ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Shivamogga :ಶಿವಮೊಗ್ಗದಲ್ಲಿ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಕಲ್ಲು ತೂರಾಟ: 144 ಸೆಕ್ಷನ್‌ ಜಾರಿ

Twitter
Facebook
LinkedIn
WhatsApp
Shivamogga :ಶಿವಮೊಗ್ಗದಲ್ಲಿ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಕಲ್ಲು ತೂರಾಟ: 144 ಸೆಕ್ಷನ್‌ ಜಾರಿ

Shivamogga :ಶಿವಮೊಗ್ಗದಲ್ಲಿ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಕಲ್ಲು ತೂರಾಟ: 144 ಸೆಕ್ಷನ್‌ ಜಾರಿ: ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ (miscreants pelting stones) ನಡೆಸಿದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಶಾಂತಿನಗರದ (Shantinagar) ರಾಗಿಗುಡ್ಡದ (Ragigudda) ಬಳಿ ನಡೆದಿದೆ. ಈದ್ ಮಿಲಾದ್ ಮೆರವಣಿಗೆ (Eid Milad procession) ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಘರ್ಷಣೆ ಶುರುವಾಗಿದೆ. ಕಿಡಿಗೇಡಿಗಳು ಹತ್ತಿರದ ಮನೆಗಳ ಕಿಟಕಿಗಳು, ವಾಹನಗಳ ಮೇಲೆಲ್ಲ ಕಲ್ಲು ತೂರಿದ್ದಾರೆ. ಅಲ್ಲದೇ ಸ್ಥಳದಲ್ಲಿ ನಿಯೋಜಿತರಾಗಿದ್ದ ಪೊಲೀಸರು, ಮಾಧ್ಯಮದವರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.  

ಈ ವೇಳೆ ಶಿವಮೊಗ್ಗದ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಸ್ಥಳಕ್ಕೆ ರ್ಯಾಪಿಡ್​  ಆ್ಯಕ್ಷನ್​ ಫೋರ್ಸ್ ಭೇಟಿ ನೀಡಿ ಗುಂಪನ್ನು ಚದುರಿಸಿ ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಎಸ್​ಪಿ ಜಿ.ಕೆ ಮಿಥುನ್ ಕುಮಾರ್​ ಭೇಟಿ ನೀಡಿ ಪರಿಶೀಲನೆ  ನಡೆಸಿದ್ದಾರೆ.

ಅರೆನಗ್ನವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಆರ್‌ಟಿಐ ಕಾರ್ಯಕರ್ತನ ಶವ ಪತ್ತೆ

 

ಬೆಂಗಳೂರು: ಅರೆನಗ್ನವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಆರ್‌ಟಿಐ ಕಾರ್ಯಕರ್ತನೊಬ್ಬನ (RTI Activist) ಶವ ಆನೆಕಲ್‍ನ (Anekal) ಜಿಗಣಿ ಸಮೀಪದ ಮಾದಪಟ್ಟಣದಲ್ಲಿ ಪತ್ತೆಯಾಗಿದೆ. ಆರ್‌ಟಿಐ ಕಾರ್ಯಕರ್ತನ ಧಿಡೀರ್ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮೃತ ಕಾರ್ಯಕರ್ತನನ್ನು ಪ್ರದೀಪ್ (38) ಎಂದು ಗುರುತಿಸಲಾಗಿದೆ. ಕಾರಿನ ಶೆಡ್‍ನಲ್ಲಿ ಆತನ ದೇಹ ಅರೆನಗ್ನವಾಗಿ ಪತ್ತೆಯಾಗಿದೆ. ಶೆಡ್‍ನಲ್ಲಿದ್ದ ಕಬ್ಬಿಣದ ಪೈಪ್ ಒಂದಕ್ಕೆ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಶವ ಸಿಕ್ಕಿದೆ.

ಶವ ಚೇರ್ ಮೇಲೆ ಇಳಿ ಬಿದ್ದಿದ್ದು, ಹಲವು ಅನುಮಾನಗಳಿಗೆ ಸಹ ಕಾರಣವಾಗಿದೆ. ಸ್ಥಳಕ್ಕೆ ಜಿಗಣಿ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಯಾಂಡಲ್‌ವುಡ್‌ ನಟ ನಾಗಭೂಷಣ್‌ ಸ್ಟೇಷನ್‌ ಬೇಲ್‌ ಮೇಲೆ ಬಿಡುಗಡೆ

ಬೆಂಗಳೂರು (ಅ.01): ಸ್ಯಾಂಡಲ್‌ವುಡ್‌ ನಟ ನಾಗಭೂಷಣ್‌ ಶನಿವಾರ ರಾತ್ರಿ ಕಿಯಾ ಕಾರಿನಲ್ಲಿ ವೇಗವಾಗಿ ಬಂದು ದಂಪತಿಗೆ ಗುದ್ದಿದ್ದು, ಪತ್ನಿ ಮೃತಪಟ್ಟರೆ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ರಾತ್ರಿಯಿಂದ ಪೊಲೀಸರ ಬಂಧನದಲ್ಲಿ ನಟ ನಾಗಭೂಷಣ್‌ನನ್ನು ಸ್ಟೇಷನ್‌ ಬೇಲ್‌ ಆಧಾರದಲ್ಲಿ ಬಂಧನದಿಂದ ಬಿಡುಗಡೆ ಮಾಡಲಾಗಿದೆ.

ಶನಿವಾರ ರಾತ್ರಿ ರಾಜರಾಜೇಶ್ವರಿ ನಗರದ ಸ್ನೇಹಿತನ ಮನೆಯಿಂದ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿತ್ತು. ಇನ್ನು ಘಟನೆ ನಡೆದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದರೂ, ಅಪಘಾತದ ಮಾಡಿದ ಕಾರಣದಿಂದ ನಟನನ್ನು ಕುಮಾರಸ್ವಾಮಿ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದರು. ಇದಾದ ನಂತರ, ಮೃತಳ ಮಗ ನೀಡಿದ ದೂರಿನ ಆಧಾರದಲ್ಲಿ ಐಪಿಸಿ ಸೆಕ್ಷನ್‌ 279 ಅತಿ ವೇಗದ ಚಾಲನೆ, ಐಪಿಸಿ ಸೆಕ್ಷನ್‌ 337 ನಿರ್ಲಕ್ಷ್ಯತನದ ಚಾಲನೆ ಹಾಗೂ ಸೆಕ್ಷನ್‌ 304ಎ ನಿರ್ಲಕ್ಷ್ಯ ಚಾಲನೆಯಿಂದ ಸಾವು ಕುರಿತ ಪ್ರಕರಣಗಳ ಅಡಿಯಲ್ಲಿ ನಟ ನಾಗಭೂಷಣ್‌ ವಿರುದ್ಧ ದೂರು ದಾಖಲಿಸಲಾಗಿತ್ತು. ರಾತ್ರಿ ಪೂರ್ತಿ ಜೈಲಿನಲ್ಲಿ ಕಳೆದ ನಟ ನಾಗಭೂಷಣ್‌ ಬೆಳಗ್ಗೆ ಸ್ಟೇಷನ್‌ ಬೇಲ್‌ ಆಧಾರದಲ್ಲಿ ಬಂಧನದಿಂದ ಮುಕ್ತಿ ಪಡೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ