ಸೋಮವಾರ, ಮೇ 20, 2024
ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ ಅಂತಿಮ, ಯಾರಿಗೆ ಎಷ್ಟೆಷ್ಟು ಇಲ್ಲಿದೆ ವಿವಾರವಾದ ಮಾಹಿತಿ

Twitter
Facebook
LinkedIn
WhatsApp
ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ ಅಂತಿಮ, ಯಾರಿಗೆ ಎಷ್ಟೆಷ್ಟು ಇಲ್ಲಿದೆ ವಿವಾರವಾದ ಮಾಹಿತಿ

ಮಹಾರಾಷ್ಟ್ರದಲ್ಲಿ ವಿಪಕ್ಷಗಳ ಮಹಾ ವಿಕಾಸ್‌ ಅಘಾಡಿ ಮೈತ್ರಿಕೂಟವು ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ ಎಂದು ಮೂಲಗಳು ತಿಳಿಸಿದ್ದು ಮುಂದಿನ 48 ಗಂಟೆಗಳೊಳಗೆ ಅಧಿಕೃತ ಘೋಷಣೆ ಮಾಡುವ ನಿರೀಕ್ಷೆಯಿದೆ ಎಂದು NDTV ವರದಿ ಮಾಡಿದೆ.

ಮಾಜಿ ಸಿಎಂ ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆ ಬಣವು ರಾಜ್ಯದ 48 ಲೋಕಸಭಾ ಕ್ಷೇತ್ರಗಳ ಪೈಕಿ 20ರಲ್ಲಿ, ಕಾಂಗ್ರೆಸ್‌ ಪಕ್ಷ 18ರಲ್ಲಿ ಹಾಗೂ ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿ ಇತರ 10 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಕುರಿತು ಒಪ್ಪಂದಕ್ಕೆ ಬಂದಿವೆ ಎಂದು ತಿಳಿದು ಬಂದಿದೆ.

ಈ ಹಿಂದೆ ಐದು ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದ್ದ ವಂಚಿತ್‌ ಬಹುಜನ್‌ ಅಘಾಡಿ, ಉದ್ಧವ್‌ ಶಿವ ಸೇನೆ ಬಣದ ಪಾಲಿನಿಂದ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಹಾಗೂ ಪವಾರ್‌ ನೇತೃತ್ವದ ಎನ್‌ಸಿಪಿ ಬೆಂಬಲದೊಂದಿಗೆ ರಾಜು ಶೆಟ್ಟಿ ಎಂಬವರು ಸ್ವತಂತ್ರ ಅಭ್ಯರ್ಥಿಯಾಗಲಿದ್ದಾರೆಂಬ ಮಾಹಿತಿಯಿದೆ.

ಮುಂಬೈಯ ಆರು ಲೋಕಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಉದ್ಧವ್‌ ಬಣ ಸ್ಪರ್ಧಿಸಲಿದ್ದರೆ ಮುಂಬೈ ಈಶಾನ್ಯ ಕ್ಷೇತ್ರವನ್ನು ವಂಚಿತ್‌ ಬಹುಜನ್‌ ಅಘಾಡಿಗೆ ನೀಡುವ ಸಾಧ್ಯತೆಯಿದೆ.

2019 ಲೋಕಸಭಾ ಚುನಾವಣೆಯಲ್ಲಿ ಶಿವಸೇನೆ 23 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 18ರಲ್ಲಿ ಜಯ ಸಾಧಿಸಿತ್ತು. ಇಪ್ಪತ್ತೈದು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್‌ ಕೇವಲ ಚಂದ್ರಾಪುರದಲ್ಲಿ ಗೆದ್ದಿದ್ದರೆ ಎನ್‌ಸಿಪಿ 19 ಕ್ಷೇತ್ರಗಳ ಪೈಕಿ 4ರಲ್ಲಿ ಗೆದ್ದಿತ್ತು. ಆಗ ಶಿವಸೇನೆ ಮತ್ತು ಎನ್‌ಸಿಪಿ ಇಬ್ಭಾಗವಾಗಿರಲಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ