ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದ್ವಿತೀಯ ಪಿಯುಸಿ ಪಲಿತಾಂಶ ಪ್ರಕಟ; ದಕ್ಷಿಣ ಕನ್ನಡಕ್ಕೆ ಎಷ್ಟನೇ ಸ್ಥಾನ..!

Twitter
Facebook
LinkedIn
WhatsApp
ದ್ವಿತೀಯ ಪಿಯುಸಿ ಪಲಿತಾಂಶ ಪ್ರಕಟ; ದಕ್ಷಿಣ ಕನ್ನಡಕ್ಕೆ ಎಷ್ಟನೇ ಸ್ಥಾನ..!

ಬೆಂಗಳೂರು, ಏಪ್ರಿಲ್ 09: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ (Second PU Result) ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಪೈಕಿ 552690 ಮಂದಿ ತೇರ್ಗಡೆಯಾಗಿದ್ದಾರೆ. 11 ಗಂಟೆಗೆ ಅಧಿಕೃತ ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗುತ್ತಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.

ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ದಕ್ಷಿಣ ಕನ್ನಡ ಟಾಪ್, ಗದಗ ಜಿಲ್ಲೆಗೆ ಕೊನೆಯ ಸ್ಥಾನ

ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದೆ. ಶೇ 97ರಷ್ಟು ತೇರ್ಗಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ಶೇ 96.80 ರಷ್ಟು ಮಂದಿ ಉತ್ತೀರ್ಣರಾಗುವುದರೊಂದಿಗೆ ಉಡುಪಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಶೇ 94.89ರಷ್ಟು ಫಲಿತಾಂಶದೊಂದಿಗೆ ವಿಜಯಪುರ ಜಿಲ್ಲೆ 3ನೇ ಸ್ಥಾನದಲ್ಲಿದೆ. ಫಲಿತಾಂಶದಲ್ಲಿ ಗದಗ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ.

ಟಾಪರ್​ಗಳು ಯಾರೆಲ್ಲ?

ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮೀ 600ಕ್ಕೆ 598 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಪಿಯುಸಿ ಕಲಾ ವಿಭಾಗದಲ್ಲಿ ಇಬ್ಬರು ಟಾಪರ್​ಗಳಾಗಿದ್ದಾರೆ. ಕಲಾ ವಿಭಾಗದಲ್ಲಿ ಮೇಧಾ ಡಿ. ಟಾಪರ್ 600ಕ್ಕೆ 596 ಅಂಕಗಳನ್ನು ಪಡೆದರೆ, ವಿಜಯಪುರದ ವೇದಾಂತ್ ಕೂಡ 600ಕ್ಕೆ 596 ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ಜ್ಞಾನವಿ 600ಕ್ಕೆ 597 ಅಂಕ ಪಡೆದು ಟಾಪರ್ ಆಗಿದ್ದಾರೆ.

2024 ರ ದ್ವಿತೀಯ ಪಿಯು ಪರೀಕ್ಷೆಗೆ 3.3 ಲಕ್ಷ ಹುಡುಗರು ಮತ್ತು 3.6 ಲಕ್ಷ ಹುಡುಗಿಯರು ಹಾಜರಾಗಿದ್ದರು. ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.

ಕಳೆದ ಬಾರಿ ಮೇಲುಗೈ ಸಾಧಿಸಿದ್ದ ವಿದ್ಯಾರ್ಥಿನಿಯರು

ಕಳೆದ ವರ್ಷದ, ಅಂದರೆ 2023 ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದರು. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರ ಪೈಕಿ ಶೇಕಡಾ 80.25 ರಷ್ಟು ಉತ್ತೀರ್ಣರಾಗಿದ್ದರೆ, ವಿದ್ಯಾರ್ಥಿಗಳ ಪೈಕಿ ಶೇಕಡಾ 69.05 ರಷ್ಟು ಮಂದಿ ಉತ್ತೀರ್ಣರಾಗಿದ್ದರು. ಒಟ್ಟಾರೆ ಉತ್ತೀರ್ಣ ಪ್ರಮಾಣ ಶೇಕಡಾ 74.67 ರಷ್ಟಿತ್ತು. ಒಟ್ಟು 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist