ಭೀಕರ ಅಪಘಾತಕ್ಕೆ ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಸಾವು!

ತಿರುವಣ್ಣಾಮಲೈ ಅಕ್ಟೋಬರ್ 15: ತಿರುವಣ್ಣಾಮಲೈನ ಚೆಂಗಂ ಪಟ್ಟಣದ ಪಕ್ಕಿರಿಪಾಳ್ಯಂ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಒಬ್ಬ ಮಹಿಳೆ ಸೇರಿದಂತೆ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಗುರುತು ಪತ್ತೆಯಾಗದ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತಿರುವಣ್ಣಾಮಲೈ ಅಕ್ಟೋಬರ್ 15: ತಿರುವಣ್ಣಾಮಲೈನ ಚೆಂಗಂ ಪಟ್ಟಣದ ಪಕ್ಕಿರಿಪಾಳ್ಯಂ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಒಬ್ಬ ಮಹಿಳೆ ಸೇರಿದಂತೆ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಗುರುತು ಪತ್ತೆಯಾಗದ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತಿರುವಣ್ಣಾಮಲೈನಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ಬೆಂಗಳೂರಿಗೆ ಹಿಂತಿರುಗುತ್ತಿದ್ದ ವೇಳೆ ಅವರ ಕಾರು ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತ ತೀವೃತೆಗೆ ಏಳು ಮಂದಿ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವೃತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಸಮೃದ್ಧಿ ಎಕ್ಸ್‌ಪ್ರೆಸ್‌ವೇ ನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ 12 ಮಂದಿ ಸಾವು…!!
ಮಹಾರಾಷ್ಚ್ರ ಅಕ್ಟೋಬರ್ 15: ಮಿನಿ ಬಸ್ ಮತ್ತು ಕಂಟೈನರ್ ಗೆ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 12 ಮಂದಿ ಸಾವನಪ್ಪಿದ್ದು, 23ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ಮುಂಜಾನೆ ನಡೆದಿದೆ.
ಮುಂಬೈನಿಂದ ಸುಮಾರು 350 ಕಿಮೀ ದೂರದಲ್ಲಿರುವ ಜಿಲ್ಲೆಯ ಎಕ್ಸ್‌ಪ್ರೆಸ್‌ವೇಯ ವೈಜಾಪುರ ಪ್ರದೇಶದಲ್ಲಿ 12.30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಮಿನಿಬಸ್ ಚಾಲಕ ನಿಯಂತ್ರಣ ಕಳೆದುಕೊಂಡು ಹಿಂಬದಿಯಿಂದ ಕಂಟೇನರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಹನ್ನೆರಡು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಐವರು ಪುರುಷರು, ಆರು ಮಹಿಳೆಯರು ಮತ್ತು ಓರ್ವ ಅಪ್ರಾಪ್ತ ಬಾಲಕಿ ಸೇರಿದ್ದಾರೆ. 23 ಮಂದಿ ಗಾಯಗೊಂಡಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟೆಂಪೋ ನಾಸಿಕ್‌ನಿಂದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಬಾಬಾ ತೀರ್ಥ ಯಾತ್ರಾಸ್ಥಳಕ್ಕೆ ಯಾತ್ರಾರ್ಥಿಗಳ ಗುಂಪನ್ನು ಹೊತ್ತೊಯ್ಯುತ್ತಿತ್ತು ಎಂದು ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಘಟನೆಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ ₹ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಅಪಘಾತದ ಬಗ್ಗೆ ತನಿಖೆಗೂ ಆದೇಶಿಸಿದ್ದಾರೆ.