ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದೇವಸ್ಥಾನಕ್ಕೆ ತೆರಳಿದ್ದಕ್ಕೆ ಟ್ರೋಲ್​ ಮಾಡಿದವರಿಗೆ ಖಡಕ್​ ತಿರುಗೇಟು ನೀಡಿದ ಸಾರಾ ಅಲಿ ಖಾನ್​

Twitter
Facebook
LinkedIn
WhatsApp
Sara Ali Khan 2

ನಟಿ ಸಾರಾ ಅಲಿ ಖಾನ್​ (Sara Ali Khan) ಅವರು ಇತ್ತೀಚೆಗೆ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ (Mahakaleshwar Temple) ಭೇಟಿ ನೀಡಿದ್ದರು. ಮುಸ್ಲಿಂ ಎಂಬ ಕಾರಣಕ್ಕೆ ಅವರನ್ನು ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​ ಮಾಡಲಾಗಿತ್ತು. ತಮ್ಮನ್ನು ಟ್ರೋಲ್ (Troll)​ ಮಾಡಿದವರಿಗೆ ಈಗ ಸಾರಾ ಅಲಿ ಖಾನ್​ ಅವರು ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ ಮಾಧ್ಯಮದವರ ಜೊತೆ ಮಾತನಾಡುವಾಗ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಎಲ್ಲ ಧರ್ಮದ ಪೂಜಾ ಸ್ಥಳಗಳಿಗೆ ತಾವು ಇಷ್ಟೇ ಶ್ರದ್ಧೆ ಮತ್ತು ಭಕ್ತಿಯಿಂದ ಹೋಗುವುದಾಗಿ ಅವರು ಹೇಳಿದ್ದಾರೆ. ಪ್ರಸ್ತುತ ಸಾರಾ ಅಲಿ ಖಾನ್​ ಅವರು ‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾದಲ್ಲಿ ನಟಿಸಿದ್ದು, ಈ ಚಿತ್ರದ ಪ್ರಚಾರದಲ್ಲಿ ಅವರು ಭಾಗಿ ಆಗಿದ್ದಾರೆ. ಈ ನಡುವೆ ಅವರಿಗೆ ಟ್ರೋಲ್​ ಕಾಟ ಎದುರಾಗಿದೆ. ಅದಕ್ಕೆ ಅವರು ತಲೆ ಕೆಡಿಸಿಕೊಂಡಿಲ್ಲ. ತಮ್ಮ ನಿಲುವು ಏನು ಎಂಬುದನ್ನು ಅವರು ಸುದ್ದಿಗೋಷ್ಠಿಯಲ್ಲೇ ಸ್ಪಷ್ಟಪಡಿಸಿದ್ದಾರೆ.

‘ನಾನು ನನ್ನ ಕೆಲಸವನ್ನು ತುಂಬಾ ಗಂಭೀರವಾಗಿ ತೆಗೆದುಕೊಳ್ಳುತ್ತೇನೆ. ನಾನು ಜನರಿಗಾಗಿ ಮತ್ತು ನಿಮಗಾಗಿ ಕೆಲಸ ಮಾಡುತ್ತೇನೆ. ನನ್ನ ಕೆಲಸ ನಿಮಗೆ ಇಷ್ಟವಾಗದಿದ್ದರೆ ನನಗೆ ಬೇಸರ ಆಗುತ್ತದೆ. ಆದರೆ ನನ್ನ ವೈಯಕ್ತಿಕ ನಂಬಿಕೆಗಳು ನನಗೆ ಸಂಬಂಧಿಸಿದ್ದು. ನಾನು ಅಜ್ಮೇರ್​ ಶರೀಫ್​ ದರ್ಗಾಗೆ ಹೋಗುವಷ್ಟೇ ಶ್ರದ್ಧೆಯಿಂದ ಬಂಗ್ಲಾ ಸಾಹಿಬ್​ ಗುರುದ್ವಾರಕ್ಕೆ ಹೋಗುತ್ತೇನೆ. ಅಷ್ಟೇ ಶ್ರದ್ಧೆಯಿಂದ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುತ್ತೇನೆ. ಇದನ್ನು ನಾನು ಮುಂದುವರಿಸುತ್ತೇನೆ. ಜನರು ಏನು ಬೇಕಾದರೂ ಹೇಳಲಿ. ನನಗೆ ತೊಂದರೆ ಇಲ್ಲ. ನಿಮಗೆ ಆ ಕ್ಷೇತ್ರದ ಶಕ್ತಿ ಇಷ್ಟವಾಗಬೇಕು. ನಾನು ಆ ಶಕ್ತಿಯನ್ನು ನಂಬುತ್ತೇನೆ’ ಎಂದು ಸಾರಾ ಅಲಿ ಖಾನ್​ ಹೇಳಿದ್ದಾರೆ.

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಅಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದ ಸಾರಾ ಅಲಿ ಖಾನ್​ ಅವರು ಗುಲಾಬಿ ಬಣ್ಣದ ಸಾಂಪ್ರದಾಯಿಕ ಉಡುಗೆ ಧರಿಸಿದ್ದರು. ಅವರು ಅಲ್ಲಿನ ಪುರೋಹಿತರ ಜೊತೆ ಮಾತನಾಡಿದ್ದರು. ಈ ಸಂದರ್ಭದ ವಿಡಿಯೋ ವೈರಲ್​ ಆಗಿತ್ತು. ಅದನ್ನು ಕಂಡು ಅನೇಕರು ಕಮೆಂಟ್​ ಮಾಡಿದ್ದರು. ಸಾರಾ ಅಲಿ ಖಾನ್​ಗೆ ಕೆಲವರು ಮೆಚ್ಚುಗೆ ಸೂಚಿಸಿದರೆ, ಇನ್ನೂ ಕೆಲವರು ತಕರಾರು ತೆಗೆದಿದ್ದರು. ಇದೆಲ್ಲ ಪ್ರಚಾರದ ಗಿಮಿಕ್​ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದರು. ಸಿನಿಮಾದ ಗೆಲುವಿಗಾಗಿ ಸೆಲೆಬ್ರಿಟಿಗಳು ಇಂಥದ್ದನ್ನೆಲ್ಲ ಮಾಡುತ್ತಾರೆ ಎಂಬ ಕಮೆಂಟ್​ಗಳು ಕೂಡ ಬಂದಿದ್ದವು. ಅದಕ್ಕೆಲ್ಲ ಈಗ ಸಾರಾ ಅಲಿ ಖಾನ್​ ಉತ್ತರ ನೀಡಿದ್ದಾರೆ.

ಸಾರಾ ಅಲಿ ಖಾನ್​ ಅವರು ನಟಿಸಿರುವ ‘ಝರಾ ಹಟ್ಕೆ ಝರಾ ಬಚ್ಕೆ’ ಸಿನಿಮಾದ ಟ್ರೇಲರ್​ ಇತ್ತೀಚೆಗೆ ಬಿಡುಗಡೆಯಾಗಿ ಗಮನ ಸೆಳೆದಿದೆ. ಈ ಸಿನಿಮಾದಲ್ಲಿ ಸಾರಾ ಅಲಿ ಖಾನ್​ ಮತ್ತು ವಿಕ್ಕಿ ಕೌಶಲ್​ ಅವರು ಜೋಡಿಯಾಗಿ ನಟಿಸಿದ್ದಾರೆ. ಜೂನ್​ 2ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಸೈಫ್ ಅಲಿ ಖಾನ್​ ಅವರ ಮಗಳು ಎಂಬ ಕಾರಣಕ್ಕೆ ಸಾರಾ ಅಲಿ ಖಾನ್​ಗೆ ಸಾಕಷ್ಟು ಅವಕಾಶಗಳು ಸಿಗುತ್ತಿವೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಅವರು ಗೆಲುವು ಕಂಡಿಲ್ಲ. ಲವ್​, ರಿಲೇಷನ್​ಶಿಪ್​ ಕಾರಣಕ್ಕೂ ಅವರು ಆಗಾಗ ಸುದ್ದಿ ಆಗುತ್ತಾರೆ. ಈ ಹಿಂದೆ ನಟ ಕಾರ್ತಿಕ್​ ಆರ್ಯನ್​ ಜೊತೆ ಅವರ ಹೆಸರು ತಳುಕು ಹಾಕಿಕೊಂಡಿತ್ತು. ಇತ್ತೀಚೆಗೆ ಸಾರಾ ಅಲಿ ಖಾನ್​ ಅವರು ಕಾನ್​ ಚಿತ್ರೋತ್ಸವಕ್ಕೆ ಹಾಜರಿ ಹಾಕಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist