ಗುರುವಾರ, ಏಪ್ರಿಲ್ 18, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್‌ಸಂಗ್

Twitter
Facebook
LinkedIn
WhatsApp
WhatsApp Image 2023 06 06 at 7.31.16 PM

ಈಗಂತು ಕ್ಯಾಮೆರಾದ ಸ್ಮಾರ್ಟ್​ಫೋನ್​ಗಳಿಗೆ (Smartphones) ಹೆಚ್ಚಿನ ಬೇಡಿಕೆಯಿದೆ. ಅದರಲ್ಲೂ 108 ಮೆಗಾಪಿಕ್ಸೆಲ್ ಕ್ಯಾಮೆರಾ ಫೋನ್​ಗಳು ಭಾರತದಲ್ಲಿ ಎಗ್ಗಿಲ್ಲದೆ ಸೇಲ್ ಆಗುತ್ತಿದೆ. ಇವುಗಳು ಕಡಿಮೆ ಬೆಲೆಗೆ ಸಿಗುತ್ತಿರುವುದರಿಂದ ಬೇಗನೆ ಸೋಲ್ಡ್ ಔಟ್ ಆಗುತ್ತದೆ. ಇದನ್ನು ಮನಗಂಡು ದಕ್ಷಿಣ ಕೊರಿಯಾ ಮೂಲದ ಸ್ಯಾಮ್​ಸಂಗ್ (Samsung) ಕಂಪನಿ ಕ್ಯಾಮೆರಾ ಪ್ರಿಯರಿಗಾಗಿ ಹೊಸ ಮೊಬೈಲ್ ರಿಲೀಸ್ ಮಾಡಿದೆ. ಸ್ಯಾಮ್​ಸಂಗ್ ಭಾರತದಲ್ಲಿ ಇಂದು ತನ್ನ ಗ್ಯಾಲಕ್ಸಿ F ಸರಣಿಯ ಅಡಿಯಲ್ಲಿ 108 ಮೆಗಾಪಿಕ್ಸೆಲ್ ಕ್ಯಾಮೆರಾ ಇರುವ ಗ್ಯಾಲಕ್ಸಿ F54 5G (Galaxy F54 5G) ಸ್ಮಾರ್ಟ್‌ಫೋನ್‌ ಅನಾವರಣ ಮಾಡಿದೆ. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಪೂರ್ಣ ಮಾಹಿತಿ ಇಲ್ಲಿದೆ.

samsung galaxy m54 5g Dark Blue color

ಗ್ಯಾಲಕ್ಸಿ F54 5G ಫೋನ್​ ಸದ್ಯಕ್ಕೆ ಒಂದು ಸ್ಟೋರೇಜ್ ಆಯ್ಕೆಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 8GB RAM ಮತ್ತು 256GB ಸ್ಟೋರೇಜ್‌ ಆಯ್ಕೆಗೆ 27,999 ರೂ. ನಿಗದಿ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆಯಿಂದ ಪ್ರೀ ಆರ್ಡರ್ ಶುರುವಾಗುತ್ತದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್, ಸ್ಯಾಮ್​ಸಂಗ್ ಇಂಡಿಯಾದ ಅಧಿಕೃತ ವೆಬ್​ಸೈಟ್ ಮತ್ತು ಪ್ರಮುಖ ರಿಟೇಲ್ ಸ್ಟೋರ್​ಗಳಲ್ಲಿ ಖರೀದಿಗೆ ಸಿಗಲಿದೆ.

ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರಲಿದ್ದು, 6.7 ಇಂಚಿನ ಫುಲ್ ಹೆಚ್​ಡಿ ಪ್ಲಸ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್​ರೇಟ್​ನಿಂದ ಕೂಡಿದ್ದು, ಸ್ಕ್ರೀನ್​ಗೆ ಗೋರಿಲ್ಲ ಗ್ಲಾಸ್ 5 ಪ್ರೊಟೆಕ್ಷನ್ ನೀಡಲಾಗಿದೆ. ಬಲಿಷ್ಠವಾದ ಸ್ಯಾಮ್‌ಸಂಗ್‌ನ Exynos 1380 ಪ್ರೊಸೆಸರ್‌ ಪ್ರೊಸೆಸರ್‌ ಬಲದಲ್ಲಿ ಕಾರ್ಯನಿರ್ವಹಿಸಲಿದ್ದು, ಇತ್ತೀಚಿಗಿನ 13 ಓಎಸ್‌ ಸಪೋರ್ಟ್‌ ಸಹ ಪಡೆದುಕೊಂಡಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಈ ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿರಲಿದ್ದು, ಮುಖ್ಯ ಕ್ಯಾಮೆರಾವು ಬರೋಬ್ಬರಿ 108 ಮೆಗಾ ಪಿಕ್ಸೆಲ್ ಸೆನ್ಸಾರ್​ನಿಂದ ಕೂಡಿದೆ. ಇದು ಫೋಟೋಗ್ರಫಿಗೆ ಸೂಕ್ತವಾಗಿದ್ದು ಅತ್ಯುತ್ತಮ ಕ್ವಾಲಿಟಿಯಲ್ಲಿ ವಿಡಿಯೋವನ್ನು ಸೆರೆಹಿಡಿಯುತ್ತದೆ. ಇದರಲ್ಲಿರುವ ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಪಡೆದಿರಲಿದೆ. ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಸೆಲ್ಫಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದರ ಜೊತೆಗೆ ನೈಟೋಗ್ರಫಿ ಎಂಬ ವಿಶೇಷ ಆಯ್ಕೆ ನೀಡಾಗಿದ್ದು, ಇದರ ಮೂಲಕ ಮಂದ ಬೆಳಕಿನಲ್ಲಿ ಕೂಡ ಅತ್ಯುತ್ತಮ ಫೋಟೋ ಕ್ಲಿಕ್ಕಿಸಬಹುದು.

ಗ್ಯಾಲಕ್ಸಿ F54 5G ಫೋನ್ ದೀರ್ಘ ಸಮಯ ಬಾಳಕೆ ಬರುವ 6,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರಲಿದ್ದು, ಜೊತೆಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಇದು 5G ಬೆಂಬಲ ಪಡೆದುಕೊಂಡಿದೆ. ಜೊತೆಗೆ 4ಜಿ ಎಲ್​ಟಿಇ, GPS, Wi-Fi 6, ಬ್ಲೂಟೂತ್ 5.2, ಮತ್ತು USB 2.0 ಟೈಪ್-C ಪೋರ್ಟ್ ಆಯ್ಕೆಗಳು ಇರಲಿವೆ. ಮಧ್ಯಮ ಬೆಲೆಗೆ ಉತ್ತಮ ಕ್ಯಾಮೆರಾ, ಪ್ರೊಸೆಸರ್, ಬಿಗ್ ಬ್ಯಾಟರಿಯ ಫೋನ್ ಖರೀದಿಸುವ ಪ್ಲಾನ್​ನಲ್ಲಿ ನೀವಿದ್ದರೆ ಈ ಫೋನ್ ಒಳ್ಳೆಯ ಆಯ್ಕೆ ಆಗಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ