ಶೋಭಾ ಕರಂದ್ಲಾಜೆ ಸ್ಪೋಟಕ ಹೇಳಿಕೆ; ಬೆನ್ನಲ್ಲೇ ಕ್ಷಮೆಯಾಚನೆ!!
ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯ್ಲಲಿ ನಡೆದ ಬಾಂಬ್ ಸ್ಫೋಟಕ್ಕೂ ತಮಿಳುನಾಡಿಗೂ ಸಂಬಂಧವಿದೆ ಎಂದು ಹೇಳಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಮ್ಮ ಹೇಳಿಕೆ ವಿವಾದಾತ್ಮಕ ಸ್ವರೂಪ ಪಡೆಯುತ್ತಿದ್ದಂತೆ ಕ್ಷಮೆ ಯಾಚಿಸಿದ್ದಾರೆ. ಮಾತ್ರವಲ್ಲದೆ ನನ್ನ ಮಾತುಗಳನ್ನು ಹಿಂಪಡೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ನಡೆದ ಪ್ರತಿಭಟನೆಯೊಂದರಲ್ಲಿ ಮಾತನಾಡುವ ವೇಳೆ ಅವರು ನಮ್ಮ ಬೆಂಗಳೂರಿನ ಕೆಫೆಗೆ ತಮಿಳುನಾಡಿನ ಯಾರು ಯಾರೋ ಬಂದು ಬಾಂಬ್ ಹಾಕುತ್ತಾರ ಎಂದು ಹೇಳಿಕೆ ನೀಡಿದ್ದರು.ಒಬ್ಬ ವ್ಯಕ್ತಿ ತಮಿಳುನಾಡಿನಿಂದ ಬಂದು ಕೆಫೆಯಲ್ಲಿ ಬಾಂಬ್ ಇಟ್ಟಿದ್ದಾನೆ. ಮತ್ತೊಬ್ಬ ದೆಹಲಿಯಿಂದ ಬಂದು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗುತ್ತಾನೆ. ಇನ್ನೊಬ್ಬ ಕೇರಳದಿಂದ ಬಂದು ವಿದ್ಯಾರ್ಥಿನಿಯರ ಮೇಲೆ ಆಸಿಡ್ ಎರಚುತ್ತಾನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಅವರ ಈ ಮಾತು ತಮಿಳುನಾಡು ಮುಖ್ಯಮಂತ್ರಿ ಸ್ಟಾಲನ್ ಸೇರಿದಂತೆ ಹಲವರ ಕಣ್ಣು ಕೆಂಪಗಾಗಿಸಿತ್ತು. ಸಾಮಾಜಿಕ ಜಾಲತಾಣಗಳಲ್ಲೂ ತೀವ್ರ ವಿರೋಧ ವ್ಯಕ್ತವಾಗಿತ್ತು. ದ್ವೇಷ ಪೂರಿತ ಭಾಷಣ ಮಾಡಿರುವ ಕೇಂದ್ರ ಸಚಿವೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಟಾಲಿನ್ ಅವರು ಚುನಾವಣಾ ಆಯೋಗವನ್ನು ಆಗ್ರಹಿಸಿದ್ದರು. ಕೆಲ ನೆಟ್ಟಿಗರುಪ್ರಧಾನಿ ಮೋದಿ ತಮ್ಮ ಪರಿವಾರದ ಪರವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದರೆ, ಮತ್ತೆ ಕೆಲವರು ಇನ್ನು ತಮಿಳುನಾಡಿನಲ್ಲಿ ಬಿಜೆಪಿ ಕತೆ ಮುಗಿದಂತಯೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಪ್ರತಿಭಟನೆ ವೇಳೆ ತಾವು ನೀಡಿದ್ದ ಹೇಳಿಕೆ ವಿವಾದದ ಸ್ವರೂಪವನ್ನು ಪಡೆಯುತ್ತಿದ್ದಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಗಳನ್ನು ಮಾಡಿ ತಮಿಳುನಾಡಿನ ನಾಗರಿಕರಲ್ಲಿ ಕ್ಷಮೆ ಕೋರಿದ್ದಾರೆ. ನನ್ನ ಹೇಳಿಕೆಯಿಂದ ನನ್ನ ಹೃದಯದ ಆಳದಿಂದ ಕ್ಷಮೆ ಕೋರುತ್ತೇನೆ. ನನ್ನ ಮಾತುಗಳನ್ನು ಹಿಂಪಡೆಯುತ್ತೇನೆ ಎಂದಿದ್ದಾರೆ.
ಎಕ್ಸ್ ನಲ್ಲಿ ಕ್ಷಮೆಯಾಚನೆ
“ನನ್ನ ತಮಿಳು ಸಹೋದರ ಸಹೋದರಿಯರಿಗೆ, ನಾನು ಘಟನೆ ಬಗ್ಗೆ ಬೆಳಕ ಚೆಲ್ಲಲು ಮಾತನಾಡಿದೆಮೇ ಹೊರತು ಕತ್ತಲನ್ನು ಬಿತ್ತರಿಸಲು ಅಲ್ಲ. ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದವರನ್ನು ಉದ್ದೇಶಿಸಿ ನಾನು ಹೇಳಿದ್ದೆ. ಆದರೂ ನನ್ನ ಟೀಕೆಗಳು ಕೆಲವರಿಗೆ ನೋವು ತಂದಿರುವುದನ್ನು ನಾನು ನೋಡುತ್ತೇನೆ. ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ.” ಎಂದು ಮತ್ತೊಂದು ಪೋಸ್ಚ್ ನಲ್ಲಿ ತಿಳಿಸಿದ್ದಾರೆ. ತಮಿಳು ನಾಗರಿಕರು ಮತ್ತು ಕರ್ನಾಟಕದ ನಡುವೆ ಸೌಹಾರ್ದತೆಗೆ ಬಂದಂಧಿಸಿ ಸುದೀರ್ಘ ಇತಿಹಾಸವಿದೆ. ಅವರು ಕರ್ನಾಟಕದ ಸಾಮಾಜಿಕ ರಚನೆಯ ಅವಿಭಾಜ್ಯ ಅಂಗವಾಗಿದ್ದು ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ನಾವು ನಿಕಟ ಸಾಂಸ್ಕೃತಿಕ ಬಂಧಗಳನ್ನು ಹೊಂದಿದ್ದೇವೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸ್ಚಾಲಿನ್ ತುಷ್ಟೀಕರಣ ರಾಜಕಾರಣ ಆರೋಪ
ಇದಕ್ಕೂ ಮೊದಲಿನ ಪೋಸ್ಟ್ ಗಳಲ್ಲಿ ಅವರುವೇರವಾಗಿ ತಮಿಳುನಾಡು ಸಿಎಂ ಸ್ಟಾಲಿನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.
“ಸ್ಟಾಲಿನ್ ಅವರೇ, ನಿಮ್ಮ ಆಡಳಿತದಲ್ಲಿ ತಮಿಳುನಾಡಿನಲ್ಲಿ ಏನಾಗುತ್ತಿದೆ? ನಿಮ್ಮ ತುಷ್ಟೀಕರಣ ರಾಜಕಾರಣದಿಂದಾಗಿ ಹಗಲು ರಾತ್ರಿ ಎನ್ನದೆ ಹಿಂದೂಗಳು ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿಗಳಾಗುತ್ತಿವೆ. ಐಸಿಸ್ ಮಾದರಿಯ ಭಯೋತ್ಪಾದಕ ಸಂಘಟಗಳು ಚಿಗುರಿಕೊಳ್ಳುತ್ತಿದ್ದು, ನೀವು ಕಣ್ಣು ಮುಚ್ಚಿ ಕುಳಿತಿರುವುದಕ್ಕೆ ಆಗಾಗ್ಗೇ ಬಾಂಬ್ ಸ್ಫೋಟಗಳು ನಡೆಯುತ್ತಿರುತ್ತವೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇರಿಸಿದಾತ ಬಾಂಬರ್ ನಿಮ್ಮ ಮೂಗಿನ ಕೆಳಗೆ ಕೃಷ್ಣಗಿರಿ ಕಾಡುಗಳಲ್ಲಿ ತರಬೇತಿ ಪಡೆದಿದ್ದ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂದು ತಿಳಿಸಿದ್ದರು.