ಗೃಹಜ್ಯೋತಿ ಯೋಜನೆ ನಿಯಮದಲ್ಲಿ ಮಹತ್ವದ ಬದಲಾವಣೆ; ಶೇಕಡವಾರು ಬದಲಾಗಿ 10 ಯುನಿಟ್ ಫ್ರೀ!!
ಬೆಂಗಳೂರು, (ಜನವರಿ 18): ಕಾಂಗ್ರೆಸ್ ಸರ್ಕಾರ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ (gruha jyothi scheme) ನಿಯಮದಲ್ಲಿ ಮಹತ್ವದ ಬದಲಾವಣೆಯಾಗಿದೆ. ಶೇಕಡವಾರು 10ರಷ್ಟು ಬದಲು 10 ಯುನಿಟ್ ಫ್ರೀ ವಿದ್ಯುತ್ ನೀಡಲು ಇಂದು ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದಾರೆ.
ಈ ಮೊದಲು ಗೃಹ ಜ್ಯೋತಿ ಯೋಜನೆ ಅಡಿ ಬಳಸಿದ ಯುನಿಟ್ಗಿಂತ ಶೇ. 10ರಷ್ಟು ರಿಯಾಯಿತಿ ನೀಡಲಾಗಿತ್ತು. ಇದೀಗ ಶೇಕಡವಾರು ಬದಲಾಗಿ 10 ಯುನಿಟ್ ನೀಡಲು ಸರ್ಕಾರ ತೀರ್ಮಾನಿಸಿದ್ದು, ಈ ಬಗ್ಗೆ ಇಂದು(ಜನವರಿ 18) ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ.
4450 ಕೋಟಿ ರೂಪಾಯಿ ಸಾಲಕ್ಕೆ ಸರ್ಕಾರಿ ಖಾತರಿ
ಇನ್ನು ಕರ್ನಾಟಕ ವಿದ್ಯುತ್ ನಿಗಮ ಪಡೆದಿದ್ದ 4450 ಕೋಟಿ ರೂಪಾಯಿ ಸಾಲಕ್ಕೆ ಸರ್ಕಾರಿ ಖಾತರಿ ನೀಡಲು ಸಂಪುಟ ನಿರ್ಧರಿಸಿದೆ. ಹಲವು ವರ್ಷಗಳಿಂದ ಪಡೆದಿದ್ದ ಸಾಲಕ್ಕೆ ಒಳಹರಿವಿನ ಕೊರತೆಯಿದೆ. ಶ್ಯೂರಿಟಿ ನೀಡಬೇಕೆಂದು ಸರ್ಕಾರಕ್ಕೆ ವಿದ್ಯುತ್ ನಿಗಮ ಮನವಿ ಮಾಡಿತ್ತು. ಹೀಗಾಗಿ ಸರ್ಕಾರ ಇದೀಗ 4450 ಕೋಟಿ ರೂ. ಸಾಲಕ್ಕೆ ಖಾತರಿ ನೀಡಲು ತೀರ್ಮಾನಿಸಿದೆ ಎಂದು ಎಚ್ಕೆ ಪಾಟೀಲ್ ಮಾಹಿತಿ ನೀಡಿದರು.
ವಿದ್ಯುತ್ ಸರಬರಾಜು ಕಂಪನಿಗಳು ಯಪಿಸಿಎಲ್ ನವರಿಗೆ ಪಾವತಿಸಬೇಕಾದ ವಿವಾದಿತ ಮೊತ್ತದ ಕುರಿತು ಚರ್ಚೆಯಾಗಿದೆ. ಹಾಗೇ ಸೆಂಟ್ರಲ್ ಇಆರ್.ಸಿಯವರ ಆದೇಶದ ಕುರಿತು ಚರ್ಚೆಯಾಗಿದ್ದು, ವಿವಿಧ ಭಿನ್ನ ಕಾನೂನು ಅಭಿಪ್ರಾಯಗಳು ವ್ಯಕ್ತವಾಗಿದೆ. ಲೇಟ್ ಪೇಮೆಂಟ್ ಸರ್ಚಾರ್ಜ್ 1348 ಕೋಟಿ + 419 ಕೋಟಿ ರೂ. ನೀಡಬೇಕಾಗಿದೆ. ಈ ಬಗ್ಗೆ ಮುಂದಿನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ವಿವರಿಸಿದರು.
ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲ್ಲವೆಂದು ಹಾಸನ ಅಭ್ಯರ್ಥಿಯ ಸುಳಿವು ನೀಡಿದ ದೇವೇಗೌಡ
ಹಾಸನ, (ಜನವರಿ 18): ಮುಂದಿನ ಲೋಕಸಭಾ ಚುನಾವಣೆಯಲ್ಲಿ (Loksabha Elections 2024)ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ (HD Devegowda) ಮತ್ತೊಮ್ಮೆ ಘೋಷಣೆ ಮಾಡಿದ್ದಾರೆ. ಹಾಸನ (Hassan) ಜಿಲ್ಲೆಯ ಬೇಲೂರಿನಲ್ಲಿಂದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ದೇವೇಗೌಡ, ಕೆಲವರು ದೇವೇಗೌಡರು ನಿಲ್ಲಬೇಕು ಅಂತಾರೆ.ಆದ್ರೆ, ನಾನು ಈಗಾಗಲೆ ಹೇಳಿದ್ದು, ಎಲ್ಲೂ ನಿಲ್ಲುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೇ ಓರ್ವ ಯುವಕನನ್ನು ಮುಂದಿನ ಚುನಾವಣೆಯಲ್ಲಿ ಗೆಲ್ಲಿಸಿ ಎಂದು ಮನವಿ ಮಾಡಿದರು. ಈ ಮೂಲಕ ಪರೋಕ್ಷವಾಗಿ ಮತ್ತೊಮ್ಮೆ ಪ್ರಜ್ವಲ್ ರೇವಣ್ಣ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ವ್ಹೀಲ್ ಚೇರ್ ನಲ್ಲಿ ಬಂದು ಚನ್ನಕೇಶವ ನ ದರ್ಶನ ಪಡೆದು ಕೊಂಡಿದ್ದೇನೆ. ಈ ರಾಷ್ಟದ ಚುನಾವಣೆ ತುಂಬಾ ವಿಭಿನ್ನವಾಗಿದೆ. ನಿಮ್ಮ ಇಷ್ಡು ವರ್ಷ ದ ರಾಜಕೀಯ ಜೀವನದಲ್ಲಿ ಜಾತ್ಯಾತೀತ ತತ್ವದಡಿ ಕೆಲಸ ಮಾಡಿದ್ರಿ. ಆದರೆ ಕೊನೆಯ ಘಟ್ಟದಲ್ಲಿ ಯಾಕೆ ಮಾರ್ಪಾಡು ಅಂತಾ ಕೇಳ್ತಾರೆ. ಹೌದು ಮಾರ್ಪಾಡು ಮಾಡಿದ್ದೇನೆ. ನಾನು ಮೊಮ್ಮಗನ ಗೆಲ್ಲಿಸಿ ಅಂತಾ ಬಂದಿಲ್ಲ. ಈ ಜಿಲ್ಲೆಯ ಅಭಿವೃದ್ಧಿಗಾಗಿ ಬಂದಿದ್ದೇನೆ. ದೇವೇಗೌಡರು ದೇವೇಗೌಡರ ಮಕ್ಕಳು ಯಾರಿಗೆ ಅನ್ಯಾಯ ಮಾಡಿದ್ದೇವೆ ಹೇಳಿ ಎಂದು ತಮ್ಮ ಕುಟುಂಬದ ವಿರುದ್ಧದ ಟೀಕೆಗೆ ತಿರುಗೇಟು ನೀಡಿದರು.