ಶುಕ್ರವಾರ, ಮಾರ್ಚ್ 29, 2024
ಬಿಜೆಪಿ-ಜೆಡಿಎಸ್ ಮೈತ್ರಿ ತಾತ್ಕಾಲಿಕವಲ್ಲ, ಮುಂದೆಯೂ ಇರಲಿದೆ; ಕುಮಾರಸ್ವಾಮಿ-ನೀತಿ ಸಂಹಿತೆ ಉಲ್ಲಂಘನೆ ಆರೋಪ ; ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸಮನ್ಸ್ ಜಾರಿ..!-ಬಿಜೆಪಿ ಭದ್ರಕೋಟೆ ಬೆಂಗಳೂರು ದಕ್ಷಿಣಕ್ಕೆ ಪವನ್ ಕಲ್ಯಾಣ್ ಸ್ಟಾರ್ ಪ್ರಚಾರಕ.?-ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಂ.ಬಿ. ಪಾಟೀಲ್, ಪ್ರಿಯಾಂಕ್‌ ಖರ್ಗೆಗೆ ಹೆಚ್ಚುವರಿ ಖಾತೆ‌ ನೀಡಿದ ಸಿಎಂ ಸಿದ್ದರಾಮಯ್ಯ

Twitter
Facebook
LinkedIn
WhatsApp
ಎಂ.ಬಿ. ಪಾಟೀಲ್, ಪ್ರಿಯಾಂಕ್‌ ಖರ್ಗೆಗೆ ಹೆಚ್ಚುವರಿ ಖಾತೆ‌ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಬುಧವಾರ ತಮ್ಮ ಕ್ಯಾಬಿನೆಟ್ ಸಚಿವರಾದ ಪ್ರಿಯಾಂಕ್ ಖರ್ಗೆ (Priyank Kharge) ಮತ್ತು ಎಂ.ಬಿ.ಪಾಟೀಲ್ (MB Patil) ಅವರಿಗೆ ಹೆಚ್ಚುವರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದಾರೆ. 

ಈ ಕುರಿತು ಸಚಿವ ಸಂಪುಟ ವ್ಯವಹಾರಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಸಚಿವಾಲಯ ಹೊರಡಿಸಿದ ಆದೇಶದಲ್ಲಿ ಮಾಹಿತಿ ನೀಡಲಾಗಿದೆ. ಪ್ರಿಯಾಂಕ್ ಖರ್ಗೆ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಜೊತೆಗೆ ಹೆಚ್ಚುವರಿಯಾಗಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (ಐಟಿ ಮತ್ತು ಬಿಟಿ) ಖಾತೆ ಹಂಚಿಕೆ ಮಾಡಲಾಗಿದೆ.

ಎಂಬಿ ಪಾಟೀಲ್ ಅವರಿಗೆ ಈ ಹಿಂದೆ ಮಂಜೂರು ಮಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಜೊತೆಗೆ ಹೆಚ್ಚುವರಿಯಾಗಿ ಮೂಲಸೌಕರ್ಯ ಅಭಿವೃದ್ಧಿ ಖಾತೆ ನೀಡಲಾಗಿದೆ. ಈ ಎರಡೂ ಖಾತೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಇದ್ದವು.

ವರದಿಗಳ ಪ್ರಕಾರ, ಖಾತೆ ಹಂಚಿಕೆಯ ಕರಡು ಪಟ್ಟಿಯಲ್ಲಿ ಐಟಿ ಮತ್ತು ಬಿಟಿಯನ್ನು ಖರ್ಗೆ ಅವರಿಗೆ ನೀಡಲಾಗಿತ್ತು. ಆದರೆ ಈ ಖಾತೆಗಾಗಿ ಪಾಟೀಲ್ ಅವರು ಲಾಬಿ ಮಾಡಿದ್ದರು. ಹೀಗಾಗಿ ಸಿದ್ದರಾಮಯ್ಯ (Siddaramaiah) ಅವರು ಆ ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದರು. ಇದೀಗ ಸಿದ್ದರಾಮಯ್ಯ ಅವರು ಐಟಿ ಮತ್ತು ಬಿಟಿ ಖಾತೆಯನ್ನು ಪ್ರಿಯಾಂಕ್ ಖರ್ಗೆ ಅವರಿಗೇ ನೀಡಿದ್ದಾರೆ. ಸದ್ಯ ಪಾಟೀಲ್ ಅವರನ್ನು ಸಮಾಧಾನಪಡಿಸಿದ್ದಾರೆ ಎನ್ನಲಾಗಿದೆ.

ರಾಮಲಿಂಗಾ ರೆಡ್ಡಿ ಮತ್ತು ಕೆ.ಎಚ್.ಮುನಿಯಪ್ಪ ಅವರಂತಹ ಹಲವು ಸಚಿವರು ಖಾತೆ ಹಂಚಿಕೆ ಬಗ್ಗೆ ಅತೃಪ್ತರಾಗಿದ್ದರು. ಆದರೆ ಅವರ ಖಾತೆಗಳಲ್ಲಿ ಮುಖ್ಯಮಂತ್ರಿಗಳು ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಶನಿವಾರ ಕರ್ನಾಟಕ ಸಚಿವ ಸಂಪುಟವನ್ನು ಭರ್ತಿ ಮಾಡಲಾಗಿತ್ತು. ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರು. ಅದಾದ ಒಂದು ದಿನದ ನಂತರ ಅವರಿಗೆ ಖಾತೆ ಹಂಚಿಕೆ ಮಾಡಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ