ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿಯ ಏಳನೇ ಪಟ್ಟಿ ಬಿಡುಗಡೆ ; ಕರ್ನಾಟಕದ ಓರ್ವ ಅಭ್ಯರ್ಥಿಗೆ ಟಿಕೆಟ್ ಘೋಷಣೆ..!

Twitter
Facebook
LinkedIn
WhatsApp
ಬಿಜೆಪಿಯ ಏಳನೇ ಪಟ್ಟಿ ಬಿಡುಗಡೆ ; ಕರ್ನಾಟಕದ ಓರ್ವ ಅಭ್ಯರ್ಥಿಗೆ ಟಿಕೆಟ್ ಘೋಷಣೆ..!

ನವದೆಹಲಿ: ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾದಾಗಿನಿಂದ ಎಲ್ಲ ಪಕ್ಷಗಳು ರಾತ್ರಿ ಹಗಲೆನ್ನದೆ ಪ್ರಚಾರದಲ್ಲಿ ತೊಡಗಿಸಿಕೊಂಡಿದೆ ಇದರ ನಡುವೆ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗತೊಡಗಿದೆ ಇದರ ನಡುವೆ ಬಿಜೆಪಿ ತನ್ನ ಏಳನೇ ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಬಿಡುಗಡೆಗೊಳಿಸಿದೆ.
ಬಿಜೆಪಿ ಬುಧವಾರ ಇಬ್ಬರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ್ದು ಅದರಲ್ಲಿ ಕರ್ನಾಟಕದ ಓರ್ವ ಹಾಗೂ ಮಹಾರಾಷ್ಟ್ರದ ಓರ್ವ ಅಭ್ಯರ್ಥಿಯ ಹೆಸರನ್ನು ಬಹಿರಂಗಪಡಿಸಿದ್ದಾರೆ.

ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಚಿತ್ರದುರ್ಗದಿಂದ ಸ್ಪರ್ಧಿಸುವುದು ಪಕ್ಕಾ ಆಗಿದೆ. ಅಲ್ಲದೆ ಟಿಕೆಟ್ ಆಕಾಂಕ್ಷಿಗಳಾಗಿದ್ದ ಹಾಲಿ ಕೇಂದ್ರ ಸಚಿವ ನಾರಾಯಣಸ್ವಾಮಿ ಹಾಗೂ ಮಾಜಿ ಸಂಸದ ಜನಾರ್ದನ ಸ್ವಾಮಿಗೆ ಟಿಕೆಟ್ ಮಿಸ್ ಆಗಿದೆ.

ಬಿಜೆಪಿ ತನ್ನ ಏಳನೇ ಪಟ್ಟಿ ಪ್ರಕಟಗೊಳಿಸಿದ್ದು ಇದರಲ್ಲಿ ಗೋವಿಂದ ಕಾರಜೋಳ ಚಿತ್ರದುರ್ಗದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಬಿಎಸ್‌ ಯಡಿಯೂರಪ್ಪ ಆಪ್ತ ಮಾಜಿ ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕಂಗಟ್ಟಾಗಿ ಪರಿಣಿಸಿದ್ದ ಕ್ಷೇತ್ರಕ್ಕೆ ಕೊನೆಗೂ ಅಭ್ಯರ್ಥಿ ಆಯ್ಕೆ ಸಿಕ್ಕಿದೆ. ರಾಜ್ಯ ಮಾಜಿ ಸಚಿವ ಗೋವಿಂದ ಕಾರಜೋಳ ಅವರಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಿಸಲಾಗಿದೆ.

ರಾಜ್ಯದ 27 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಯ ಘೋಷಣೆ ಮಾಡಿದ್ದರು. ಆದರೆ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆಯಲ್ಲಿ ಪರ ವಿರೋಧ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಹೈಕಮಾಂಡ್ ಗೆ ತಲೆ ನೋವಾಗಿ ಪರಿಣಮಿಸಿತ್ತು. ಈ ಎಲ್ಲದರ ಮಧ್ಯೆ ಬುಧವಾರ ಸಂಜೆ ಹೈಕಮಾಂಡ್ ಗೋವಿಂದ ಕಾರಜೋಳ ಅವರಿಗೆ ಮಣೆ ಹಾಕಿದೆ. ಮಾರ್ಚ್ 28ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಕ್ಷೇತ್ರದಲ್ಲಿ ನಾರಾಯಣಸ್ವಾಮಿ ಟಿಕೆಟ್ ಆಕಾಂಕ್ಷಿಯಾಗಿದ್ದರೂ ಅವರಿಗೆ ಆಡಳಿತ ವಿರೋಧಿ ಅಲೆ ತೀವ್ರವಾಗಿತ್ತು. ಕ್ಷೇತ್ರದಲ್ಲಿ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಮಲ ಪಾಳಯ ಯೋಜಿಸಿತ್ತು. ಈ ಸಂಬಂಧ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ಸಂಪರ್ಕಿಸಿತ್ತು. ಆದರೆ ಅವರು ಚುನಾವಣಾ ರಾಜಕಾರಣಕ್ಕೆ ಬರಲು ನಿರಾಕರಿಸಿದ್ದರು. ಹೀಗಾಗಿ ಅಳೆದು ತೂಗಿ ಬಿಜೆಪಿ ಗೋವಿಂದ ಕಾರಜೋಳಗೆ ಟಿಕೆಟ್ ನೀಡಿದೆ.

ಬಾಗಲಕೋಟೆ ಜಿಲ್ಲೆಯವರಾದ ಕಾರಜೋಳ, ಪರಿಶಿಷ್ಟ ಜಾತಿಯ ಎಡಗೈ ಪಂಗಡಕ್ಕೆ ಸೇಇದವರು. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಸೋತಿದ್ದರು. ಬಿಎಸ್‌ ಯಡಿಯೂರಪ್ಪ ಸರ್ಕಾರದಲ್ಲಿ ಅವರು ಉಪಮುಖ್ಯಮಂತ್ರಿಯಾಗಿದ್ದರು. ಇತ್ತ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಂಸದ ಬಿಎನ್ ಚಂದ್ರಪ್ಪ ಅವರು ಕಣಕ್ಕೆ ಇಳಿದಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಡಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ