ಇನ್ನೂ ಕಗ್ಗಂಟಾಗಿ ಉಳಿದ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ; ಸಿದ್ದರಾಮಯ್ಯ ಇಂದು ದೆಹಲಿಗೆ..!

ಬಿಜೆಪಿ ಈಗಾಗಲೇ ಇಪ್ಪತ್ತು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ ಕಾಂಗ್ರೆಸ್ ಮಾತ್ರ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿ ಉಳಿದ ಕ್ಷೇತ್ರಗಳಿಗೆ ಟಿಕೆಟ್ ಹಗ್ಗಜಗ್ಗಾಟ ನಡೆಸುತ್ತಿದೆ. ಹೀಗಾಗಿ ಕಾಂಗ್ರೆಸ್ ಮೇಲೆ ಅಧಿಕ ಒತ್ತಡ ಇದ್ದು, ಇಂದು ದೆಹಲಿಯಲ್ಲಿ ಎಐಸಿಸಿ ಸಭೆ ನಡೆಯಲಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ದೌಡಾಯಿಸಲಿದ್ದಾರೆ.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಮಾಲೋಚನಾ ಸಭೆಗಳು ನಡೆಯುತ್ತಿದ್ದು, ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಬಿಕ್ಕಟ್ಟು ಹೆಚ್ಚಾಗಿರುವ ಕೋಲಾರ ಕ್ಷೇತ್ರ, ಬೆಂಗಳೂರು ಲೋಕಸಭಾ ಕ್ಷೇತ್ರ ಮತ್ತು ಮೈಸೂರು- ಕೊಡಗು ಕ್ಷೇತ್ರಗಳಿಗೆ ಅಭ್ಯರ್ಥಿ ಫೈನಲ್ ಮಾಡಲಾಗುತ್ತದೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಬೆಂಗಳೂರಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ವಿಶೇಷವೆಂದರೆ, ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಈ ತಿಂಗಳು ಬಿಡುಗಡೆ ಮಾಡಿದೆ.
ಮೊದಲ ಪಟ್ಟಿಯಲ್ಲಿ ಒಟ್ಟು 39 ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, ಕೇರಳದಿಂದ 16, ಕರ್ನಾಟಕದ ಏಳು ಮತ್ತು ಛತ್ತೀಸ್‌ಗಢದಿಂದ ಆರು, ತೆಲಂಗಾಣದ ನಾಲ್ವರು ಅಭ್ಯರ್ಥಿಗಳು. ಮೇಘಾಲಯದಿಂದ ಇಬ್ಬರು ಮತ್ತು ನಾಗಾಲ್ಯಾಂಡ್, ತ್ರಿಪುರಾ, ಸಿಕ್ಕಿಂ ಮತ್ತು ಲಕ್ಷದೀಪ್‌ನಿಂದ ತಲಾ ಒಬ್ಬರನ್ನು ಘೋಷಿಸಲಾಗಿದೆ.
ಡಿಕೆ ಶಿವಕುಮಾರ್‌ಗೆ ಹೈಕೋರ್ಟ್ ತುರ್ತು ನೋಟಿಸ್
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ತುರ್ತು ನೋಟಿಸ್ ನೀಡಿದೆ.
ಡಿಕೆ ಶಿವಕುಮಾರ್ (DK Shivakumar) ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಕನಕಪುರ ನ್ಯಾಯಾಲಯದ ವ್ಯಾಪ್ತಿಯಿಂದ ಬೆಂಗಳೂರಿಗೆ ವರ್ಗಾವಣೆ ಮಾಡಿಕೊಡಿ. ಯಾಕೆಂದರೆ ಡಿಕೆ ಶಿವಕುಮಾರ್ ಬಲಾಢ್ಯರು. ನಾನು ಕನಕಪುರಕ್ಕೆ ಹೋಗಲು ತೊಂದರೆ ಮಾಡುತ್ತಾರೆ. ಹೀಗಾಗಿ ಬೆಂಗಳೂರಿನ ಕೋರ್ಟ್ ಗೆ ವರ್ಗಾವಣೆ ಮಾಡಿ ಎಂದು ಯತ್ನಾಳ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ (Highcourt) ಇಂದು ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.
ಏನಿದು ಪ್ರಕರಣ?: ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ನಾಯಕರನ್ನು ಭೇಟಿ ಮಾಡಿ ತಮ್ಮ ವಿರುದ್ಧದ ಆದಾಯ ತೆರಿಗೆ ಇಲಾಖೆ (Income Tax Department) ಪ್ರಕರಣಗಳಿಂದ ರಕ್ಷಣೆ ಕೋರಿದ್ದಾರೆ. ನಮ್ಮ ಕೇಂದ್ರ ಸಚಿವರ ಮೂಲಕ ಲಾಬಿ ಮಾಡಿದ್ದಾರೆ. ವಿವಿಧ ಮೂಲಗಳ ಜಾಡು ಹಿಡಿದು ನಮ್ಮ ರಾಷ್ಟ್ರೀ ಯ ಅಧ್ಯಕ್ಷರ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದಾರೆ. ತಮ್ಮ ವಿರುದ್ಧದ ಇಡಿ ಪ್ರಕರಣಗಳನ್ನು ಮುಕ್ತಾಯಗೊಳಿಸಿದರೆ ಕರ್ನಾ ಟಕದಲ್ಲಿ ಬಿಜೆಪಿ ಸರ್ಕಾ ರ ರಚಿಸಲು ತಮ್ಮ ವಿರೋಧ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂಬುದು ನನಗೆ ಗೊತ್ತಿದೆ ಎಂದು 2019ರಲ್ಲಿ ವಿಜಯಪುರದಲ್ಲಿ ಯತ್ನಾಳ್ ಹೇಳಿದ್ದರು.
ಯತ್ನಾಳ್ ಅವರ ಹೇಳಿಕೆಯಿಂದ ನನ್ನ ಘನತೆ ಮತ್ತು ವರ್ಚಸ್ಸಿಗೆ ಹಾನಿಯಾಗಿದ್ದು, 204 ಕೋಟಿ ಪರಿಹಾರ ನೀಡುವಂತೆ ಆದೇಶಿಸಬೇಕು ಎಂದು ಕೋರಿ ಶಿವಕುಮಾರ್, ರಾಮನಗರ ಜಿಲ್ಲೆಯ ಕನಕಪುರ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.