ಗುರುವಾರ, ಮೇ 9, 2024
SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?-ಐಪಿಎಲ್ ನಲ್ಲಿ ಮಿಂಚುತ್ತಿದೆ ಹೆಡ್ ಮತ್ತು ಅಭಿಷೇಕ್ ಜೋಡಿ ; 58 ಎಸೆತಗಳಲ್ಲಿ 167 ರನ್ ಸಿಡಿಸಿ ಜಯಗಳಿಸಿದರ ಹೈದರಾಬಾದ್.!-ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Shreyanka Patil : ಫೈನಲ್ ಪಂದ್ಯದಲ್ಲಿ 4 ವಿಕೆಟ್ ಕಬಳಿಸಿ ಸ್ಪಿನ್ ಮೋಡಿ ಮಾಡಿದ 21 ವರ್ಷದ ಕನ್ನಡತಿ ಶ್ರೇಯಾಂಕ ಪಾಟೀಲ್.!

Twitter
Facebook
LinkedIn
WhatsApp
Shreyanka Patil : ಫೈನಲ್ ಪಂದ್ಯದಲ್ಲಿ 4 ವಿಕೆಟ್ ಕಬಳಿಸಿ ಸ್ಪಿನ್ ಮೋಡಿ ಮಾಡಿದ 21 ವರ್ಷದ ಕನ್ನಡತಿ ಶ್ರೇಯಾಂಕ ಪಾಟೀಲ್.!

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ರಾಯಲ್ಲಾಗಿಯೇ ಟ್ರೋಫಿ ಗೆದ್ದುಕೊಂಡಿದೆ. ಹೀಗೆ ಚೊಚ್ಚಲ ಬಾರಿ ಕಿರೀಟ ಮುಡಿಗೇರಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಕನ್ನಡತಿ ಶ್ರೇಯಾಂಕ ಪಾಟೀಲ್ (Shreyanka Patil) ಎಂಬುದು ವಿಶೇಷ. ಆದರೆ ಇದೇ ಶ್ರೇಯಾಂಕಾ ಆರಂಭಿಕ ಪಂದ್ಯಗಳಲ್ಲಿ ಮಿಂಚಿರಲಿಲ್ಲ.

 

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಯುಪಿ ವಾರಿಯರ್ಸ್ ವಿರುದ್ಧ ಪಂದ್ಯದಲ್ಲಿ ಶ್ರೇಯಾಂಕಾ 3 ಓವರ್​ಗಳಲ್ಲಿ 32 ರನ್ ನೀಡಿದ್ದರು. ಇನ್ನು ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಒಂದೇ ಓವರ್​ನಲ್ಲಿ 13 ರನ್ ಬಿಟ್ಟುಕೊಟ್ಟಿದ್ದರು. ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 3 ಓವರ್​ಗಳಲ್ಲಿ ನೀಡಿದ್ದು ಬರೋಬ್ಬರಿ 40 ರನ್​ಗಳು. ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 2 ಓವರ್​ಗಳಲ್ಲಿ 15 ರನ್ ನೀಡಿ ಒಂದು ವಿಕೆಟ್ ಮಾತ್ರ ಪಡೆದಿದ್ದರು.

 
shreyanka patil

ಹೀಗಾಗಿಯೇ ಕೆಲ ಪಂದ್ಯಗಳಿಂದ ಶ್ರೇಯಾಂಕಾ ಪಾಟೀಲ್ ಅವರನ್ನು ಕೈ ಬಿಡಲಾಗಿತ್ತು. ಆದರೆ ಮತ್ತೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಪಡೆದ ಬಳಿಕ ಕನ್ನಡತಿ ಕಮಾಲ್ ಮಾಡಲಾರಂಭಿಸಿದಳು. ಅದರಲ್ಲೂ ಮುಂಬೈ ಇಂಡಿಯನ್ಸ್ ವಿರುದ್ಧ ಎಲಿಮಿನೇಟರ್ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ಶ್ರೇಯಾಂಕಾ, ಕೇವಲ 16 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು.

 

ಹಾಗೆಯೇ ಫೈನಲ್ ಪಂದ್ಯದಲ್ಲಿ ಸ್ಪಿನ್ ಮೋಡಿ ಮಾಡಿದ ಶ್ರೇಯಾಂಕಾ ಪಾಟೀಲ್ 3.3 ಓವರ್​ಗಳಲ್ಲಿ ಕೇವಲ 12 ರನ್ ನೀಡಿ 4 ವಿಕೆಟ್ ಉರುಳಿಸಿದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎಡೆಮುರಿ ಕಟ್ಟುವಲ್ಲಿ ಪ್ರಮುಖ ಪಾತ್ರವಹಿಸಿದರು.

ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲಾರ್ಧದಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಕನ್ನಡತಿ ದ್ವಿತೀಯಾರ್ಧದಲ್ಲಿ ಕಮಾಲ್ ಮಾಡಿದ್ದರು. ಈ ಕಮಾಲ್​ನೊಂದಿಗೆ 21 ವರ್ಷದ ಶ್ರೇಯಾಂಕಾ ಪಾಟೀಲ್ ಒಟ್ಟು 13 ವಿಕೆಟ್ ಉರುಳಿಸಿ ಪರ್ಪಲ್ ಕ್ಯಾಪ್ ವಿನ್ನರ್ ಆಗಿದ್ದಾರೆ. ಈ ಮೂಲಕ ಆರ್​ಸಿಬಿ ತಂಡಕ್ಕೆ ಚೊಚ್ಚಲ ಟ್ರೋಫಿ ಗೆದ್ದುಕೊಡುವಲ್ಲಿ ಕನ್ನಡತಿ ಪ್ರಮುಖ ಪಾತ್ರವಹಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ