ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ;ಇಲ್ಲಿದೆ ಮಾಹಿತಿ

Twitter
Facebook
LinkedIn
WhatsApp
ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ;ಇಲ್ಲಿದೆ ಮಾಹಿತಿ

ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕಗಳಿಸಿ ಪ್ರಸ್ತುತ ಸಾಲಿನಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಮತ್ತು ಉನ್ನತ ಶಿಕ್ಷಣ ಇಲಾಖೆಯಿಂದ ನೀಡಲಾಗುವ ಪ್ರಧಾನ ಮಂತ್ರಿ ಉನ್ನತ ಶಿಕ್ಷಣ ಪ್ರೋತ್ಸಾಹ (ಪಿಎಂ ಯುಎಸ್‌ಪಿ) ಕೇಂದ್ರ ವಲಯ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು www.scholarships.gov.in ವೆಬ್ ಸೈಟ್ ಮೂಲಕ ನೋಂದಾಯಿಸಿಕೊಳ್ಳಲು ಡಿಸೆಂಬರ್31 ಕೊನೆಯ ದಿನವಾಗಿದೆ. ಹೊಸ ಹಾಗೂ ನವೀಕರಣ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ್‌ನೋಂದಣಿ ಸಂಖ್ಯೆಯನ್ನು ಬ್ಯಾಂಕ್‌ ಖಾತೆಗೆ ಲಿಂಕ್ ಮಾಡಬೇಕು.

ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ;ಇಲ್ಲಿದೆ ಮಾಹಿತಿ

ಅಲ್ಪಸಂಖ್ಯಾತರ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

ಉಡುಪಿ, ಅ.17: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರಕಾರದ ಶಾಸನಬದ್ಧವಗಿ ಅಂಗಿಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಎಂಫಿಲ್ ಹಾಗೂ ಪಿಎಚ್‌ ಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತ ಮುಸ್ಲಿಮ್, ಕ್ರಿಶ್ಚಿಯನ್, ಜೈನ್, ಬೌದ್ರ ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುವ ಫೆಲೋಶಿಪ್‌ ಸೌಲಭ್ಯಕ್ಕಾಗಿ ಸೇವಾಸಿಂಧು ತಂತ್ರಾಂಶ https://sevasindhu. karnataka.gov.inನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಅ.31ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಝಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂ.: 0820-2573596 ಅನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ