ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿ ಸಾವು

Twitter
Facebook
LinkedIn
WhatsApp
ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿ ಸಾವು

ರಾಮನಗರ, ಸೆ.21: ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai Residential School) ಯ ತಡೆಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಮನಗರ (Ramanagara) ತಾಲೂಕಿನ ಹೊಸೂರು ಗೊಲ್ಲಳ್ಳಿ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿ ಕೌಶಿಕ್(12)‌ ಮೃತ ರ್ದುದೈವಿ. 6ನೇ ತರಗತಿ ಓದುತ್ತಿದ್ದ ಕೌಶಿಕ್, ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ನೀರಿನ ಟ್ಯಾಂಕ್​ಗೆ ನಿರ್ಮಾಣ ಮಾಡಿದ್ದ ತಡೆಗೋಡೆ ಕುಸಿದು ಈ ದುರ್ಘಟನೆ ನಡೆದಿದೆ. ಘಟನೆಗೆ ಕಳಪೆ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳಕ್ಕೆ ರಾಮನಗರ ಎಸ್​​ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇನ್ನು ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿರುವ ಕೌಶಿಕ್ ಮೃತದೇಹ ಇಡಲಾಗಿದ್ದು, ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಲವು ಬಾರಿ ಮನವಿ ಮಾಡಿದ್ದ ವಿದ್ಯಾರ್ಥಿಗಳು

ಈ‌ ಹಿಂದೆ ವಿದ್ಯಾರ್ಥಿಗಳು ಹಲವು ಬಾರಿ ಮನವಿ‌ ಮಾಡಿದ್ದರೂ, ಶಾಲಾ ಮಂಡಳಿ ಮಾತ್ರ ಇದಕ್ಕೆ ಕ್ಯಾರೆ ಅಂದಿರಲಿಲ್ಲ. ಇದೀಗ ಬೆಳಿಗ್ಗೆ ಸ್ನಾನಕ್ಕೆ ತೆರಳಿದಾಗ ಮೈಮೇಲೆ ಗೋಡೆ ಬಿದ್ದಿದೆ. ಇದರಿಂದ ಕೌಶಿಕ್ ತಲೆ ಮೇಲೆ ಬಲವಾದ ಗಾಯವಾಗಿದ್ದು, ರಕ್ತಸ್ರಾವವಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ಈ ವೇಳೆ ಕೌಶಿಕ್ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.

ಮೀನು ಮಾರುತ್ತಿದ್ದ ಅಮ್ಮನಿಗೆ ಸರ್ಪ್ರೈಸ್ ಕೊಟ್ಟ ಮಗ- ಕಣ್ಣೀರಾಕಿದ ತಾಯಿ!

ಉಡುಪಿ: ಮೂರು ವರ್ಷಗಳ ಬಳಿಕ ವಿದೇಶದಿಂದ ಊರಿಗೆ ಮರಳಿದ ಯುವಕ ತನ್ನ ತಾಯಿಗೆ ಸರ್ಪ್ರೈಸ್ ನೀಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ.

ಉಡುಪಿ (Udupi) ಜಿಲ್ಲೆ ಗಂಗೊಳ್ಳಿ ನಿವಾಸಿ ರೋಹಿತ್ ಮೂರು ವರುಷಗಳ ನಂತರ ದುಬೈನಿಂದ ತಾಯ್ನಾಡಿಗೆ ಮರಳಿದ್ದರು. ಮನೆಯವರಿಗೆ, ಮಿತ್ರರಿಗೆ ಸರ್ಪ್ರೈಸ್ ನೀಡುವ ನಿಟ್ಟಿನಿಂದ ತಾವು ಬರುವ ಕುರಿತು ಯಾವುದೇ ಮಾಹಿತಿ ನೀಡಿರಲಿಲ್ಲ. ಅಂತೆಯೇ ಮನೆಗೆ ಮರಳಿದಾಗ ಮನೆಯವರೆಲ್ಲ ರೋಹಿತ್ ನನ್ನು ಎದುರುಗೊಂಡರು. ಆದರೆ ತಾಯಿ ಮಾತ್ರ ಮನೆಯಲ್ಲಿ ಇರದಿರುವುದನ್ನು ಕಂಡು ಬೇಸರಗೊಂಡಿದ್ದ ರೋಹಿತ್, ನೇರವಾಗಿ ಗಂಗೊಳ್ಳಿ ಬಂದರು ಬಳಿ ತಾಯಿ ಮೀನು ಮಾರುವ ಸ್ಥಳಕ್ಕೆ ತೆರಳಿದ್ದಾರೆ

ತಾಯಿ ಸುಮಿತ್ರಾ ಮೀನು ಮಾರುತ್ತಿದ್ದಲ್ಲಿಗೆ ತೆರಳಿದ್ದ ರೋಹಿತ್, ತಲೆಗೆ ಟೋಪಿ ಹಾಕಿ ಮುಖಕ್ಕೆ ಕರವಸ್ತ್ರ ಕಟ್ಟಿ ಕನ್ನಡಕ ಹಾಕಿ ಮೀನು ಖರೀದಿಯ ನಾಟಕವಾಡಿದ್ದಾನೆ. ತನ್ನ ಬಳಿ ಮೀನು ಖರೀದಿಸಲು ಬಂದ ವ್ಯಕ್ತಿಯ ಹಾವಭಾವ ಗಮನಿಸಿದ ತಾಯಿಗೆ, ಇದು ತನ್ನ ಮಗನೇ ಎಂದು ಹೆತ್ತು ಕರುಳು ಹೇಳಿದೆ. ತಕ್ಷಣ ತನ್ನ ಮಗನನ್ನು ಬಿಗಿದಪ್ಪಿ ಆನಂದ ಬಾಷ್ಪ ಹರಿಸಿದ್ದಾರೆ.

ಈ ಎಲ್ಲಾ ದೃಶ್ಯಗಳನ್ನು ರೋಹಿತ್ ಗೆಳೆಯ ದೂರದಿಂದಲೇ ವೀಡಿಯೋ ಮಾಡಿದ್ದು, ಸದ್ಯ ಈ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ. ಮೂರು ವರ್ಷಗಳ ಬಳಿಕ ಮುಖ ಮರೆಮಾಡಿಕೊಂಡು ಬಂದರೂ ತಾಯಿ ಮಗನನ್ನು ಗುರುತಿಸಿರುವುದನ್ನು ಕಂಡು ನೆಟ್ಟಿಗರು ವೀಡಿಯೋ ಶೇರ್ ಮಾಡುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ