ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪತಿಯನ್ನ ಬಿಟ್ಟು ಬರುವಂತೆ ಶಾಲಾ ಶಿಕ್ಷಕಿಗೆ ಧಮ್ಕಿ, ಬೆದರಿಕೆ; ಪ್ರಕರಣ ದಾಖಲು!

Twitter
Facebook
LinkedIn
WhatsApp
ಪತಿಯನ್ನ ಬಿಟ್ಟು ಬರುವಂತೆ ಶಾಲಾ ಶಿಕ್ಷಕಿಗೆ ಧಮ್ಕಿ, ಬೆದರಿಕೆ; ಪ್ರಕರಣ ದಾಖಲು!

ಪತಿಯನ್ನ ಬಿಟ್ಟು ಬರುವಂತೆ ಶಾಲಾ ಶಿಕ್ಷಕಿಗೆ ಧಮ್ಕಿ: ಕೆಲವು ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಮಾಜಿ ಪ್ರೇಮಿ ಮತ್ತು ಆತನ ಸಹಚರನ ವಿರುದ್ಧ ಶಿಕ್ಷಕಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

10 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯು, ಪತಿಯನ್ನ ತೊರೆದು ಬರುವಂತೆ ಬ್ಲಾಕ್‌ಮೇಲ್ ಮಾಡುತ್ತಿದ್ದ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಚಾಮರಾಜನಗರ, (ಸೆಪ್ಟೆಂಬರ್ 19): ಶಾಲಾ ಶಿಕ್ಷಕಿಯ(Teacher) ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಧಮ್ಕಿ ಹಾಕುವುದಲ್ಲದೇ 10 ಲಕ್ಷ ರೂಪಾಯಿ ಹಣ ನೀಡದೆ ಇದ್ರೆ ಏರಿಯಾದಲ್ಲಿ ದೊಡ್ಡದಾಗಿ ಫ್ಲೆಕ್ಸ್ ಹಾಕುವುದಾಗಿ ಬ್ಲ್ಯಾಕ್​ ಮೇಲ್(blackmail)​ ಮಾಡಿರುವ ಘಟನೆ ಚಾಮರಾಜನಗರ (Chamarajnagarಜಿಲ್ಲೆ ಕೊಳ್ಳೆಗಾಲದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಬ್ದುಲ್ ಅಸೀಮ್ ಹಾಗೂ ಮಯೂರ್  ಎನ್ನುವರ ಶಿಕ್ಷಕಿ ಬಳಿ ಹಣಕ್ಕೆ ಡಿಮ್ಯಾಂಡ್​ ಇಟ್ಟಿದ್ದಲ್ಲದೇ ಗಂಡನನ್ನು ಬಿಟ್ಟು ಬರುವಂತೆ ಒತ್ತಾಯಿಸಿದ್ದಾರೆ.

ಒಂದು ವೇಳೆ ಪತಿಯನ್ನು ಬಿಟ್ಟು ಬರದಿದ್ದರೆ ಹಿಂದೂ-ಮುಸ್ಲಿಂ ಗಲಾಟೆ ಮಾಡಿಸುವುದಾಗಿ ಕಿರುಕುಳ ನೀಡಿದ್ದಾರೆ. ಇದರಿಂದ ನೊಂದ ಶಿಕ್ಷಕಿಗೆ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಅಬ್ದುಲ್ ಅಸೀಮ್ ಹಾಗೂ ಮಯೂರ್ ಎಂಬುವವರು ಶಿಕ್ಷಕಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳನ್ನು ಪತಿ ಹಾಗೂ ಕುಟುಂಬಸ್ಥರಿಗೆ ಕಳುಹಿಸಿದ್ದಾರೆ. ಅಬ್ಧುಲ್ ಅಸೀಮ್ ಎನ್ನುವಾತ ನೊಂದ ಸಂತ್ರಸ್ಥೆ (ಶಿಕ್ಷಕಿ) ಜೊತೆ ಕಳೆದ 7 ವರ್ಷಗಳಿಂದ ಸ್ನೇಹಿತನಾಗಿದ್ದ. ಆದ್ರೆ, ಶಿಕ್ಷಕಿ ಕಳೆದ 2 ವರ್ಷದ ಹಿಂದೆ ಬೇರೊಬ್ಬನ್ನೊಂದಿಗೆ ವಿವಾಹವಾಗಿದ್ದರು. 

ವಿವಾಹದ ಬಳಿಕ ಪತಿಯನ್ನ ಬಿಟ್ಟು ನನ್ನ ಜೊತೆ ಬಾ ಎಂದು ದುಂಬಾಲು ಬಿದ್ದಿದ್ದ. ಪತಿಯನ್ನ ಬಿಟ್ಟು ಬರದೆ ಇದ್ದರೆ ನಮ್ಮಿಬ್ಬರ ಖಾಸಗಿ ವಿಡಿಯೋ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಇನ್ನು ವಿಡಿಯೋ ಸಾಮಾಜಿ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಬಾರದು ಅಂದ್ರೆ 10 ಲಕ್ಷ ರೂ. ಹಣ ನೀಡಬೇಕೆಂದು ಡಿಮ್ಯಾಂಡ್ ಇಟ್ಟಿದ್ದಾನೆ. ಇದರಿಂದ ನೊಂದ ಸಂತ್ರಸ್ಥೆ ಶಿಕ್ಷಕಿ ಚಾಮರಾಜನಗರದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 

ಈ ಸಂಬಂಧ ಸಂತ್ರಸ್ತೆ ಸೈಬರ್ ಎಕನಾಮಿಕ್ ಅಂಡ್ ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಗೆ (ಸಿಇಎನ್) ದೂರು ನೀಡಿದ್ದಾರೆ. ಸದ್ಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ