ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತೆಲಂಗಾಣ ಚುನಾವಣೆ ಸಮೀಕ್ಷೆಯಲ್ಲಿ ಕೆಸಿಆರ್ ಗೆ ಶಾಕ್ ; ಈ ಭಾರಿ ಕಾಂಗ್ರೆಸ್-ಬಿಜೆಪಿ ನಡುವೆ ಪೈಪೋಟಿ...!

Twitter
Facebook
LinkedIn
WhatsApp
ತೆಲಂಗಾಣ ಚುನಾವಣೆ ಸಮೀಕ್ಷೆಯಲ್ಲಿ ಕೆಸಿಆರ್ ಗೆ ಶಾಕ್ ; ಈ ಭಾರಿ ಕಾಂಗ್ರೆಸ್-ಬಿಜೆಪಿ ನಡುವೆ ಪೈಪೋಟಿ...!

ಕುತೂಹಲ ಮೂಡಿಸಿರುವ ತೆಲಂಗಾಣ ವಿಧಾನಸಭೆ ಚುನಾವಣೆ ದಿನಾಂಕಗಳು ಪ್ರಕಟಗೊಂಡಿವೆ. 119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ನವೆಂಬರ್ 30, 2023 ರಂದು ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಸೋಮವಾರ ತಿಳಿಸಿದೆ.
ತೆಲಂಗಾಣದಲ್ಲಿರುವ ಮತದಾರರ ಸಂಖ್ಯೆ 3 ಕೋಟಿಗೂ ಅಧಿಕವಾಗಿದೆ. ರಾಜ್ಯದಲ್ಲಿ 17 ಲಕ್ಷಕ್ಕೂ ಅಧಿಕ ಮತದಾರರು ಹೊಸದಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಾರೆ ಎಂದು ಆಯೋಗ ಹೇಳಿದೆ.

ತೆಲಂಗಾಣ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ತೆಲಂಗಾಣ ವಿಧಾನಸಭಾ ಚುನಾವಣೆಯ ಅಧಿಸೂಚನೆಯನ್ನು ನವೆಂಬರ್ 3 ರಂದು ಪ್ರಕಟಿಸಲಾಗುವುದು. ಆದರೆ, ಅಭ್ಯರ್ಥಿಯ ನಾಮಪತ್ರ ಸಲ್ಲಿಸಲು ನವೆಂಬರ್ 10 ಕೊನೆಯ ದಿನಾಂಕವಾಗಿರುತ್ತದೆ. ಮೇಲಾಗಿ, ಉಮೇದುವಾರಿಕೆಯನ್ನು ಹಿಂಪಡೆಯಲು ನವೆಂಬರ್ 15 ಕೊನೆಯ ದಿನಾಂಕವಾಗಿರುತ್ತದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ಮಿಜೋರಾಂ ಮತ್ತು ತೆಲಂಗಾಣದಲ್ಲಿ ನವೆಂಬರ್ 7 ರಿಂದ ನವೆಂಬರ್ 30 ರವರೆಗೆ ವಿಧಾನಸಭಾ ಚುನಾವಣೆಗಳು ನಡೆಯಲಿವೆ ಎಂದು ಚುನಾವಣಾ ಆಯೋಗವು ತಿಳಿಸಿದೆ.

ತೆಲಂಗಾಣದಲ್ಲಿ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್), ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ನಡುವೆ ಸ್ಪರ್ಧೆ ಇದೆ. 2018 ರಲ್ಲಿ ಬಿಆರ್‌ಎಸ್‌ 88 ಸ್ಥಾನಗಳನ್ನು ಗೆದ್ದಿತ್ತು. ಈ ಮೂಲಕ ಬಿಆರ್‌ಎಸ್‌ ಶೇ 47.4 ರಷ್ಟು ಮತಗಳನ್ನು ಗಳಿಸಿತ್ತು. ಕಾಂಗ್ರೆಸ್ ಶೇ 28.7 ರಷ್ಟು ಮತಗಳಿಸುವ ಮೂಲಕ 19 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಈಗ ತೆಲಂಗಾಣದ ಪರಿಸ್ಥಿತಿ ಬದಲಾಗಿರುವ ಮುನ್ಸೂಚನೆಯನ್ನು ಸಮೀಕ್ಷೆಗಳು ನೀಡಿವೆ. ಕರ್ನಾಟಕದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭೂತಪೂರ್ವ ಯಶಸ್ಸು ಗಳಿಸಿದ ನಂತರ ತೆಲಂಗಾಣದಲ್ಲಿಯೂ ಬದಲಾವಣೆ ಪರ್ವ ಆರಂಭವಾಗಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ರೇವಂತ್‌ ರೆಡ್ಡಿ ನೇತೃತ್ವದ ಕಾಂಗ್ರೆಸ್‌ ಪಕ್ಷಕ್ಕೆ ಬಿಆರ್‌ಎಸ್‌ನಿಂದ ಹಲವು ಪ್ರಮುಖ ನಾಯಕರು ಸೇರ್ಪಡೆಗೊಂಡಿದ್ದಾರೆ. ಕರ್ನಾಟಕದಂತೆಯೇ ಕಾಂಗ್ರೆಸ್‌ ಪಕ್ಷವು ತೆಲಂಗಾಣದಲ್ಲಿಯೂ ಗ್ಯಾರಂಟಿಗಳನ್ನು ಘೋಷಿಸಿದೆ. ಮಹಿಳೆಯರು, ಯುವಕರನ್ನು ಗುರಿಯಾಗಿಸಿ ಹಲವು ಯೋಜನೆಗಳ ಭರವಸೆಯನ್ನು ಕಾಂಗ್ರೆಸ್‌ ನೀಡಿದೆ. ಹೊಸ ರಾಜ್ಯದ ಉದಯಕ್ಕೆ ಕಾರಣವಾಗಿರುವ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಪರ ಅನುಕಂಪದ ಅಲೆಯೂ ತೆಲಂಗಾಣದಲ್ಲಿ ಕಂಡುಬರುತ್ತಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಸತತ ಎರಡು ಅವಧಿಗೆ ಮುಖ್ಯಮಂತ್ರಿಯಾಗಿರುವ ಚಂದ್ರಶೇಖರ್‌ ರಾವ್‌ ವಿರುದ್ಧ ಆಡಳಿತ ವಿರೋಧಿ ಅಲೆ ಇರುವುದು ಕಂಡುಬಂದಿದೆ. ಸ್ವಜನ ಪಕ್ಷಪಾತ, ಭ್ರಷ್ಟಾಚಾರದ ಆರೋಪ, ಕುಟುಂಬ ರಾಜಕಾರಣದ ಆರೋಪಗಳನ್ನು ಕೆಸಿಆರ್‌ ಎದುರಿಸುತ್ತಿದ್ದಾರೆ.
ಈಗಾಗಲೇ ಬಿಆರ್‌ಎಸ್‌ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಉಳಿದ ಪಕ್ಷಗಳು ಇನ್ನಷ್ಟೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಬೇಕಿದೆ. ಸ್ಮಾಲ್‌ಬಾಕ್ಸ್‌ ಇಂಡಿಯಾ ಸಮೀಕ್ಷೆ ಹೇಳುವುದೇನು? ಕರ್ನಾಟಕ ಚುನಾವಣೆ ಕುರಿತು ನಿಖರ ಸಮೀಕ್ಷೆ ನೀಡಿದ್ದ ಸ್ಮಾಲ್‌ಬಾಕ್ಸ್‌ ಇಂಡಿಯಾ ಸಂಸ್ಥೆಯು ತೆಲಂಗಾಣ ವಿಧಾನಸಭೆ ಚುನಾವಣೆಯ ಸಮೀಕ್ಷೆಯನ್ನೂ ನೀಡಿದೆ. ತೆಲಂಗಾಣದಲ್ಲಿ ಒಟ್ಟು 119 ಕ್ಷೇತ್ರಗಳಿವೆ. ಅದರಲ್ಲಿ ಕಾಂಗ್ರೆಸ್‌ಗೆ 61 ರಿಂದ 63 ಸ್ಥಾನಗಳು ಬರಲಿವೆ ಎಂದು ಸಮೀಕ್ಷೆ ಹೇಳಿದೆ. ಒಂದು ವೇಳೆ, ಇದು ನಿಜವಾದರೆ, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ
ಆಡಳಿತರೂಢ ಬಿಆರ್‌ಎಸ್‌ ಪಕ್ಷಕ್ಕೆ 38 ರಿಂದ 42 ಸ್ಥಾನಗಳು ದೊರೆಯಲಿವೆ. ಬಿಜೆಪಿ ಕೇವಲ 2ರಿಂದ 4 ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ. ಅಸಾದುದ್ದೀನ್‌ ಓವೈಸಿ ನೇತೃತ್ವದ ಎಐಎಂಐಎಂ 5 ರಿಂದ 6 ಸ್ಥಾನಗಳಲ್ಲಿ ಜಯಗಳಿಸಲಿದೆ. 2 ರಿಂದ 3 ಸ್ಥಾನಗಳನ್ನು ಪಕ್ಷೇತರರು ಗೆಲ್ಲಲಿದ್ದಾರೆ ಎಂದು ಸ್ಮಾಲ್‌ಬಾಕ್ಸ್‌ ಇಂಡಿಯಾ ಸಮೀಕ್ಷೆ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ