ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಹಾರಾ ಗ್ರೂಪ್‌ ಅಧ್ಯಕ್ಷ ಸುಬ್ರತಾ ರಾಯ್ ನಿಧನ.!

Twitter
Facebook
LinkedIn
WhatsApp
ಸಹಾರಾ ಗ್ರೂಪ್‌ ಅಧ್ಯಕ್ಷ ಸುಬ್ರತಾ ರಾಯ್ ನಿಧನ.!

ಮುಂಬೈ: ಸಹಾರಾ ಗ್ರೂಪ್‌ ಸಂಸ್ಥಾಪಕ ಮತ್ತು ಅಧ್ಯಕ್ಷ ಸುಬ್ರತ ರಾಯ್‌ ಮಂಗಳವಾರ ನಿಧನರಾದರು.

ಅವರಿಗೆ 75 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮುಂಬೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ.

1948ರಲ್ಲಿ ಅವರು ಬಿಹಾರದಲ್ಲಿ ಜನಿಸಿದರು. 1978ರಲ್ಲಿ ಕೇವಲ ₹ 2,000 ಬಂಡವಾಳದೊಂದಿಗೆ ಪ್ರಾರಂಭಿಸಲಾದ ಸಹಾರಾ ಗ್ರೂಪ್‌ ಕಂಪನಿಯು ಇದೀಗ ಮುಂಚೂಣಿಯಲ್ಲಿದೆ ಎಂದು ಕಂಪನಿ ತನ್ನ ವೆಬ್‌ಸೈಟ್‌ನಲ್ಲಿ ಹೇಳಿದೆ.

‘ಸುಬ್ರತಾ ರಾಯ್ ಅವರ ಪರಂಪರೆ ಹಾಗೂ ಉದ್ಯಮದಲ್ಲಿ ಹೊಂದಿದ್ದ ಅವರ ದೃಷ್ಟಿಕೋನವನ್ನು ಮುಂದುವರೆಸಿಕೊಂಡು ಹೋಗಲಾಗವುದು‘ ಎಂದು ಸಹಾರಾ ಗ್ರೂಪ್‌ ತಿಳಿಸಿದೆ

ಸುಬ್ರತಾ ರಾಯ್ ಅವರ ನಿಧನಕ್ಕೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಅವರು ಸಂತಾಪ ಸೂಚಿಸಿದ್ದಾರೆ.

ಹೂಡಿಕೆದಾರರಿಗೆ ಸಾವಿರಾರು ಕೋಟಿ ರೂಪಾಯಿ ಹಿಂದಿರುಗಿಸಲು ವಿಫಲವಾಗಿದ್ದ ಹಿನ್ನೆಲೆಯಲ್ಲಿ ಅವರು ಹಲವು ವರ್ಷ ಜೈಲಿನಲ್ಲಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ