5 ಖಾಸಗಿ ಬಸ್‌ಗಳ ನಡುವೆ ಸರಣಿ ಅಪಘಾತ..!
ಬೆಂಗಳೂರು/ನೆಲಮಂಗಲ: ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ, ನೆಲಮಂಗಲ (Nelamangala) ತಾಲೂಕಿನ ತೊಣಚಿನಗುಪ್ಪೆ ಬಳಿ ಸರಣಿ ಅಪಘಾತ ನಡೆದಿದ್ದು, ಭಾರೀ ಟ್ರಾಫಿಕ್ ಜಾಮ್ (Taffic Jam) ಉಂಟಾದ ಘಟನೆ ನಡೆದಿದೆ.
5 ಖಾಸಗಿ ಬಸ್ ಗಳ ನಡುವೆ ಈ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ 25 ಮಂದಿಗೆ ಗಾಯಗಳಾಗಿದ್ದು, ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಬಸ್‌ಗಳನ್ನು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿದ್ದಾರೆ. ಅಲ್ಲದೆ ಸ್ಥಳೀಯರ ನೆರವಿನೊಂದಿಗೆ ಬಸ್ ಬಸ್ ಗಳ ಮಧ್ಯೆ ಸಿಲುಕಿರುವ ಜನರು ಜನರನ್ನ ಹೊರಗೆ ತೆಗೆಯಲು ಹರಸಾಹಸ ಪಡುತ್ತಿದ್ದಾರೆ.
ಸಂಪೂರ್ಣವಾಗಿ ಆವರಿಸಿರುವ ಮಂಜಿನಿಂದ ರಸ್ತೆ ಕಾಣದೆ ಅಪಘಾತ ಆಗಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಿಂದ ತುಮಕೂರು- ಬೆಂಗಳೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಸವಾರರು ಪರದಾಡಿದ್ದಾರೆ.
ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್- ಜಿಲ್ಲಾಡಳಿತದ ಆದೇಶವೇನು?
ಚಿಕ್ಕಬಳ್ಳಾಪುರ: ಪ್ರವಾಸಿಗರ ನೆಚ್ಚಿನ ತಾಣವೆಂದರೆ ಅದು ನಂದಿಗಿರಿಧಾಮ. ಆದರೆ ಇಂತಹ ನಂದಿಬೆಟ್ಟದಲ್ಲಿ (Nandihills) ನೀವೇನಾದರೂ ಈ ಬಾರಿ ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಬೇಕು ಎಂಬ ಪ್ಲ್ಯಾನ್ ಮಾಡಿಕೊಂಡಿದ್ದರೆ ಕ್ಯಾನ್ಸಲ್ ಮಾಡಿಕೊಳ್ಳಿ. ಯಾಕೆಂದರೆ ನಂದಿಬೆಟ್ಟಕ್ಕೆ ಪ್ರವಾಸಗರಿಗೆ ನಿರ್ಬಂಧ ಹೇರಲಾಗಿದೆ.
ಹೌದು. ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಪ್ರವಾಸಿಗರಿಗೆ ಬ್ರೇಕ್ ಬಿದ್ದಿದೆ. ಡಿಸೆಂಬರ್ 31ರ ಸಂಜೆ 06 ಗಂಟೆಯಿಂದ ಜನವರಿ 01 ರ 06 ಗಂಟೆಯವರೆಗೆ ನಿಷೇಧ ಹೇರಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದಾರೆ. ಕಾನೂನು ಸುವ್ಯವಸ್ಥೆಗೆ ತೊಡಕಾಗುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಆದೇಶವನ್ನು ನೀಡಿದೆ.
ಇಷ್ಟು ಮಾತ್ರವಲ್ಲದೇ ನಂದಿಗಿರಿಧಾಮದಲ್ಲಿ ರೂಂ ಬುಕ್ಕಿಂಗ್ ಸಹ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಸದ್ಯ ಜಿಲ್ಲಾಡಳಿತದ ಆದೇಶದಿಂದ ನ್ಯೂ ಇಯರ್ ಸೆಲೆಬ್ರೇಟ್ ಮಾಡಬೇಕು ಎಂದು ಕನಸು ಕಂಡಿದ್ದ ಪ್ರವಾಸಿಗರಿಗೆ ಭಾರೀ ನಿರಾಸೆಯಾಗಿದೆ.