ಶುಭ್ಮನ್ ಗಿಲ್ ಆಸ್ಪತ್ರೆಗೆ ದಾಖಲು: ಭಾರತ-ಪಾಕಿಸ್ತಾನ ಪಂದ್ಯದಲ್ಲೂ ಔಟ್..!
ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಟೀಮ್ ಇಂಡಿಯಾ ಸ್ಟಾರ್ ಓಪನರ್ ಶುಭ್ಮನ್ ಗಿಲ್ (Shubman Gill) ಅವರನ್ನು ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಿಲ್ ಪ್ರಸ್ತುತ ಕಾವೇರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ದೆಹಲಿಯಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ಹೊರಗುಳಿಯಲಿರುವ ಗಿಲ್ ಅವರು ಶನಿವಾರ ಅಹಮದಾಬಾದ್‌ನಲ್ಲಿ ನಡೆಯುವ ಹೈ-ವೋಲ್ಟೇಜ್ ಭಾರತ-ಪಾಕಿಸ್ತಾನ ಪಂದ್ಯವನ್ನು ಕೂಡ ಕಳೆದುಕೊಳ್ಳುವ ಸಂಭವವಿದೆ. ಇದು ಟೀಮ್ ಇಂಡಿಯಾಕ್ಕೆ ದೊಡ್ಡ ಹೊಡೆತವಾಗಿದೆ.
ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಭಾರತದ ಆರಂಭಿಕ ವಿಶ್ವಕಪ್ ಪಂದ್ಯವನ್ನು ಕಳೆದುಕೊಂಡಿದ್ದ ಗಿಲ್ ಅವರ ಪ್ಲೇಟ್‌ಲೆಟ್ ಕೌಂಟ್ ಕಡಿಮೆಯಾಗಿದೆ, ಆದ್ದರಿಂದ ಅವರು ತಂಡದೊಂದಿಗೆ ದೆಹಲಿಗೆ ಕೂಡ ತೆರಳಲಿಲ್ಲ. ಪ್ಲೇಟ್‌ಲೆಟ್ ಎಣಿಕೆ ಕಡಿಮೆ ಇರುವಾಗ ಪ್ರಯಾಣ ಒಳ್ಳೆಯದಲ್ಲ ಎಂದು ವೈದ್ಯರು ಸಲಹೆ ನೀಡಿದ್ದಾರೆ.
“ಟೀಂ ಇಂಡಿಯಾ ಬ್ಯಾಟರ್ ಗಿಲ್ 9ನೇ ಅಕ್ಟೋಬರ್ 2023 ರಂದು ತಂಡದೊಂದಿಗೆ ದೆಹಲಿಗೆ ಪ್ರಯಾಣಿಸುವುದಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯವನ್ನು ತಪ್ಪಿಸಿಕೊಂಡ ಬಳಿಕ ಗಿಲ್ ಮುಂದಿನ ಪಂದ್ಯವನ್ನು ಕೂಡ ಕಳೆದುಕೊಳ್ಳಲಿದ್ದಾರೆ. ಗಿಲ್ ಅವರು ಚೆನ್ನೈನಲ್ಲೇ ಉಳಿಯಲಿದ್ದಾರೆ. ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿರುತ್ತಾರೆ,” ಎಂದು ಬಿಸಿಸಿಐ ಸೋಮವಾರ ಹೇಳಿಕೆಯಲ್ಲಿ ತಿಳಿಸಿತ್ತು.
ಇನ್ನು ಶುಭ್ಮನ್ ಗಿಲ್ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಶಾನ್ ಕಿಶನ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ, ಅವರು ಮೊದಲ ಎಸೆತದಲ್ಲೇ ಔಟ್ ಆಗಿದ್ದರು. ಹೀಗಿದ್ದರೂ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲೂ ಎಡಗೈ ದಾಂಡಿಗ ಕಿಶನ್ ಅವರೇ ಕಣಕ್ಕಿಳಿಯಲಿದ್ದಾರೆ.
ಭಾರತ-ಅಫ್ಘಾನ್;
ಅಕ್ಟೋಬರ್ 11 ರಂದು ಭಾರತ ತಂಡ ದೆಹಲಿರುವ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಅಫ್ಘಾನಿಸ್ತಾನ ವಿರುದ್ಧ ಸೆಣೆಸಾಟ ನಡೆಸಲಿದೆ. ಇದಕ್ಕಾಗಿ ಇದೀಗ ರೋಹಿತ್ ಶರ್ಮಾ ಪಡೆ ಡೆಲ್ಲಿಗೆ ತಲುಪಿದ್ದಾರೆ. ವಿಶೇಷ ಎಂದರೆ ಇಲ್ಲಿ ಟೀಮ್ ಇಂಡಿಯಾ ಆಟಗಾರರ ಜೊತೆ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಕೂಡ ಪ್ರಯಾಣ ಬೆಳೆಸಿದ್ದಾರೆ.
ಈ ಪಂದ್ಯದ ಬಳಿಕ ಟೀಮ್ ಇಂಡಿಯಾದ ಮುಂದಿನ ಎದುರಾಳಿ ಪಾಕಿಸ್ತಾನ. ಅಕ್ಟೋಬರ್ 14 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಇದೀಗ ಕ್ರಿಕೆಟ್ ಪ್ರೇಮಿಗಳ ಕುತೂಹಲದ ಕೇಂದ್ರವಾಗಿ ಮಾರ್ಪಟ್ಟಿದೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ ಪಾಕ್ ವಿರುದ್ದದ ಪಂದ್ಯಕ್ಕೆ ಟೀಮ್ ಇಂಡಿಯಾ ಸಜ್ಜಾಗಲಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.