ
24 ವರ್ಷಗಳ ಕ್ರಿಕೆಟ್‌ ಬಾಳ್ವೆಯಲ್ಲಿ 664 ಪಂದ್ಯ, 34,357 ರನ್‌, 201 ವಿಕೆಟ್‌, 100 ಅಂತಾರಾಷ್ಟ್ರೀಯ ಶತಕ, 164 ಅರ್ಧ ಶತಕ, ಲೆಕ್ಕವಿಲ್ಲದಷ್ಟು ದಾಖಲೆಗಳ ಸರದಾರ, ದೇಶದ ಶ್ರೇಷ್ಠ ಗೌರವ ಭಾರತ ರತ್ನ, ಪದ್ಮ ಪ್ರಶಸ್ತಿಗಳ ಒಡೆಯ, ರಾಜೀವ್‌ ಗಾಂಧಿ ಖೇಲ್‌ರತ್ನ ಪ್ರಶಸ್ತಿಗಳಿಂದೆಲ್ಲ ಪುರಸ್ಕೃತರಾಗಿರುವ ಸಚಿನ್‌ ಸಾಧನೆ ನಿಜಕ್ಕೂ ಒಂದು ಅದ್ಭುತವೇ ಸರಿ. ಕ್ರಿಕೆಟ್​ ಬಾಳ್ವೆಯ ಆರಂಭದಿಂದ ಹಿಡಿದು ಕಡೇಯ ದಿನದವರೆಗೂ ಯಾವುದೇ ವಿವಾದವಿಲ್ಲದೆ ಸವ್ಯಸಾಚಿಯಾಗಿದ್ದ ಸಚಿನ್​ ಎಲ್ಲ ಕ್ರಿಕೆಟ್​ ಆಟಗಾರರಿಗೂ ಸ್ಫೂರ್ತಿಯಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist