ಬೆಳಗಾವಿ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಟ್ರಕ್ ಡಿಕ್ಕಿ (Accident) ಹೊಡೆದ ಪರಿಣಾಮ ಓರ್ವ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಖಾನಾಪೂರದಲ್ಲಿ (Khanapur) ನಡೆದಿದೆ. ಮೃತನನ್ನು ಸಂಗರಗಾಳಿ ಗ್ರಾಮದ ನಾರಾಯಣ ಲಕ್ಷ್ಮೀಣ ಕಡೋಲ್ಕರ್ (65) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರ ಗುರುತು ಪತ್ತೆಯಾಗಿಲ್ಲ. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಸ್ತೆಯ ಹೊಂಡದಲ್ಲಿ ಮಗುಚಿ ಬಿದ್ದ ಸ್ಕೂಟರ್; ಎಂಬಿಬಿಎಸ್ ವಿದ್ಯಾರ್ಥಿನಿ ಮೃತ್ಯು
ಕಾಸರಗೋಡು: ರಸ್ತೆಯ ಹೊಂಡದಲ್ಲಿ ಸಿಲುಕಿದ ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಎಂಬಿಬಿಎಸ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಕಣ್ಣೂರು ಚೇಂಬರ್ ಆಫ್ ಕಾಮರ್ಸ್ ನ ಮಾಜಿ ಅಧ್ಯಕ್ಷ, ಕಣ್ಣೂರು ಸೈಂಟ್ ಮೈಕಲ್ ಶಾಲಾ ಸಮೀಪದ ಮಹೇಶ್ಚಂದ್ರ ಬಾಳಿಗಾ ರವರ ಪುತ್ರಿ ಶಿವಾನಿ ಬಾಳಿಗಾ (20) ಮೃತ ಪಟ್ಟವರು.
ರವಿವಾರ ರಾತ್ರಿ ಏಳು ಗಂಟೆ ಸುಮಾರಿಗೆ ಕಾಸರಗೋಡು ಚಂದ್ರಗಿರಿ ರಸ್ತೆಯ ಪಿಲಿಕುಂಜೆ ಎಂಬಲ್ಲಿ ಅಪಘಾತ ನಡೆದಿತ್ತು. ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ರಸ್ತೆಯ ಹೊಂಡಕ್ಕೆ ಬಿದ್ದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಶಿವಾನಿ ಗಂಭೀರ ಗಾಯಾಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಸಂಜೆ ಮೃತ ಪಟ್ಟಿದ್ದಾರೆ.
ಈಕೆ ಮಣಿಪಾಲ ವಿಶ್ವ ವಿದ್ಯಾನಿಲಯದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದಳು. ಮೃತರು ತಂದೆ ತಾಯಿಯನ್ನು ಅಗಲಿದ್ದಾರೆ. ಇನ್ನು ಇವರ ಸಹೋದರ ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿದ್ದಾರೆ.
ಅಪಘಾತದ ಕುರಿತಂತೆ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನಿಂತಿದ್ದ ಲಾರಿಗೆ ಹಿಂಬದಿಯಿಂದ ಟ್ರಕ್ ಡಿಕ್ಕಿ – ಓರ್ವ ಸಾವು, ನಾಲ್ವರು ಗಂಭೀರ
ಖಾನಾಪೂರ ತಾಲೂಕಿನ ನಾಯ್ಕಲ್ ಕತ್ರಿ ರಸ್ತೆ ಬಳಿ ಹತ್ತು ಚಕ್ರದ ಲಾರಿ ನಿಂತಿತ್ತು. ಈ ಲಾರಿಗೆ ಮಾಡಿಗುಂಜಿ ಕಡೆಯಿಂದ ಖಾನಾಪುರ ಕಡೆಗೆ ಬರುತ್ತಿದ್ದ ಮಿನಿ ಟ್ರಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಖಾನಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.