ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಿದ್ದಗಂಗಾ ಮಠದ ಹಿಂಭಾಗದ ನೀರಿನ ಗೋಕಟ್ಟೆಯಲ್ಲಿ ಬಿದ್ದು ನಾಲ್ವರು ಸಾವು

Twitter
Facebook
LinkedIn
WhatsApp
ಸಿದ್ದಗಂಗಾ ಮಠದ ಹಿಂಭಾಗದ ನೀರಿನ ಗೋಕಟ್ಟೆಯಲ್ಲಿ ಬಿದ್ದು ನಾಲ್ವರು ಸಾವು

ತುಮಕೂರು: ಸಿದ್ಧಗಂಗಾ ಮಠದ ಗೋ ಕಟ್ಟೆಯಲ್ಲಿ ಇಂದು ಸಂಭವಿಸಿದ್ದ ದುರಂತದಲ್ಲಿ ನಾಲ್ವರು ಸಾವಿಗೀಡಾಗಿದ್ದು, ಇಬ್ಬರ ಶವ ಪತ್ತೆಯಾಗಿದೆ. ಆದರೆ ಇನ್ನಿಬ್ಬರಿಗಾಗಿ ಗಂಟೆಗಟ್ಟಲೆ ಹುಡುಕಾಟ ನಡೆಸಿದರೂ ಅವರ ಸುಳಿವು ಸಿಗಲಿಲ್ಲ.

ಆಪತ್ತಿಗೆ ಸಿಕ್ಕಿದ ಮಗನನ್ನು ರಕ್ಷಿಸಲು ಧುಮುಕಿದ್ದ ತಾಯಿ ಸೇರಿ ನಾಲ್ವರು ನೀರಿನಲ್ಲಿ ಮುಳುಗಿದ್ದು, ಆ ಪೈಕಿ ಇಬ್ಬರ ಶವ ಸಿಕ್ಕಿದೆ. ಸಿದ್ಧಗಂಗಾ ಮಠದಲ್ಲಿ ನೆಲೆಸಿ ವ್ಯಾಸಂಗ ಮಾಡುತ್ತಿದ್ದ ರಂಜಿತ್ ಆಪತ್ತಿಗೆ ಸಿಕ್ಕಿದ್ದ ವಿದ್ಯಾರ್ಥಿ. ಭಾನುವಾರ ರಜೆ ಕಾರಣ ತಾಯಿ ನೋಡಲು ಬಂದಿದ್ದಾಗ ಈ ಪ್ರಕರಣ ನಡೆದಿತ್ತು.

ಮಧ್ಯಾಹ್ನ ಊಟದ ಬಳಿಕ ರಂಜಿತ್ ಮತ್ತು ಸ್ನೇಹಿತರಾದ ಶಂಕರ್, ಹರ್ಷಿತ್, ರಂಜಿತ್ ತಾಯಿ ಲಕ್ಷ್ಮೀ ಹಾಗೂ ಸಹೋದರಿ ಎಲ್ಲರೂ ಸಿದ್ಧಗಂಗಾ ಮಠದ ಗೋ ಕಟ್ಟೆ ಬಳಿ ಜೊತೆಗೇ ಊಟ ಮಾಡಿದ್ದರು. ಊಟದ ಬಳಿಕ ಕೈ ತೊಳೆಯಲು ರಂಜಿತ್ ಗೋ ಕಟ್ಟೆಗೆ ತೆರಳಿದ್ದ. ಆಗ ಆತ ಅಲ್ಲಿ ನೀರಿನಲ್ಲಿ ಕಾಲು ಜಾರಿ ಬಿದ್ದಿದ್ದ. ರಂಜಿತ್​ನನ್ನು ರಕ್ಷಿಸಲು ಹರ್ಷಿತ್, ಶಂಕರ್ ನೀರಿಗೆ ಹಾರಿದ್ದರು. ಆ ಮೂವರಿಗೆ ಅಪಾಯ ಆಗುವ ಸಾಧ್ಯತೆ ಇದ್ದಿದ್ದರಿಂದ ರಂಜಿತ್ ತಾಯಿ ಲಕ್ಷ್ಮೀ ಹಾಗೂ ಇನ್ನೊಬ್ಬ ಪಾಲಕ ಮಹದೇವಪ್ಪ ಕೂಡ ನೀರಿಗೆ ಧುಮುಕಿದ್ದರು.

ಆದರೆ ಮೊದಲಿಗೆ ಅಪಾಯಕ್ಕೆ ಸಿಲುಕಿದ್ದ ರಂಜಿತ್ ಪ್ರಾಣಾಪಾಯದಿಂದ ಪಾರಾಗಿದ್ದು, ಉಳಿದ ಮೂವರು ನೀರಿನಲ್ಲಿ ಮುಳುಗಿ ಸಾವಿಗೀಡಾದರು. ಲಕ್ಷ್ಮೀ ಹಾಗೂ ಹರ್ಷಿತ್ ಮೃತದೇಹವನ್ನು ಹೊರ ತೆಗೆದಿರುವ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸತತ ಆರು ಗಂಟೆಗಳಿಂದ ಶೋಧಕಾರ್ಯ ನಡೆಸಿದರೂ ಮಹದೇವಪ್ಪ ಹಾಗೂ ಶಂಕರ್​ ಸುಳಿವು ಸಿಕ್ಕಿಲ್ಲ. ಮೂರು ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ರಾತ್ರಿಯಾದ್ದರಿಂದ ಶೋಧಕಾರ್ಯ ಸ್ಥಗಿತಗೊಳಿಸಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಗೆ ಮತ್ತೆ ಶೋಧಕಾರ್ಯ ಆರಂಭವಾಗಲಿದೆ.

ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಹೆಸ್ಕಾಂ ಗುತ್ತಿಗೆ ನೌಕರ ಸಾವು

ಚಿಕ್ಕೋಡಿ: ದುರಸ್ತಿ ಕಾರ್ಯ ಮಾಡುತ್ತಿದ್ದ ವೇಳೆ ವಿದ್ಯುತ್ (Electricity) ಪ್ರವಹಿಸಿ ಕಂಬದ ಮೇಲೆಯೇ ಹೆಸ್ಕಾಂ (HESCOM) ಗುತ್ತಿಗೆ ನೌಕರ ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಜಿಲ್ಲೆ ಚಿಕ್ಕೋಡಿಯ (Chikkodi) ಹೊಸಪೇಟೆ ಗಲ್ಲಿಯಲ್ಲಿ ನಡೆದಿದೆ.

ಚಿಕ್ಕೋಡಿಯ ದಫೇದರ್‌ಕೋಡಿ ನಿವಾಸಿ ಸಿದ್ದರಾಮ ಕುಪವಾಡೆ (38) ಮೃತ ನೌಕರ. ವಿದ್ಯುತ್ ಕಂಬದ ಮೇಲೆ ದುರಸ್ತಿ ಮಾಡುವ ವೇಳೆ ಅವಘಡ ಸಂಭವಿಸಿದೆ. 

ದುರಸ್ತಿ ಕಾರ್ಯಕ್ಕಾಗಿ ಲೈನ್‌ಮೆನ್‌ವೊಬ್ಬ ಗುತ್ತಿಗೆ ಆಧಾರದ ಮೇಲೆ ಸಿದ್ದರಾಮನನ್ನ ಕೆಲಸಕ್ಕೆ ಕರೆ ತಂದಿದ್ದ. ಹೊಸಪೇಟೆ ಗಲ್ಲಿ ಹೊರವಲಯದ ಕೃಷಿ ಜಮೀನು ಬಳಿಯ ವಿದ್ಯುತ್ ಕಂಬ ಏರಿ ಸಿದ್ದರಾಮಯ್ಯ ದುರಸ್ತಿ ಕೆಲಸ ಮಾಡುತ್ತಿದ್ದ. ದುರಸ್ತಿ ಕೆಲಸಕ್ಕೆ ಬಂದಿದ್ದ ಮೂವರಲ್ಲಿ ಉಳಿದ ಇಬ್ಬರು ಕೆಳಗೆ ನಿಂತಿದ್ದರು. ಈ ವೇಳೆ ವಿದ್ಯುತ್ ಪ್ರವಹಿಸಿ ಸಿದ್ದರಾಮ ಕುಪವಾಡೆ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು, ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ವ್ಯಕ್ತಿಯನ್ನ ಕೆಲಸಕ್ಕೆ ತಂದಿದ್ದ ಹೆಸ್ಕಾಂ ಲೈನ್‌ಮೆನ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಮೃತನಿಗೆ ಸೂಕ್ತ ಪರಿಹಾರ ಕೊಡುವಂತೆ ಸಿದ್ದರಾಮ ಕುಟುಂಬಸ್ಥರು ಆಗ್ರಹಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist