ಸೋಮವಾರ, ಮೇ 20, 2024
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೋಟಿನ ಕಂತೆಗಳೊಂದಿಗೆ ಪತ್ನಿ, ಮಕ್ಕಳ ಸೆಲ್ಫಿ; ಫೋಟೋ ವೈರಲ್, ಅಧಿಕಾರಿಗೆ ವರ್ಗಾವಣೆ ಮಾಡಿ ತನಿಖೆ!

Twitter
Facebook
LinkedIn
WhatsApp
13418359316866302198

ಲಖನೌ: ನೋಟಿನ ಕಂತೆಗಳೊಂದಿಗೆ ಪತ್ನಿ ಮತ್ತು ಮಕ್ಕಳು ಸೆಲ್ಫಿ ತೆಗೆದುಕೊಂಡ ಫೋಟೋ ವೈರಲ್​ ಆದ ಬೆನ್ನಲ್ಲೇ ಪೊಲೀಸ್​ ಅಧಿಕಾರಿಯೊಬ್ಬರನ್ನು ತಕ್ಷಣ ವರ್ಗಾವಣೆ ಮಾಡಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದೆ.

500 ರೂಪಾಯಿ ನೋಟಿನ ಕಂತೆಗಳನ್ನು ಮಂಚದ ಮೇಲೆ ಜೋಡಿಸಿ ಅಧಿಕಾರಿಯ ಪತ್ನಿ ಮತ್ತು ಮಕ್ಕಳಿಬ್ಬರು ಸೆಲ್ಫಿ ತೆಗೆದುಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಆಕ್ರೋಶಗಳು ವ್ಯಕ್ತವಾಗುತ್ತಿದೆ. ಇದು ಭ್ರಷ್ಟ ವ್ಯವಸ್ಥೆಗೆ ಹಿಡಿದ ಕನ್ನಡಿ ಎಂಬ ಟೀಕೆಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಅಧಿಕಾರಿಯನ್ನು ವರ್ಗಾವಣೆ ಮಾಡಿ ತನಿಖೆ ಆರಂಭಿಸಲಾಗಿದೆ.

UP Cop 2

ಸುಮಾರು 14 ಲಕ್ಷ ರೂ. ಮೌಲ್ಯದ ಹಣ ಕತೆಗಳೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಹಿರಿಯ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದು, ಠಾಣೆಯ ಉಸ್ತುವಾರಿಯಾಗಿದ್ದ ರಮೇಶ್​ ಚಂದ್ರ ಸಹನಿ ಎಂಬುವರನ್ನು ಬೇರೆಡೆಗೆ ವರ್ಗಾಯಿಸಲಾಗಿದೆ. ಕುಟುಂಬಬದ ಆಸ್ತಿಯನ್ನು 2021ರ ನವೆಂಬರ್​ 14ರಂದು ಮಾರಾಟ ಮಾಡಿದಾಗ ಬಂದಂತಹ ಹಣದ ಜೊತೆ ತೆಗೆದಂತಹ ಸೆಲ್ಫಿ ಫೋಟೋ ಅದಾಗಿದೆ ಎಂದು ಸಹನಿ ಅವರು ಸಮರ್ಥನೆ ನೀಡಿದ್ದಾರೆ.ಆದರೆ, ಸಾಮಾಜಿಕ ಜಾಲತಾಣದಲ್ಲಿ ಸಹನಿ ಅವರ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ತನಿಖೆಯಲ್ಲಿ ಅಕ್ರಮ ಬೆಳಕಿಗೆ ಬಂದಲ್ಲಿ ಸಹನಿ ಕೆಲಸಕ್ಕೆ ಕುತ್ತು ಬರುವ ಸಾಧ್ಯತೆ ದಟ್ಟವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ