ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿ ಕ್ಷೇತ್ರದಲ್ಲಿ ಪ್ರಚಾರ ಆರಂಭ.!
ಚಿಕ್ಕೋಡಿ: ಲೋಕಸಭೆ ಕ್ಷೇತ್ರದಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಯುವ ನಾಯಕಿ ಪ್ರೀಯಂಕಾ ಸತೀಶ ಜಾರಕಿಹೊಳಿ ಹೇಳಿದರು.
ಚಿಕ್ಕೋಡಿ ಎಂ.ಕೆ.ಕವಟಗಿಮಠ ನಗರದಲ್ಲಿ ಇರುವ ಜಾರಕಿಹೊಳಿ ನಿವಾಸದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಯುವಕ- ಯುವತಿಯರು ರಾಜಕೀಯ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಪ್ರಾಧಾನ್ಯತೆ ನೀಡಿದ್ಸು. ಮತದಾರರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಯುವಕರಿಂದ ದೇಶ ಕೂಡಿದೆ. ಯುವಕರಿಂದ ದೇಶದಲ್ಲಿ ಪ್ರಗತಿಯಾಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪಕ್ಷ ನನಗೆ ಟಿಕೆಟ್ ನೀಡಿದೆ ಎಂದರು.
ತಂದೆ ಸತೀಶ ಜಾರಕಿಹೊಳಿ ಮಾಡಿರುವ ಅಭಿವೃದ್ಧಿ ಕಾರ್ಯಗಳಂತೆ ನಾನು ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುವ ಗುರಿ ಇದೆ ಎಂದರು.
ಯುವಕರು ರಾಜಕೀಯ ಕ್ಷೇತ್ರದಲ್ಲಿ ಮುಂದೆ ಬರಬೇಕು ಮತ್ತು ಬದಲಾವಣೆ ದೃಷ್ಟಿಯಿಂದ ಯುವಕರನ್ನು ಆಯ್ಕೆ ಮಾಡಬೇಕು ಎಂದು ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಈ ಸಂದರ್ಭದಲ್ಲಿ ಯುವ ದುರೀಣ ರಾಹುಲ ಜಾರಕಿಹೊಳಿ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಮತ್ತು ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ ಇದ್ದರು.
ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಒಂದೂವರೆ ಲಕ್ಷ ಮತಗಳ ಅಂತರದಿಂದ ಗೆಲ್ಲುವ ನಿರೀಕ್ಷೆ ಇದೆ: ಲಕ್ಷ್ಮಣ ಸವದಿ, ಶಾಸಕ
ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮತ್ತು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಪುತ್ರಿ ಪ್ರಿಯಾಂಕಾ ಜಾರಕಿಹೊಳಿ (Priyanka Jarkiholi) ಪರ ಅಥಣಿ ಶಾಸಕ ಲಕ್ಷ್ಮಣ ಸವದಿ (Laxman Savadi) ಪ್ರಚಾರ ಆರಂಭಿಸಿದ್ದಾರೆ. ಒಂದು ಉತ್ತಮ ಯೋಜನೆಯ ಮೂಲಕ ಅವರು ಪ್ರಚಾರ ಅರಂಭಿಸಿರುವುದು ಗಮನಾರ್ಹ. ಸವದಿಯವರೇ ಹೇಳುವ ಪ್ರಕಾರ ಮೊದಲಿಗೆ ಅವರು ಚಿಕ್ಕೋಡಿ ಲೋಕಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಸಭೆಗಳನ್ನು ನಡೆಸಲಿದ್ದಾರೆ.
ಕಾರ್ಯಕರ್ತರಿಗೆ ಸಲಹೆ ಸೂಚನೆಗಳನ್ನು ನೀಡಿದ ಬಳಿಕ ಅವರು ಸಾರ್ವಜನಿಕ ಸಬೆಗಳನ್ನು ನಡೆಸುತ್ತಾರಂತೆ. ಅಥಣಿ ಶಿವಯೋಗಿಗಳ ಪುಣ್ಯಭೂಮಿಯಾಗಿರುವುದರಿಂದ ಇಲ್ಲಿಂದಲೇ ಪ್ರಚಾರ ಕಾರ್ಯ ಆರಂಭಿಸಿರುವುದಾಗಿ ಹೇಳುವ ಶಾಸಕ; ಚುನಾವಣೆ ಯಾವುದೇ ಆಗಿರಲಿ, ಕಾರ್ಯಕರ್ತರು ಬಹು ದೊಡ್ಡ ಕಾರ್ಯ ನಿರ್ವಹಿಸುತ್ತಾರೆ, ಉಮೇದುವಾರನ ಸಂಕಲ್ಪ ಸಿದ್ಧಿಯಾಗಬೇಕಾದರೆ ಅದು ಕಾರ್ಯಕರ್ತರಿಂದ ಮಾತ್ರ ಸಾಧ್ಯ ಎನ್ನುತ್ತಾರೆ.
ಹಾಗೆ ಮಾತಾಡುತ್ತಲೇ ಸವದಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಫಲಿತಾಂಶವನ್ನು ಹೇಳಿಬಿಡುತ್ತಾರೆ! ವಿಧಾನ ಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಕ್ಷೇತ್ರದ ಮತದಾರ ಪ್ರದರ್ಶಿಸಿದ ದೋರಣೆ ಗಮನಿಸಿದರೆ ಪ್ರಿಯಾಂಕಾ ಕನಿಷ್ಟ ಒಂದೂವರೆ ಲಕ್ಷ ಮತಗಳ ಅಂತರದಿಂದ ಜಯಶಾಲಿಯಾಗುವ ನಿರೀಕ್ಷೆ ಇಟ್ಟುಕೊಂಡಿದ್ದೇವೆ ಎಂದು ಸವದಿ ಹೇಳುತ್ತಾರೆ.