ಶಾಲಾ ಬಸ್ ಗೆ ಬೆಂಕಿ ; ಅದೃಷ್ಟವಶಾತ್ ಮಕ್ಕಳು ಪ್ರಾಣಾಪಾಯದಿಂದ ಪಾರು!
Twitter
Facebook
LinkedIn
WhatsApp
ವಿಜಯನಗರ(ಜೂ.15): ಶಾಲಾ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ ಸುಟ್ಟು ಕರಕಲಾದ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಅಯ್ಯನಹಳ್ಳಿ ಗ್ರಾಮದ ಬಳಿ ಇಂದು(ಗುರುವಾರ) ನಡೆದಿದೆ. ಆದರೆ, ಅದೃಷ್ಟವಶಾತ್ ಬಸ್‌ನಲ್ಲಿದ್ದ ಎಲ್ಲ ಮಕ್ಕಳು ಸೇಫ್ ಆಗಿದ್ದಾರೆ.
ಶಾರ್ಟ್ ಸರ್ಕ್ಯೂಟ್ ಆಗಿ ಖಾಸಗಿ ಶಾಲೆಯ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಹೊಗೆ ಕಾಣಿಸಿಕೊಂಡಾಗ ಚಾಲಕ, ಸಿಬ್ಬಂದಿ ಮಕ್ಕಳನ್ನು ಬಸ್‌ನಿಂದ ಕೆಳಗಿಳಿಸಿದ್ದಾರೆ. ಮಕ್ಕಳಿಗೆ ಯಾವುದೇ ರೀತಿಯಲ್ಲಿ ಪ್ರಾಣಾಪಾಯವಿಲ್ಲ ಅಂತ ತಿಳಿದು ಬಂದಿದೆ.
ಅಗ್ನಿ ಶಾಮಕದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಕೊಟ್ಟೂರು ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.