ಭಾನುವಾರ, ಮೇ 26, 2024
ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?-ಮಧ್ಯಪ್ರಿಯರಿಗೆ ಜೂನ್ ಮೊದಲ ವಾರದಲ್ಲಿ ಎಣ್ಣೆ ಸಿಗೋದು ಡೌಟ್..!-ಹಾರ್ದಿಕ್ ಪಾಂಡ್ಯಾ ಮತ್ತು ನತಾಶಾ ದಾಂಪತ್ಯ ಜೀವನದಲ್ಲಿ ಬಿರುಕು? ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾದ ಸುದ್ದಿ..!-ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ..!-ಅಚ್ಚರಿ ಘಟನೆ; ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!

Twitter
Facebook
LinkedIn
WhatsApp
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!
 ಸಾಯಿ ಸುದರ್ಶನ್ ಐಪಿಎಲ್​​ನಲ್ಲಿ 1000 ರನ್​​ಗಳ ಮೈಲಿಗಲ್ಲನ್ನು ತಲುಪಿದ್ದಾರೆ. 25 ಇನ್ನಿಂಗ್ಸ್ ಗಳಲ್ಲಿ 1034 ರನ್ ಗಳಿಸಿ ವಿನೂತನ ರೆಕಾರ್ಡ್ ಸೃಷ್ಟಿಸಿದ್ದಾರೆ. ಇದರಲ್ಲಿ 1 ಶತಕ ಮತ್ತು ಆರು ಅರ್ಧಶತಕಗಳು ಸೇರಿವೆ. ಐಪಿಎಲ್​ನಲ್ಲಿ ಅತಿ ವೇಗವಾಗಿ 1000 ರನ್ ಪೂರೈಸಿದ ಮೊದಲ ಭಾರತೀಯ ಬ್ಯಾಟ್ಸ್​ಮನ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈ ಹಿಂದೆ ಸಚಿನ್ ತೆಂಡೂಲ್ಕರ್ ಮತ್ತು ಋತುರಾಜ್ ಗಾಯಕ್ವಾಡ್ ಇಬ್ಬರೂ 31 ಇನ್ನಿಂಗ್ಸ್ ಗಳಲ್ಲಿ 1000 ರನ್ ಗಳಿಸಿ ಜಂಟಿ ದಾಖಲೆ ಹೊಂದಿದ್ದರು. ಸಾಯಿ ಸುದರ್ಶನ್ ಕೇವಲ 25 ಇನ್ನಿಂಗ್ಸ್​​ಗಳಲ್ಲಿ ಈ ದಾಖಲೆಯನ್ನು ತಲುಪಿದ್ದಾರೆ. ತಿಲಕ್ ವರ್ಮಾ 34 ಇನ್ನಿಂಗ್ಸ್ ಗಳಲ್ಲಿ 1000 ರನ್ ಗಳಿಸಿ 3ನೇ ಸ್ಥಾನದಲ್ಲಿದ್ದಾರೆ.
ಸಾಯಿ ಸುದರ್ಶನ್ ಐಪಿಎಲ್ ಇತಿಹಾಸದಲ್ಲಿ ವೇಗವಾಗಿ 1000 ರನ್ ಗಳಿಸಿದ 3ನೇ ಆಟಗಾರ. ಲೆಂಡ್ಲ್ ಸಿಮನ್ಸ್ 23 ಇನ್ನಿಂಗ್ಸ್​​ಗಳಲ್ಲಿ  ಈ ಸಾಧನೆ ಮಾಡಿದ್ದರೆ, ಶಾನ್ ಮಾರ್ಷ್ 21 ಇನ್ನಿಂಗ್ಸ್​​ಗಳಲ್ಲಿ  1000 ರನ್ ಗಳಿಸಿದ್ದಾರೆ. ಹೇಡನ್ ಮತ್ತು ಸುದರ್ಶನ್ ಇಬ್ಬರೂ 25 ಇನ್ನಿಂಗ್ಸ್​​ಗಳಲ್ಲಿ ಈ ಮೈಲಿಗಲ್ಲನ್ನು ತಲುಪಿದ್ದಾರೆ.ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸಾಯಿ ಸುದರ್ಶನ್ ಕೇವಲ 50 ಎಸೆತಗಳಲ್ಲಿ ಐಪಿಎಲ್​​​​ನಲ್ಲಿ ತಮ್ಮ ಚೊಚ್ಚಲ ಶತಕವನ್ನು ಪೂರೈಸಿದರು. ನಾಯಕ ಗಿಲ್ ಕೂಡ ಶತಕ ಬಾರಿಸಿದರು, ಇವರಿಬ್ಬರು ಮೊದಲ ವಿಕೆಟ್​​ಗೆ 210 ರನ್​​ಗಳ ದಾಖಲೆಯ ಆರಂಭಿಕ ಜೊತೆಯಾಟವನ್ನು ನೀಡಿದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ