ಸೋಮವಾರ, ಮೇ 20, 2024
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಾಲಕಿಯೊಂದಿಗೆ ಸರಸ ಸಲ್ಲಾಪ ವೇಳೆ ಸಿಕ್ಕಿ ಬಿದ್ದ ಸಂಗೀತ ಶಿಕ್ಷಕ; ವಿವಸ್ತ್ರಗೊಳಿಸಿ ಥಳಿಸಿದ ಜನ- ಆರೋಪಿಗಳಿಗೆ ಶೋಧ!

Twitter
Facebook
LinkedIn
WhatsApp
75

ಪಾಟ್ನಾ ಜುಲೈ 22: ಬಿಹಾರದಲ್ಲಿ (Bihar) ಅಪ್ರಾಪ್ತ ಬಾಲಕಿಯೊಂದಿಗೆ ಶಿಕ್ಷಕರೊಬ್ಬರು (Music Teacher) ಸರಸ ಸಲ್ಲಾಪದಲ್ಲಿ ತೊಡಗಿದ್ದಾಗ ಸಿಕ್ಕಿ ಬಿದ್ದಿದ್ದು, ಇವರಿಬ್ಬರನ್ನು ವಿವಸ್ತ್ರಗೊಳಿಸಿ ಥಳಿಸಿದ ಘಟನೆ ವರದಿ ಆಗಿದೆ. ಈ ಘಟನೆಯ ವಿಡಿಯೊ ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದ್ದು, ಮೂವರು ವ್ಯಕ್ತಿಗಳು ಅಪ್ರಾಪ್ತ ಬಾಲಕಿ ಮತ್ತು ಶಿಕ್ಷಕನ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸುತ್ತಿರುವುದನ್ನು ತೋರಿಸುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವ್ಯಕ್ತಿಯನ್ನು ಸಂಗೀತ ಶಿಕ್ಷಕ ಎಂದು ಗುರುತಿಸಲಾಗಿದ್ದು, ಈತನ ವಯಸ್ಸು 40 ಎಂದು ಪೊಲೀಸರು ಹೇಳಿದ್ದಾರೆ.

ಸಂತ್ರಸ್ತೆ ನೀಡಿದ ಹೇಳಿಕೆ ಆಧರಿಸಿ ಸಂಗೀತ ಶಿಕ್ಷಕನನ್ನು ಬಂಧಿಸಿದ್ದೇವೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸೆಕ್ಷನ್ 67 ಬಿ ಮತ್ತು ಐಪಿಸಿಯ ಸೆಕ್ಷನ್ 376 ರ (ಲೈಂಗಿಕ ಅಪರಾಧ) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್​​ಪಿ ಯೋಗೇಂದ್ರ ಕುಮಾರ್ ಹೇಳಿದ್ದಾರೆ.

ಅಪ್ರಾಪ್ತ ಬಾಲಕಿ ಮತ್ತು ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಮೂವರನ್ನು ಬಂಧಿಸಲು ಶೋಧ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಘಟನೆ ಗುರುವಾರ ನಡೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಪೊಲೀಸರು ವಿಡಿಯೊವನ್ನು ಪರಿಶೀಲಿಸುತ್ತಿದ್ದಾರೆ. ಇಬ್ಬರು ವ್ಯಕ್ತಿಗಳ ಬಟ್ಟೆಗಳನ್ನು ಮತ್ತು ಸ್ಥಳದಿಂದ ವಶಪಡಿಸಿಕೊಂಡ ಇತರ ಪುರಾವೆಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಕುಮಾರ್ ಹೇಳಿದರು.

ಪ್ರಕರಣದ ತನಿಖೆಗಾಗಿ ಹಿರಿಯ ಮಹಿಳಾ ಪೊಲೀಸ್ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಗುತ್ತಿದೆ. ಆಕೆಯ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗುವುದು ಎಂದು ಅವರು ಹೇಳಿದರು.

ಮಣಿಪುರ ಆಯ್ತು ಈಗ ಪಶ್ಚಿಮ ಬಂಗಾಳ ಸರದಿ; ಮಾಲ್ಡಾದಲ್ಲಿ ಇಬ್ಬರು ಮಹಿಳೆಯರ ಅರೆಬೆತ್ತಲೆಗೊಳಿಸಿ ಮೆರವಣಿಗೆ

ಕೋಲ್ಕತ್ತ, ಜುಲೈ 22: ಮಣಿಪುರದಲ್ಲಿ ಮಹಿಳೆಯೊಬ್ಬರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿದ ಘಟನೆಯ ಕಹಿ ನೆನಪು ಮಾಸುವ ಮುನ್ನವೇ ಪಶ್ಚಿಮ ಬಂಗಾಳದ (West Bengal) ಮಾಲ್ಡಾದಲ್ಲಿ ಅಂಥದ್ದೇ ಕೃತ್ಯ ಎಸಗಲಾಗಿದೆ. ಇಬ್ಬರು ಮಹಿಳೆಯರನ್ನು ಥಳಿಸಿ ಅರೆಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದನ್ನು ಪ್ರದರ್ಶಿಸುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೆಯಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಈ ಘಟನೆ ಮೂರ್ನಾಲ್ಕು ದಿನಗಳ ಹಿಂದೆ ನಡೆದಿದೆ. ಮಾಲ್ಡಾದ ಪಕುವಾಹತ್‌ನಲ್ಲಿ (Malda’s Pakuahat) ಸ್ಥಳೀಯರು ಕಳ್ಳತನದ ಶಂಕೆಯ ಮೇಲೆ ಇಬ್ಬರು ಮಹಿಳೆಯರನ್ನು ಹಿಡಿದು ಥಳಿಸಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಕಳ್ಳತನದ ಆರೋಪದಲ್ಲಿ ಇಬ್ಬರು ಮಹಿಳೆಯರ ಮೇಲೆ ಹಲವಾರು ಮಹಿಳೆಯರು ಹಲ್ಲೆ ನಡೆಸುತ್ತಿರುವ ದೃಶ್ಯ ವಿಡಿಯೊದಲ್ಲಿದೆ. ಆದರೆ, ಘಟನೆ ಕುರಿತು ಯಾವುದೇ ದೂರು ದಾಖಲಾಗಿಲ್ಲ ಎಂದು ಪಶ್ಚಿಮ ಬಂಗಾಳ ಪೊಲೀಸರು ಹೇಳಿದ್ದಾರೆ.

ವಿಡಿಯೋ ಗಮನಕ್ಕೆ ಬಂದ ನಂತರವೇ ಘಟನೆಯ ಬಗ್ಗೆ ತಿಳಿಯಿತು ಎಂದು ಪೊಲೀಸರು ಹೇಳಿದ್ದಾರೆ. ಇಬ್ಬರು ಮಹಿಳೆಯರು ಕಳ್ಳತನ ಮಾಡುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ನಂತರ ಸ್ಥಳೀಯ ಮಹಿಳೆಯರಿಂದ ಥಳಿಸಲ್ಪಟ್ಟಿದ್ದಾರೆ ಎಂಬುದು ಪ್ರಾಥಮಿಕ ತನಿಖೆಗಳಿಂದ ತಿಳಿದುಬಂದಿದೆ ಎಂದು ಅವರು ಹೇಳಿದ್ದಾರೆ.

ಘಟನೆಯ ನಂತರ ಹಲ್ಲೆ ನಡೆಸಿದ ಮಹಿಳೆಯರೂ ಪರಾರಿಯಾಗಿದ್ದಾರೆ. ಥಳಿತಕ್ಕೊಳಗಾದವರು ಭಯದಿಂದ ದೂರು ದಾಖಲಿಸಲು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ.

ಇದೀಗ ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವನೆ ನೀಡಿದ್ದಾರೆ.

ಈ ಮಧ್ಯೆ, ಮಣಿಪುರದ ಬೆತ್ತಲೆ ಮೆರವಣಿಗೆ ಪ್ರರಕಣಕ್ಕೆ ಸಂಬಂಧಿಸಿ ಒಟ್ಟು 5 ಮಂದಿಯನ್ನು ಈವರೆಗೆ ಬಂಧಿಸಲಾಗಿದೆ. ಮಣಿಪುರದಾದ್ಯಂತ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ