ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬರೋಬ್ಬರಿ 2 ಎಕ್ರೆ ಜಾಗ ಖರೀದಿಸಿದ ಶಾರುಖ್ ಖಾನ್ ಪುತ್ರಿ..! ಯಾಕೆ ಗೊತ್ತಾ?

Twitter
Facebook
LinkedIn
WhatsApp
ಬರೋಬ್ಬರಿ 2 ಎಕ್ರೆ ಜಾಗ ಖರೀದಿಸಿದ ಶಾರುಖ್ ಖಾನ್ ಪುತ್ರಿ..! ಯಾಕೆ ಗೊತ್ತಾ?

   ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್(Shah Rukh Khan) ಪುತ್ರಿ ಸುಹಾನಾ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಕಾಲಿಟ್ಟಿದ್ದೀರಾ? ಹಾಗಂತ ಮಾತನಾಡುತ್ತಿದೆ ಬಿಟೌನ್. ಮುಂಬೈ ಸಮೀಪದ ಅಲಿಭಾಗ್ ನಲ್ಲಿ ಸುಹಾನಾ ಬರೋಬ್ಬರಿ ಎರಡು ಎಕರೆ ಜಮೀನು ಖರೀದಿಸಿದ್ದಾರಂತೆ. ಹಾಗಾಗಿ ಸುಹಾನಾ ರಿಯಲ್ ಎಸ್ಟೇಟ್ ಉದ್ಯಮ ಆರಂಭಿಸಲಿದ್ದಾರೆ ಎನ್ನುವ ಅನುಮಾನ ಮೂಡಿದೆ.

  ಈ ಜಮೀನಿಗಾಗಿ ಅವರು 12.91 ಕೋಟಿ ರೂಪಾಯಿ ನೀಡಿದ್ದು, ಈ ಪ್ರಮಾಣದ ಹಣ ತೊಡಗಿಸಿದ್ದು ಅವರ ಹೊಸ ಯೋಜನೆಗಾಗಿ ಎಂದು ಹೇಳಲಾಗುತ್ತಿದೆ. ಈ ಹಿಂದೆ ಸುಹಾನಾ ಸಿನಿಮಾ ರಂಗದಲ್ಲೇ ಸಕ್ರೀಯರಾಗುತ್ತಾರೆ ಎಂದು ಹೇಳಲಾಗಿತ್ತು. ಅದರಂತೆ ಚಿತ್ರವೊಂದರಲ್ಲಿ ನಟಿಸಿದ್ದರು. ಈಗ ರಿಯಲ್ ಎಸ್ಟೇಟ್ ನಲ್ಲಿ ಭಾರೀ ಹೂಡಿಕೆ ಮಾಡಿದ್ದಾರೆ.

   ಸುಹಾನಾ ಖಾನ್ (Suhana Khan) ದುಬಾರಿ ಹುಡುಗಿ ಎಂದೇ ಫೇಮಸ್. ಸಾರ್ವಜನಿಕ ಸಮಾರಂಭಗಳಲ್ಲಿ ಅವರು ಕಾಣಿಸಿಕೊಂಡಾಗ ಅವರ ಧರಿಸುವ ಬಟ್ಟೆಗಳ ಬೆಲೆ ಬಗ್ಗೆ ಯಾವತ್ತಿಗೂ ಚರ್ಚೆ ಆಗುತ್ತದೆ.  ಇತ್ತೀಚೆಗೆ ಗೆಳತಿಯರೊಂದಿಗೆ ಕಾಣಿಸಿಕೊಂಡಿದ್ದ ಸುಹಾನಾ ಬರೋಬ್ಬರಿ 69,574 ರೂ. ಬೆಲೆಯ ಶೂ ಧರಿಸಿದ್ದರು ಎಂದು ಮಾಧ್ಯಮವೊಂದು ವರದಿ ಮಾಡಿತ್ತು. ಕೇವಲ ಸಿನಿಮಾ ನಟ-ನಟಿಯರು ಹೆಚ್ಚು ಬೆಲೆ ಬಾಳುವ ಶೂ ಮತ್ತು ಬಟ್ಟೆಗಳನ್ನು ಧರಿಸುತ್ತಾರೆ ಎಂಬ ಮಾತನ್ನು ಸುಹಾನ ಸುಳ್ಳು ಮಾಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ