ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶರಣ್ ಪಂಪ್ ವೆಲ್ ವಿರುದ್ಧ ಸುಮೊಟೊ ಕೇಸು ದಾಖಲು?

Twitter
Facebook
LinkedIn
WhatsApp
Sumoto file case against Sharan pump well?

ಉಡುಪಿ : ಉಡುಪಿ ಕಾಲೇಜ್ ಒಂದರಲ್ಲಿ ಹಿಂದೂ ವಿದ್ಯಾರ್ಥಿನಿಯರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ವಿಶ್ವ ಎಂದು ಪರಿಷತ್ ಹಾಗೂ ಬಜರಂಗದಳ ನೇತೃತ್ವದಲ್ಲಿ ವಿಶ್ವ ಹಿಂದೂ ಪರಿಷತ್ ಸದಸ್ಯ ಶರಣ್ ಪಂಪ್ ವೆಲ್ ಅವರು ಪ್ರಚೋದನಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಉಡುಪಿ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಸೊಮೊಟೋ ಕೇಸ್ ದಾಖಲಾಗಿದೆ.

ವಿಶ್ವ ಹಿಂದೂ ಪರಿಷತ್ ಸದಸ್ಯ ಶರಣ್ ಪಂಪ್ ವೆಲ್ ನಿನ್ನೆ ನಡೆದ ಪ್ರತಿಭಟನೆ ವೇಳೆಯಲ್ಲಿ ಹಿಂದೂ ಮಹಿಳೆಯರು ಶಸ್ತ್ರಾಸ್ತ್ರ ತಲ್ವಾರ್ ಹಿಡಿಯುವಂತೆ ಕರೆ ನೀಡಿದ್ದರು. ಎಸ್.ಐ ಪುನೀತ್ ಅವರು ಶರಣ್ ಪಂಪ್ ವೆಲ್ ಅವರ ಹೇಳಿಕೆ ಕುರಿತು ಉಡುಪಿ ಪೊಲೀಸ್ ಠಾಣೆಯಲ್ಲಿ ಸುಮೊಟೊ ಕೇಸ್ ದಾಖಲಾಗಿದೆ.

ಇದರ ಜೊತೆಗೆ ಪ್ರತಿಭಟನೆ ವೇಳೆ ಜೊತೆಗಿದ್ದ ಬಜರಂಗದಳ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ವಿರುದ್ಧ ಕೂಡ ಸುಮೊಟೊ ಪ್ರಕರಣ ದಾಖಲಾಗಿದೆ.

ಸೌಜನ್ಯಾ ಕೇಸ್ ಮರು ತನಿಖೆಯಾಗ್ಲಿ- ಧರ್ಮಸ್ಥಳದ ಗೌರವ, ಪ್ರತಿಷ್ಠೆಯನ್ನ ಹೇಗಾದ್ರೂ ಕಾಪಾಡ್ತೇವೆ: VHP

ಮಂಗಳೂರು: ಸೌಜನ್ಯಾ (Sowjanya Case) ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿಶ್ವ ಹಿಂದೂ ಪರಿಷತ್ ಧ್ವನಿ ಎತ್ತಿದ್ದು, ಸೌಜನ್ಯಾ ಸಾವಿಗೆ ನ್ಯಾಯ ಸಿಗಬೇಕು ಜೊತೆಗೆ ಧರ್ಮಸ್ಥಳ ಕ್ಷೇತ್ರದ ಗೌರವ, ಪ್ರತಿಷ್ಠೆಯನ್ನು ಯಾವ ಬೆಲೆ ಕೊಟ್ಟಾದರೂ ಕಾಪಾಡುತ್ತೆ ಎಂದಿದೆ.

ವಿಶ್ವ ಹಿಂದೂ ಪರಿಷತ್ ನ ಹಿರಿಯ ಮುಖಂಡ ಎಂ.ಬಿ.ಪುರಾಣಿಕ್ (MB Puranik) ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಸೌಜನ್ಯಾ ಪ್ರಕರಣ ಇತ್ಯರ್ಥ ಆಗದೇ ಇರೋದು ವ್ಯವಸ್ಥೆಗೆ ಕಪ್ಪುಚುಕ್ಕೆ. ಹೀಗಾಗಿ ಮರು ತನಿಖೆ ನಡೆಸಬೇಕೆನ್ನುವುದು ವಿಎಚ್‍ಪಿಯ ಆಗ್ರಹವಾಗಿದೆ. ಹಾಲಿ ನ್ಯಾಯಾಧೀಶರ ಮೂಲಕ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತೇವೆ ಎಂದರು.

ಯಾವ ರೀತಿ ತನಿಖೆಯಾಗಬೇಕೆಂಬುದು ವ್ಯವಸ್ಥೆಗೆ ಬಿಟ್ಟ ವಿಚಾರ. ಆದರೆ ನಿಜವಾದ ಆರೋಪಿ ಯಾರೆಂದು ಗೊತ್ತಾಗಬೇಕು. ಆರೋಪಿಗೆ ಶಿಕ್ಷೆಯಾಗುವವರೆಗೂ ಈ ಪ್ರಕರಣ ಅಂತ್ಯ ಆಗೋದಿಲ್ಲ. ಸೌಜನ್ಯಾಳಿಗೆ ನ್ಯಾಯ ಸಿಗಬೇಕೆಂದು ಕರಾವಳಿಯ ಎಲ್ಲಾ ದೇವಸ್ಥಾನ ಹಾಗೂ ದೈವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲಿದ್ದೇವೆ ಎಂದಿದ್ದಾರೆ. ಜೊತೆಗೆ ಯಾವುದೇ ಕ್ಷೇತ್ರಕ್ಕೆ, ಧರ್ಮಕ್ಕೆ ಅಪಚಾರ ಆದಾಗ ವಿಶ್ವ ಹಿಂದೂ ಪರಿಷತ್ ವಿರೋಧವನ್ನ ಸೂಚಿಸಿದೆ. ಅದೇ ರೀತಿ ಧರ್ಮಸ್ಥಳದಂತಹ ಪುಣ್ಯ ಕ್ಷೇತ್ರಕ್ಕೆ ಅಪಚಾರ ಅವಮಾನವಾಗುವುದನ್ನ ನಾವೂ ಸಹಿಸೋದಿಲ್ಲ ಎಂದು ಹೇಳಿದರು.

ಕ್ಷೇತ್ರಕ್ಕೆ ಮುತ್ತಿಗೆ ಹಾಕುವುದನ್ನು ನಾವು ಸಹಿಸುವುದಿಲ್ಲ. ಮಾತ್ರವಲ್ಲ ಸೌಜನ್ಯಾ ಪ್ರಕರಣ ಹಾಗೂ ಧರ್ಮಸ್ಥಳ (Dharmasthala) ಕ್ಷೇತ್ರಕ್ಕೂ ತಾಳೆ ಹಾಕುವುದನ್ನ ನಾವೂ ಸಹಿಸೋದಿಲ್ಲ. ಧರ್ಮಸ್ಥಳ ಕ್ಷೇತ್ರ ಇವತ್ತು ನಿನ್ನೆಯದಲ್ಲ, ಕ್ಷೇತ್ರಕ್ಕೆ ಅದರದ್ದೇ ಆದ ಇತಿಹಾಸ ಇದೆ ಎಂದ ಅವರು ಧರ್ಮಸ್ಥಳ ಕ್ಷೇತ್ರದ ಗೌರವವನ್ನ ಪ್ರತಿಷ್ಠೆಯನ್ನ ಯಾವ ಬೆಲೆ ಕೊಟ್ಟಾದರೂ ವಿಶ್ವ ಹಿಂದೂ ಪರಿಷತ್ ಕಾಪಾಡುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ