ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಿಮ್ಮ ಮೊಬೈಲ್ ಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಬಂದಿಲ್ವಾ ; ಇಲ್ಲಿದೆ ಸಂಪೂರ್ಣ ಮಾಹಿತಿ

Twitter
Facebook
LinkedIn
WhatsApp
ನಿಮ್ಮ ಮೊಬೈಲ್ ಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಬಂದಿಲ್ವಾ ; ಇಲ್ಲಿದೆ ಸಂಪೂರ್ಣ ಮಾಹಿತಿ

ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೆ ತರಲು ಉದ್ದೇಶಿಸಿರುವ ಎಮರ್ಜೆನ್ಸಿ ಅಲರ್ಟ್ ಸಿಸ್ಟಂನ (Emergency Alert System) ಭಾಗವಾಗಿ ಸೆಲ್ ಬ್ರಾಡ್​ಕ್ಯಾಸ್ಟ್ ಸಿಸ್ಟಂ (Cell Broadcast System) ಅನ್ನು ರೂಪಿಸಲಾಗಿದೆ. ಈ ಸಿಸ್ಟಂ ಅನ್ನು ಜಾರಿಗೆ ತರುವ ಮುನ್ನ ದೇಶಾದ್ಯಂತ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅದರ ಭಾಗವಾಗಿ ಇವತ್ತು ಎಲ್ಲರ ಮೊಬೈಲ್ ನಂಬರ್​ಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಬಂದಿರಬಹುದು. ಇದು ಕೇವಲ ಸ್ಯಾಂಪಲ್ ಮೆಸೇಜ್ ಮಾತ್ರವೇ ಆಗಿರುತ್ತದೆ. ಯಾರು ಗಾಬರಿ ಆಗಬಾರದೆಂದು ಮೊನ್ನೆಯೇ ಸರ್ಕಾರ ಸಾರ್ವಜನಿಕರಿಗೆ ಮನವಿ ಮಾಡಿತ್ತು.

ಹಿಂದೆ ಇದರ ಪರೀಕ್ಷಾರ್ಥ ಪ್ರಯೋಗಗಳು ನಡೆದಿದ್ದವು. ಜುಲೈ 20, ಆಗಸ್ಟ್ 17 ಮತ್ತು ಸೆಪ್ಟೆಂಬರ್ 21ರಂದು ದೇಶದ ವಿವಿಧೆಡೆ ಟೆಸ್ಟ್ ಮೆಸೇಜ್​​ಗಳು ಬಂದಿದ್ದವು. ಆಗ ಸೀಮಿತ ಸಂಖ್ಯೆಯ ಜನರಿಗೆ ಮಾತ್ರ ಅಲರ್ಟ್ ಮೆಸೇಜ್ ನೀಡಲಾಗಿತ್ತು. ಈಗ ಬಹುತೇಕ ಎಲ್ಲರಿಗೂ ಅಲರ್ಟ್ ಮೆಸೇಜ್ ಬಂದಿರುತ್ತದೆ. ಕೆಲ ನಿಮಿಷಗಳ ಅಂತರದಲ್ಲಿ ಇಂಗ್ಲೀಷ್ ಮತ್ತು ಕನ್ನಡದಲ್ಲಿ ಮೆಸೇಜ್ ಕಳುಹಿಸಲಾಗಿದೆ. ಕನ್ನಡದಲ್ಲಿ ಮೆಸೇಜ್ ಈ ಕೆಳಕಂಡಂತಿರುತ್ತದೆ:

Emergency alert: Extreme

‘ಇದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ ಸಂದೇಶವಾಗಿದೆ. ನಿಮ್ಮ ಕಡೆಯಿಂದ ಯಾವುದೇ ಕ್ರಿಯೆಯ ಅಗತ್ಯವಿಲ್ಲದ ಕಾರಣ ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಾರಿಗೊಳಿಸುತ್ತಿರುವ ಪ್ಯಾನ್-ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸಲು ಈ ಸಂದೇಶವನ್ನು ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ತುರ್ತು ಸಂದರ್ಭಗಳಲ್ಲಿ ಸಕಾಲಿಕ ಎಚ್ಚರಿಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ.’

ನಿಮ್ಮ ಮೊಬೈಲ್​ಗೆ ಟೆಸ್ಟ್ ಮೆಸೇಜ್ ಬಂದಿಲ್ಲವಾ? ಇವಿರಬಹುದು ಕಾರಣಗಳು

ತಮ್ಮ ಮೊಬೈಲ್​ಗೆ ಅಲರ್ಟ್ ಮೆಸೇಜ್ ಬಂದಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ಇದಕ್ಕೆ ಸಂಭಾವ್ಯ ಕಾರಣಗಳು ಇಲ್ಲಿವೆ:

  • ಎಲ್ಲರಿಗೂ ಏಕಕಾಲದಲ್ಲಿ ಟೆಸ್ಟ್ ಮೆಸೇಜ್ ಬಂದಿರುವುದಿಲ್ಲ. ಏರ್​ಟೆಲ್, ಜಿಯೋ, ವೊಡಾಫೋನ್ ಇತ್ಯಾದಿ ಟೆಲಿಕಾಂ ಕಂಪನಿಗಳ ಬಳಕೆದಾರರಿಗೆ ಪ್ರತ್ಯೇಕವಾಗಿ ಈ ಅಲರ್ಟ್ ಮೆಸೇಜ್ ತಲುಪಿರುತ್ತದೆ. ಇಂದು (ಅ.12) ಏರ್ಟೆಲ್ ಗ್ರಾಹಕರಿಗೆ ಮೊದಲು ಅಲರ್ಟ್ ಬಂದಿದೆ. ಕೆಲ ಹೊತ್ತಿನ ಬಳಿಕ ಜಿಯೋ ಬಳಕೆದಾರರಿಗೆ ಅಲರ್ಟ್ ಬಂದಿದೆ. ಬಳಿಕ ವೊಡಾಫೋನ್ ಐಡಿಯಾ ಸಿಮ್ ಹೊಂದಿರುವವರಿಗೆ ಟೆಸ್ಟಿಂಗ್ ಅಲರ್ಟ್ ಸಂದೇಶ ಸಿಕ್ಕಿದೆ.
  • ಅಲರ್ಟ್ ಮೆಸೇಜ್ ಸುಮಾರು 30 ನಿಮಿಷ ಕಾಲಘಟ್ಟದಲ್ಲಿ ಇರುತ್ತದೆ. ಈ ಅವಧಿಯಲ್ಲಿ ನಿಮ್ಮ ಮೊಬೈಲ್ ಸ್ವಿಚ್ ಆಫ್ ಆಗಿದ್ದರೆ ನಿಮಗೆ ಮೆಸೇಜ್ ಬಂದಿರುವುದಿಲ್ಲ. ಈ 30 ನಿಮಿಷದ ಅವಧಿಯೊಳಗೆ ನಿಮ್ಮ ಮೊಬೈಲ್ ಸ್ವಿಚ್ ಆನ್ ಆದಾಗ ಮೆಸೇಜ್ ಬರುತ್ತದೆ. ಅವಧಿ ಮೀರಿದ ಬಳಿಕ ಸ್ವಿಚ್ ಆನ್ ಮಾಡಿದರೂ ಮೆಸೇಜ್ ಬರುವುದಿಲ್ಲ. ಏರ್​ಪ್ಲೇನ್ ಮೋಡ್​ನಲ್ಲಿದ್ದರೂ ಅಲರ್ಟ್ ಸಿಗುವುದಿಲ್ಲ.
  • ಫೋನ್ ಸೆಟಿಂಗ್​ನಲ್ಲಿ ಎಮರ್ಜೆನ್ಸಿ ಅಲರ್ಟ್ ಸಿಸ್ಟಂ ಆಫ್ ಆಗಿರಬಹುದು.
  • ಹಳೆಯ ಫೋನ್ ಆಗಿದ್ದರೆ ಅಲರ್ಟ್ ಬರದೇ ಹೋಗಬಹುದು. ಎಮರ್ಜೆನ್ಸಿ ಸಿಸ್ಟಂ ವಾರ್ನಿಂಗ್ ವ್ಯವಸ್ಥೆಗೆ ನಿಮ್ಮ ಫೋನ್ ಹೊಂದಿಕೆಯಾಗಿರುವುದಿಲ್ಲ. ಇತ್ತೀಚಿನ ಫೋನ್​ನಲ್ಲಿ ಈ ಸಮಸ್ಯೆ ಇರದು.
  • ಪ್ರದೇಶವಾರು ಬೇರೆ ಬೇರೆ ಸಮಯದಲ್ಲಿ ಅಲರ್ಟ್ ಬಂದಿರಬಹುದು.
ಸೆಟ್ಟಿಂಗ್​ನಲ್ಲಿ ಅಲರ್ಟ್ ಸಿಸ್ಟಂ ಅನ್ ಮಾಡುವುದು ಹೇಗೆ?
  • ನಿಮ್ಮ ಆಂಡ್ರಾಯ್ಡ್ ಮೊಬೈಲ್​ನ ಸೆಟಿಂಗ್ಸ್​ಗೆ ಹೋಗಿ
  • ಸರ್ಚ್ ಬಾರ್​ನಲ್ಲಿ ವೈರ್ಲೆಸ್ ಎಮರ್ಜೆನ್ಸಿ ನೋಟಿಫಿಕೇಶನ್ ಎಂದು ಸರ್ಚ್ ಮಾಡಿ.
  • ಅಲ್ಲಿ ಅಲರ್ಟ್ಸ್ ಆಫ್ ಆಗಿದ್ದರೆ ಅದನ್ನು ಆನ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ