ಸನಾತನ ಧರ್ಮ ಡೆಂಗ್ಯೂ ಮತ್ತು ಮಲೇರಿಯಾ ಇದ್ದಂತೆ ; ಉದಯನಿದಿ ಸ್ಟಾಲಿನ್ ಹೇಳಿಕೆಗೆ ಬಾರಿ ಆಕ್ರೋಶ!
ಚೆನ್ನೈ: ಸನಾತನ ಧರ್ಮವನ್ನು ಮಲೇರಿಯಾ, ಡೆಂಗ್ಯೂ ಜೊತೆ ಹೋಲಿಸಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಚಿವ, ಖ್ಯಾತ ತಮಿಳು ನಟ ಉದಯನಿಧಿ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಸನಾತನ ನಿರ್ಮೂಲನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾದ ಜೊತೆ ಹೋಲಿಸಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಇದೀಗ ಹಿಂದುತ್ವವಾದಿಗಳ ಕಣ್ಣು ಕೆಂಪಾಗುವಂತೆ ಮಾಡಿದೆ.
ಶನಿವಾರ ತಮಿಳುನಾಡಿನಲ್ಲಿ ಸನಾತನ ಉನ್ಮೂಲನ್ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ್ದ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಪುತ್ರ, ನಟ ಉದಯನಿಧಿ ಅವರು, ಸನಾತನ ಧರ್ಮ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಇದರಲ್ಲಿ ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ, ಅದನ್ನು ರದ್ದುಪಡಿಸಬೇಕು. ಉದಾಹರಣೆಗೆ ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾವನ್ನು ವಿರೋಧಿಸಲು ಸಾಧ್ಯವಿಲ್ಲ. ನಾವು ಅದನ್ನು ಕೊನೆಗೊಳಿಸಬೇಕು. ಹಾಗೆಯೇ ನಾವು ಸನಾತನವನ್ನು ನಿರ್ಮೂಲನೆ ಮಾಡಬೇಕಿದೆ ಎಂದು ಹೇಳಿದ್ದರು.
ತಮಿಳುನಾಡು ಸರ್ಕಾರದ ಯುವಜನ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಇಲಾಖೆಯ ಸಚಿವರೂ ಆಗಿರುವ ಉದಯನಿಧಿ, ‘ಸನಾತನ ಸಂಸ್ಥೆಯನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆಗೊಳಿಸಬೇಕು. ಸನಾತನ ಎಂಬ ಹೆಸರು ಸಂಸ್ಕೃತದಿಂದ ಬಂದಿದೆ. ಇದು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಎಂದು ಹೇಳಿದ್ದರು.
ಸಚಿವ ಉದಯನಿಧಿ ಹೇಳಿಕೆ ವಿರುದ್ಧ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಹರಿಹಾಯ್ದಿದ್ದು, ‘ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರ ಪುತ್ರ ಮತ್ತು ಡಿಎಂಕೆ ಸರ್ಕಾರದ ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಮಲೇರಿಯಾ ಮತ್ತು ಡೆಂಗ್ಯೂಗೆ ಹೋಲಿಸಿದ್ದಾರೆ. ಅದನ್ನು ರದ್ದುಗೊಳಿಸಬೇಕು ಮತ್ತು ಕೇವಲ ವಿರೋಧಿಸಬಾರದು ಎಂದು ಅವರು ಹೇಳುತ್ತಾರೆ. ಸರಳವಾಗಿ ಹೇಳುವುದಾದರೆ, ಸನಾತನ ಧರ್ಮವನ್ನು ಅನುಸರಿಸುವ ಭಾರತದ ಜನಸಂಖ್ಯೆಯ 80%ಸ ನರಮೇಧಕ್ಕೆ ಅವರು ಕರೆ ನೀಡುತ್ತಿದ್ದಾರೆ. ಡಿಎಂಕೆ ವಿರೋಧ ಪಕ್ಷದ ಪ್ರಮುಖ ಸದಸ್ಯ ಮತ್ತು ಕಾಂಗ್ರೆಸ್‌ನ ದೀರ್ಘಕಾಲದ ಮಿತ್ರ ಪಕ್ಷವಾಗಿದೆ. ಮುಂಬೈ ಸಭೆಯಲ್ಲಿ ಇದನ್ನು ಒಪ್ಪಲಾಗಿದೆಯೇ?’ ಎಂದು ಟ್ವೀಟ್ ಮಾಡಿದ್ದಾರೆ.
Udhayanidhi Stalin’s hate speech with Hindi subtitles.
— Amit Malviya (@amitmalviya) September 2, 2023
Rahul Gandhi speaks of ‘मोहब्बत की दुकान’ but Congress ally DMK’s scion talks about eradicating Sanatana Dharma. Congress’s silence is support for this genocidal call…
I.N.D.I Alliance, true to its name, if given an… https://t.co/hfTVBBxHQ5 pic.twitter.com/ymMY04f983
ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾಗೆ ತಿರುಗೇಟು ನೀಡುವ ಮೂಲಕ ತಮ್ಮ ನಿಲುವಿಗೆ ಅಂಟಿಕೊಂಡಿರುವ ಸಚಿವ ಉದಯನಿಧಿ, ‘ನಾನು ಸನಾತನ ಧರ್ಮದ ಅನುಯಾಯಿಗಳ ‘ನರಮೇಧ’ಕ್ಕೆ ಎಂದಿಗೂ ಕರೆ ನೀಡಿಲ್ಲ. ಸನಾತನ ಧರ್ಮದಿಂದ ಅನ್ಯಾಯಕ್ಕೆ ಒಳಗಾಗಿ ನೊಂದ ಸಮುದಾಯಗಳ ಪರವಾಗಿ ನಾನು ನನ್ನ ಮಾತಿಗೆ ಬದ್ಧನಾಗಿ ಮಾತನಾಡುತ್ತಿದ್ದೇನೆ. ಈ ಹೇಳಿಕೆಗೆ ಸಂಬಂಧಿಸಿದಂತೆ ಯಾವುದೇ ಕಾನೂನು ಸವಾಲನ್ನು ಎದುರಿಸಲು ಸಿದ್ಧ. ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ಸಾಮಾಜಿಕ ನ್ಯಾಯವನ್ನು ಕಾಪಾಡಲು ಮತ್ತು ಸಮಾನತೆಯ ಸಮಾಜವನ್ನು ಸ್ಥಾಪಿಸಲು ಹೋರಾಟ ನಡೆಸಲಿದೆ’ ಎಂದು ಖಡಕ್ ಆಗಿ ಹೇಳಿದ್ದಾರೆ.
I never called for the genocide of people who are following Sanatan Dharma. Sanatan Dharma is a principle that divides people in the name of caste and religion. Uprooting Sanatan Dharma is upholding humanity and human equality.
— Udhay (@Udhaystalin) September 2, 2023
I stand firmly by every word I have spoken. I spoke… https://t.co/Q31uVNdZVb
ಮುಂದುವರಿದು ಮಾತನಾಡಿರುವ ಉದಯನಿಧಿ ಸ್ಟಾಲಿನ್, ‘ನಾನು ಯಾವುದೇ ಕಾನೂನು ಸವಾಲು ಎದುರಿಸಲು ಸಿದ್ಧ. ಇಂತಹ ಗೊಡ್ಡು ಕೇಸರಿ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ. ಪೆರಿಯಾರ್, ಅಣ್ಣಾ ಮತ್ತು ಕಲೈಂಜರ್ ಅವರ ಅನುಯಾಯಿಗಳಾದ ನಾವು ನಮ್ಮ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಮಾರ್ಗದರ್ಶನದಲ್ಲಿ ಸಾಮಾಜಿಕ ನ್ಯಾಯವನ್ನು ಕಾಪಾಡಿಕೊಳ್ಳಲು ಮತ್ತು ಸಮಾನತೆಯ ಸಮಾಜವನ್ನು ಸ್ಥಾಪಿಸಲು ಯಾವಾಗಲೂ ಹೋರಾಡುತ್ತೇವೆ. ಇಂದು, ನಾಳೆ ಮತ್ತು ಎಂದೆಂದಿಗೂ ನಾನು ಇದನ್ನೇ ಹೇಳುತ್ತೇನೆ. ಸನಾತನ ಧರ್ಮವನ್ನು ದ್ರಾವಿಡ ನೆಲದಿಂದ ಹೊರಗೆ ಹಾಕುವ ನಮ್ಮ ಸಂಕಲ್ಪ ಒಂದು ತುಣುಕೂ ಕಡಿಮೆಯಾಗುವುದಿಲ್ಲ’ ಎಂದು ಉದಯನಿಧಿ ಹೇಳಿದ್ದಾರೆ. ಸದ್ಯ ಯುವಜನ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಇಲಾಖೆಯ ಸಚಿವರೂ ಆಗಿರುವ ಉದಯನಿಧಿ ನೀಡಿದ ಈ ಹೇಳಿಕೆ ರಾಜಕೀಯ ತಿರುವು ಪಡೆದುಕೊಂಡಿದ್ದು, ಎಲ್ಲಿಗೆ ಬಂದು ತಲುಪುತ್ತೆ ಅನ್ನೋದನ್ನು ಕಾದು ನೋಡಬೇಕಿದೆ.